ಚಿತ್ರದುರ್ಗ ಸೆ. 1
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಮ್ಯಾನೇಜರ್ ಆಗಿ ನಿವೃತ್ತಿ ಹೊಂದಿದ ಸೈಯದ್ ಅಫಾಖ್ ಅಹಮದ್ ಕಾಂಗ್ರೆಸ್ ಪಕ್ಷವನ್ನು ತೊರೆದು ಮಂಗಳವಾರ ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಸಮಾಜವಾದಿ ಪಾರ್ಟಿಗೆ ಸೇರ್ಪಡೆಯಾದರು.
ಅಫಾಖ್ ಅಹಮದ್ ಸಮಾಜವಾದಿ ಪಾರ್ಟಿಗೆ ಬರಮಾಡಿಕೊಂಡು ಮಾತನಾಡಿದ ಜಿಲ್ಲಾಧ್ಯಕ್ಷ ಎಸ್.ಲಕ್ಷ್ಮಿಕಾಂತ್ ಮುಲಾಯಂಸಿಂಗ್ ಯಾದವ್ ರವರು 1994 ರಲ್ಲಿ ಸಮಾಜವಾದಿ ಪಾರ್ಟಿಯನ್ನು ಹುಟ್ಟುಹಾಕಿ ರಾಜ್ಯಾದ್ಯಂತ ಸೈಕಲ್‍ನಲ್ಲಿ ಸಂಚರಿಸಿ ಪಾರ್ಟಿಯನ್ನು ಸಂಘಟನೆಗೊಳಿಸಿದರು. ಅವರ ಪುತ್ರ ಅಖಿಲೇಶ್ಯಾದವ್ ಉತ್ತರಪ್ರದೇಶದಲ್ಲಿ 37 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವುದು ಸಮಾಜವಾದಿ ಪಾರ್ಟಿಯ ಮೂಲ ಉದ್ದೇಶ ಎಂದು ತಿಳಿಸಿ ಕೇಂದ್ರದಲ್ಲಿರುವ ಬಿಜೆಪಿ. ಸರ್ಕಾರ ಲೂಟಿ ಹೊಡೆಯುತ್ತಿದೆ. ನೀಟ್ ಪರೀಕ್ಷೆಯಲ್ಲಿನ ಅಕ್ರಮದಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಶ್ರೀಮಂತರ ಪರವಾಗಿರುವ ಬಿಜೆಪಿ.ಯನ್ನು ಕಿತ್ತೊಗೆದು ಮುಂದಿನ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿ ಕೇಂದ್ರದಲ್ಲಿ ಗದ್ದುಗೆ ಹಿಡಿಯಲಿದೆ ಎಂದು ಭವಿಷ್ಯ ನುಡಿದರು.
ಸಮಾಜವಾದಿ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಡಿ.ಗುರುಮೂರ್ತಿ ಮಾತನಾಡಿ ಜಿಲ್ಲೆಯ ಮೂರು ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿರುವ ರಾಜ್ಯ ಸರ್ಕಾರ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮುರು ತಾಲ್ಲೂಕನ್ನು ಬರಪೀಡಿತವೆಂದು ಘೋಷಿಸದೆ ರೈತರಿಗೆ ಅನ್ಯಾಯವೆಸಗುತ್ತಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಸೇರಿದಂತೆ ನಮ್ಮ ಜಿಲ್ಲೆಯ ಮೂರು ತಾಲ್ಲೂಕುಗಳನ್ನು ಕೂಡಲೆ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಇಲ್ಲವಾದಲ್ಲಿ ವಿಧಾನಸೌಧಕ್ಕೆ ಅಭಿಯಾನ ಹೊರಡಲಾಗುವು ದೆಂದು ಎಚ್ಚರಿಸಿದರು.
ಸಮಾಜವಾದಿ ಪಾರ್ಟಿಗೆ ಸೇರ್ಪಡೆಯಾಗಿ ಮಾತನಾಡಿದ ಸೈಯದ್ ಅಫಾಖ್ ಅಹಮದ್ ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಾನಾ ರೀತಿಯ ಹುದ್ದೆಗಳನ್ನು ನಿರ್ವಹಿಸಿದ್ದು, ನಾನಾ ನಿಗಮ ಮಂಡಳಿಗಳಿಗೆ ನೇಮಕ ಮಾಡುವಂತೆ ಹಾಗೂ ವಿಧಾನ ಪರಿಷತ್‍ಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಲಾಗಿತ್ತು. ಆದರೆ ಅವರಿಂದ ಸ್ಪಂದನೆ ವ್ಯಕ್ತವಾಗಲಿಲ್ಲ. ಅಲ್ಲದೇ ಡಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಅರ್ಜಿ ಸಲ್ಲಿಸಿದ್ದು ಪರಿಗಣಿಸಿಲ್ಲ. ಇದರಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿ ಸಮಾಜವಾದಿ ಪಾರ್ಟಿಯ ತತ್ವ ಸಿದ್ದಾಂತ ಒಪ್ಪಿ ಸೇರ್ಪಡೆಯಾಗಿದ್ದೇನೆಂದು ಹೇಳಿದರು.
ಸಮಾಜವಾದಿ ಪಾರ್ಟಿ ಎಸ್ಸಿ. ಘಟಕದ ಅಧಕ್ಷ ರವಿ ಟಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮೆಹಬೂಬ್ ಬಾಷ ಹಾಜರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j