ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಡಾನ್ ಬಾಸ್ಕೋ ಶಾಲೆಯ ಪ್ರಶಾಂತ್ ಎಲ್.

ವಿಜಯವಾಣಿ ದಿನಪತ್ರಿಕೆ, ಅರಣ್ಯ ಇಲಾಖೆ ಹಾಗೂ ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಿನಾಂಕ : 11 : 06 : 2024ರಂದು ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಶಾಲಾ ಅವರಣದಲ್ಲಿ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಚಿತ್ರಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಚಿತ್ರದುರ್ಗ : ನಗರದ ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಶಾಲಾ ಅವರಣದಲ್ಲಿ ಏರ್ಪಡಿಸಲಾಗಿದ್ದ  ಚಿತ್ರಕಲಾ ಸ್ಪರ್ಧೆಯಲ್ಲಿ ಡಾನ್‌ಬೋಸ್ಕೊ ಕನ್ನಡ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ  ಪ್ರಶಾಂತ್‌ .ಎಲ್  ಇವರು ಪ್ರಥಮ ಸ್ಥಾನ ಪಡೆದಿರುತ್ತಾರೆ.

ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಯ ಈ ಸಾಧನೆಯನ್ನು ಶಾಲೆಯ ಆಡಳಿತ ಮಂಡಳಿಯ ಮುಖ್ಯಸ್ಥರಾದ ರೆ.ಫಾ. ಸಜಿ ಜಾರ್ಜ್‌, ಆಡಳಿತಾಧಿಕಾರಿಗಳಾದ ರೆ.ಫಾ.ಜಾನ್‌ಪಾಲ್, ಶಾಲೆಯ ಪ್ರಾಂಶುಪಾಲರಾದ ಶ್ರೀ ಬಸವಂತ ಕುಮಾರ್‌ ಹಾಗೂ ಶಿಕ್ಷಕವೃಂದದವರು ಹಾರ್ದಿಕವಾಗಿ ಅಭಿನಂದಿಸಿರುತ್ತಾರೆ. ವಿದ್ಯಾರ್ಥಿಯನ್ನು ಚಿತ್ರಕಲಾ ಸ್ಪರ್ಧೆಗೆ ತಯಾರು ಮಾಡಿದ ಶಾಲೆಯ ಚಿತ್ರಕಲಾ ಶಿಕ್ಷಕರಾದ  ವೈ. ಹೆಚ್. ಶಿವಕುಮಾರ್‌ರವರನ್ನು ಹೃದಯಪೂರ್ವಕವಾಗಿ ಅಭಿನಂದಿಸಿರುತ್ತಾರೆ.

Leave a Reply

Your email address will not be published. Required fields are marked *