ಅನುದಾನಿತ ಪಿಯು ಕಾಲೇಜು ನೌಕರರಿಗೆ ಸೇವಾ ಭದ್ರತೆ ನೀಡಿ:ಚಿತ್ರದುರ್ಗದಲ್ಲಿ ಮನವಿ ಸಲ್ಲಿಕೆ.

ಚಿತ್ರದುರ್ಗ ನ. 26

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಕರ್ನಾಟಕ ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರಿಗೆ ಆಂಧ್ರಪ್ರದೇಶ ಸರ್ಕಾರದ ಮಾದರಿಯಲ್ಲಿ ಸೇವಾ ಭದ್ರತೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ಮನವಿಯನ್ನು ಕರ್ನಾಟಕ ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘ ಮಂಗಳವಾರ ಸಂಜೆ ಸಲ್ಲಿಸಿತು.

ಕರ್ನಾಟಕ ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘ(ರಿ) ಕರ್ನಾಟಕ ಸರ್ಕಾರದ ಆದೇಶದಂತೆ, ಕರ್ನಾಟಕ ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕನಿಷ್ಠ ವಿದ್ಯಾರ್ಥಿಗಳ ಸಂಖ್ಯೆ ಪ್ರತಿ ಅನುದಾನಿತ ವಿಭಾಗಕ್ಕೆ 40 ಇರಬೇಕು. ಅದಕ್ಕಿಂತ ಕಡಿಮೆ ಇದ್ದರೆ, ಅಂತಹ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಅನುದಾನಿತ ನೌಕರರ ವೇತನ ತಡೆಹಿಡಿಯುವುದು ಮತ್ತು ಅಂತಹ ಅನುದಾನಿತ ಕಾಲೇಜಿನ ಅನುದಾನವನ್ನು ನಿಲ್ಲಿಸಲು ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದೆ. ಇದು ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರಿಗೆ ಅತ್ಯಂತ ತೊಂದರೆಯನ್ನು ಉಂಟುಮಾಡುತ್ತಿದೆ. ಪದವಿ ಪೂರ್ವ ಕಾಲೇಜುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿವೆ. ಇದರ ಪರಿಣಾಮವಾಗಿ, ಅನುದಾನಿತ ಪದವಿ ಪೂರ್ವ ಕಾಲೇಜುಗಳಲಿ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿದೆ. ಈ ಕಾರಣದಿಂದ ರಾಜ್ಯದ ಅನೇಕ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಅನುದಾನಿತ ವಿಧಾನಗಳಿಗೆ ಕನಿಷ್ಠ ದಾಖಲಾತಿ 40 ವಿದ್ಯಾರ್ಥಿಗಳು ದಾಖಲಾಗುವುದು ಕಷ್ಟಸಾಧ್ಯವಾಗಿದೆ ಎಂದಿದ್ದಾರೆ.

ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಸಿ, ಸೇವಾ ಭದ್ರತೆಯನ್ನು ನೀಡಬೇಕು. ಯಾವ ಕಾಲೇಜುಗಳಲ್ಲಿ ಅನುದಾನಿತ ವಿಭಾಗಕ್ಕೆ ಕನಿಷ್ಠ ದಾಖಲಾತಿ 40ಕ್ಕಿಂತ ಕಡಿಮೆ ಹಾಗೂ ಕಾರ್ಯಭಾರ 20 ಗಂಟೆಗಳಿಗಿಂತ ಕಡಿಮೆ ಇದೇಯೋ ಅಂತಹ ನೌಕರರನ್ನು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ನಿಯೋಜನೆ ಅಥವಾ ವೀಲಿನ ಗೊಳಿಸಬೇಕು, ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಒಂದು ಸಂಯೋಜನೆಗೆ ಕನಿಷ್ಠದಾಖಲಾತಿಯ ಮಿತಿಯನ್ನು 40 ರಿಂದ 20ಕ್ಕೆ ಇಳಿಸಬೇಕು, ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಇರುವಂತೆ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ವಿಸ್ತರಣೆ ಮಾಡಬೇಕು, ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರಿಗೆ ಕರ್ನಾಟಕ ಸರ್ಕಾರವೇ ವೇತನ ಅನುದಾನ ನೀಡುತ್ತಿರುವುದರಿಂದ, ಈ ಮೇಲ್ಕಂಡ ಬೇಡಿಕೆಗಳನ್ನು ಈಡೇರಿಸುವುದರಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ, ಆದ್ದರಿಂದ ನಮ್ಮ ಈ ಪ್ರಮುಖ ಬೇಡಿಕೆಗಳನ್ನು ಈಡೇರಿಸಿ ಕೊಡುವ ಮೂಲಕ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಹಿತ ಕಾಪಾಡಬೇಕೆಂದು ಮನವಿ ಮಾಡಲಾಯಿತು.

ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘ (ರಿ)ದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಖಂಜಾಚಿ ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಿದ್ದರು.

Views: 25

Leave a Reply

Your email address will not be published. Required fields are marked *