ಕರ್ನಾಟಕ, ಕನ್ನಡಿಗರನ್ನು ಅವಮಾನಿಸುವ ಉದ್ದೇಶವಿರಲಿಲ್ಲ. ನನ್ನ ಮಾತಿನಿಂದ ಯಾರಿಗಾದ್ರೂ ನೋವಾಗಿದ್ದರೆ ಕ್ಷಮೆಯಾಚಿಸುವೆ ಎಂದು ಕೊನೆಗೂ ಕನ್ನಡಿಗರಿಗೆ ಫೋನ್ಪೇ ಸಿಇಒ ಸಮೀರ್ ನಿಗಂ ಕ್ಷಮೆಯಾಚಿಸಿದ್ದಾರೆ.

ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ, ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪೈಕಿ ಫೋನ್ ಪೇ ಕಂಪನಿ ಸಿಇಒ ಸಮೀರ್ ನಿಗಮ್ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಕರ್ನಾಟಕ, ಕನ್ನಡಿಗರ ಬಗ್ಗೆ ಕುಹುಕವಾಡಿದ್ದರು. ಹೀಗಾಗಿ ಬಾಯ್ಕಾಟ್ ಬಿಸಿ ಮುಟ್ಟಿಸಿದ್ದರು. ಇದೀಗ ಸಮಸ್ತ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಫೋನ್ ಪೇ ಸಿಇಒ ಸಮೀರ್ ನಿಗಮ್, ಕರ್ನಾಟಕ, ಕನ್ನಡಿಗರನ್ನು ಅವಮಾನಿಸುವ ಉದ್ದೇಶವಿರಲಿಲ್ಲ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ, ಯಾರದ್ದಾದರೂ ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕ್ಷಮೆಯಾಚಿಸುವೆ. ಸಮಸ್ತ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸುತ್ತೇನೆಂದು ಹೇಳಿದ್ದಾರೆ.