ಪ್ರಕೃತಿ ಆಯುರ್ವೇದ ಮೆಡಿಕಲ್ ಕಾಲೇಜಿಗೆ BAMS ಫಲಿತಾಂಶದಲ್ಲಿ ಭರ್ಜರಿ ಸಾಧನೆ

ಮೇ 01:

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್


ದೇವರಾಜ್ ಅರಸು ಎಜುಕೇಶನ್ ಸೊಸೈಟಿ (Devaraj Urs Education Society) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಕೃತಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ – BAMS ಫಲಿತಾಂಶದಲ್ಲಿ ಭರ್ಜರಿ ಸಾಧನೆ
ದೇವರಾಜ್ ಉರ್ಸ್ ಎಜುಕೇಶನ್ ಸೊಸೈಟಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಕೃತಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಚಿತ್ರದುರ್ಗವು 2026ರ ಏಪ್ರಿಲ್ ತಿಂಗಳ ಪ್ರಥಮ ವರ್ಷದ BAMS ಪರೀಕ್ಷಾ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ.

ಈ ಬಾರಿ ಕಾಲೇಜು ಒಟ್ಟು 80% ಫಲಿತಾಂಶ ಸಾಧಿಸಿದ್ದು, ಒಟ್ಟು ವಿದ್ಯಾರ್ಥಿಗಳಲ್ಲಿ 16 ಮಂದಿ ಡಿಸ್ಟಿಂಕ್ಷನ್ ಹಾಗೂ 24 ಮಂದಿ ಫಸ್ಟ್ ಕ್ಲಾಸ್ ಗಳಿಸಿದ್ದಾರೆ. ಡಿಸ್ಟಿಂಕ್ಷನ್ ಮತ್ತು ಫಸ್ಟ್ ಕ್ಲಾಸ್ ಪಡೆದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಇದೇ ಸಾಧನೆಯನ್ನು ಮತ್ತಷ್ಟು ಹೆಮ್ಮೆಯನ್ನಾಗಿಸುವಂತೆ, ವಿದ್ಯಾರ್ಥಿಗಳಲ್ಲಿ ಸಿಮ್ರಾನ್ ಬೇಗಂ 80.41%, ಯಶವಂತ್ ಎ ಎನ್ 80.00% ಹಾಗೂ ಶ್ರುಂಗ ಬಿ ಎಸ್ 79.05% ಅಂಕಗಳನ್ನು ಪಡೆದು ಕಾಲೇಜಿನ ಟಾಪ್ ಸಾಧಕರಾಗಿ ಹೊರಹೊಮ್ಮಿದ್ದಾರೆ.


ಈ ಮಹತ್ತರ ಸಾಧನೆಗೆ ಸಂಸ್ಥೆಯ ಗೌರವಾನ್ವಿತ ಕಾರ್ಯದರ್ಶಿ ಡಾ. ಎಂ. ಚಂದ್ರಪ್ಪ, ಆಡಳಿತಾಧಿಕಾರಿ ಶ್ರೀಮತಿ ಚಂದ್ರಕಲಾ, ಸಿಇಒ ಶ್ರೀ ಎಂ. ಸಿ. ರಘುಚಂದನ್ ಹಾಗೂ ಪ್ರಿನ್ಸಿಪಾಲ್ ಅವರ ಮಾರ್ಗದರ್ಶನ ಮತ್ತು ಬೆಂಬಲ ಪ್ರಮುಖ ಕಾರಣವಾಗಿದ್ದು, ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರ ಪರಿಶ್ರಮ, ಸಮರ್ಪಣೆ ಮತ್ತು ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ.


ಕಾಲೇಜು ಎಲ್ಲಾ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುತ್ತದೆ.

Leave a Reply

Your email address will not be published. Required fields are marked *