ರುಚಿಕರವಾದ ಆಲೂ ಪಾಲಕ್ ಕಟ್ಲೆಟ್ ಮಾಡುವ ವಿಧಾನ…

ಬೇಕಾಗುವ ಪದಾರ್ಧಗಳು…
- ಆಲೂಗಡ್ಡೆ – 2
- ಪಾಲಕ್ ಸೊಪ್ಪು – 1 ಬಟ್ಟಲು
- ಈರುಳ್ಳಿ – 1
- ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಚಮಚ
- ಜೀರಿಗೆ – 1/4 ಚಮಚ
- ಗರಂ ಮಸಾಲಾ – 1 ಚಮಚ
- ಅರಿಶಿನ ಪುಡಿ – ಒಂದು ಚಿಟಿಕೆ
- ಅಕ್ಕಿ ಹಿಟ್ಟು – 1 ಚಮಚ
- ಮೆಣಸಿನ ಪುಡಿ – 1 ಚಮಚ
- ಉಪ್ಪು – ರುಚಿಗೆ ತಕ್ಕಷ್ಟು
- ಎಣ್ಣೆ – ಅಗತ್ಯಕ್ಕೆ ತಕ್ಕಷ್ಟು
ಮಾಡುವ ವಿಧಾನ…
- ಮೊದಲು ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಒಂದು ಕುಕ್ಕರ್’ಗೆ ಹಾಕಿ. ನಂತರ ನೀರು ಹಾಕಿ ಬೇಯಿಸಿಕೊಳ್ಳಿ. ನಂತರ ಅವುಗಳ ಸಿಪ್ಪೆಯನ್ನು ತೆಗೆಯಿರಿ. ಪಕ್ಕಕ್ಕೆ ಇಡಿ.
- ಈಗ ಈರುಳ್ಳಿ ಮತ್ತು ಪಾಲಕ್ ಸೊಪ್ಪನ್ನು ತೊಳೆದು ಸಣ್ಣದಾಗಿ ಹೆಚ್ಚಿಕೊಳ್ಳಿ.
- ಅಗಲವಾದ ಬಾಣಲೆಯನ್ನು ತೆಗೆದುಕೊಂಡು ಅದಕ್ಕೆ ಆಲೂಗಡ್ಡೆಯನ್ನು ಹಾಕಿ ಚೆನ್ನಾಗಿ ಮ್ಯಾಶ್ ಮಾಡಿ.
- ನಂತರ ಸಣ್ಣಗೆ ಹೆಚ್ಚಿದ ಈರುಳ್ಳಿ, ಪಾಲಕ್, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಜೀರಿಗೆ, ಗರಂ ಮಸಾಲ, ಅರಿಶಿನ ಪುಡಿ, ಮೆಣಸಿನ ಪುಡಿ, ಅಕ್ಕಿ ಹಿಟ್ಟು, ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ.
- ಕಟ್ಲೆಟ್‌ಗಳನ್ನು ಕರಿಯಲು ದೊಡ್ಡ ಬಾಣಲೆಯನ್ನು ಒಲೆಯ ಮೇಲೆ ಇಟ್ಟು, ಅದಕ್ಕೆ ಬೇಕಾದಷ್ಟು ಎಣ್ಣೆ ಹಾಕಿ ಕಾಯಲು ಬಿಡಿ.
- ಎಣ್ಣೆ ಚೆನ್ನಾಗಿ ಕಾಯುತ್ತಿದ್ದಂತೆ ತಯಾರಾದ ಕಟ್ಲೆಟ್ ಮಿಶ್ರಣವನ್ನು ಬೇಕಾದ ಆಕಾರದಲ್ಲಿ ಮಾಡಿಕೊಂಡು ಎಣ್ಣೆಗೆ ಹಾಕಿ ಕಂದು ಬಣ್ಣ ಬರುವವರೆಗೆ ಕರಿಯಿರಿ. ಇದೀಗ ಬಿಸಿಬಿಸಿ ಆಲೂ ಪಾಲಕ್ ಕಟ್ಲೆಟ್ ಸವಿಯಲು ಸಿದ್ಧ.
Source : https://www.kannadaprabha.com/food/2023/nov/21/recipe-aloo-palak-cutlet-506728.html
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1