Poonam Pandey Death: ಪೂನಂ ಪಾಂಡೆ ನಿಧನ; ಕ್ಯಾನ್ಸರ್​ಗೆ ಬಲಿಯಾದ ಬಾಲಿವುಡ್ ನಟಿ.

Poonam Pandey Death News: ಪೂನಂ ಶುಕ್ರವಾರ (ಫೆಬ್ರವರಿ 2) ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ. ಕ್ಯಾನ್ಸರ್​ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ.

ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ (Poonam Pandey) ಅವರು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದವರು. ಅವರು ಮಾಡಿಕೊಂಡ ವಿವಾದಗಳು ಹಲವು. ಈಗ ಅವರು ಶುಕ್ರವಾರ (ಫೆಬ್ರವರಿ 2) ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ. ಕ್ಯಾನ್ಸರ್​ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಕೇವಲ 32 ವರ್ಷ ವಯಸ್ಸಾಗಿತ್ತು. ಇದು ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.

ಪೂನಂ ಪಾಂಡೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ. ‘ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್​ನಿಂದ ನಮ್ಮ ಪ್ರೀತಿಯ ಪೂನಂ ಅವರನ್ನು ಕಳೆದುಕೊಂಡಿದ್ದೇವೆ. ಈ ದುಃಖದ ಸಂದರ್ಭದಲ್ಲಿ ನಮಗೆ ಪ್ರೈವಸಿ ನೀಡಿ’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ಪೂನಂ ಪಾಂಡೆ ಅವರು 2013ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ನಶಾ’ ಅವರ ನಟನೆಯ ಮೊದಲ ಸಿನಿಮಾ. ‘ಲವ್ ಈಸ್ ಪಾಯಿಸನ್’ ಹೆಸರಿನ ಕನ್ನಡ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದರು. ತೆಲುಗು, ಬೋಜ್​ಪುರಿ ಸಿನಿಮಾಗಳಲ್ಲಿ ಪೂನಂ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆದ ‘ದಿ ಜರ್ನಿ ಆಫ್ ಕರ್ಮ’ ಸಿನಿಮಾದಲ್ಲಿ ಅವರು ನಟಿಸಿದ್ದರು. ಆ ಬಳಿಕ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿಲ್ಲ.

ಪೂನಂ ಪಾಂಡೆ ಪೋಸ್ಟ್​..

https://www.instagram.com/p/C21T9Hcoobz/?utm_source=ig_embed&ig_rid=d3e3bb09-2d49-4af7-8525-6fcc17c7dd15

ಯಾಲಿಟಿ ಶೋಗಳಲ್ಲೂ ಪೂನಂ ಕಾಣಿಸಿಕೊಂಡಿದ್ದಾರೆ. 2022ರಲ್ಲಿ ಪ್ರಸಾರ ಕಂಡ ‘ಲಾಕ್​ಅಪ್​’ ಶೋನಲ್ಲಿ ಸ್ಪರ್ಧಿ ಆಗಿ ಪೂನಂ ಕಾಣಿಸಿಕೊಂಡಿದ್ದರು. ಅವರು ಏಳನೇ ಸ್ಥಾನದಲ್ಲಿ ಎಲಿಮಿನೇಟ್ ಆದರು. ಹಲವು ವಿವಾದಗಳನ್ನು ಕೂಡ ಅವರು ಮಾಡಿಕೊಂಡಿದ್ದರು. ಈಗ ಅವರು ನಿಧನ ಹೊಂದಿದರು ಎಂದರೆ ಅದನ್ನು ನಂಬೋಕೆ ಫ್ಯಾನ್ಸ್​ಗೆ ಆಗುತ್ತಿಲ್ಲ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *