ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಡಿ. 22
ದಿನಾಂಕ : 20/12/25ರಂದು ಕರ್ನಾಟಕ ಸರ್ಕಾರ, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ 2025-26, ಎಸ್.ಎಂ.ಎಸ್ ಸ್ಕೂಲ್ ಆಫ್ ಎಕ್ಸ್‍ಲೆನ್ಸ್, ಅಪ್ಪಾಜಿ ಸಿರಿ, ಅಲ್ಲಿ ನಡೆಸಿದ ಜಲ್ಲಾ ಮಟ್ಟದ ಪ್ರತಿಭಾ ಕಾರಂಜಿ, ಭರತನಾಟ್ಯ ಸ್ಪರ್ಧೆಯಲ್ಲಿ ನಗರದ ಪಾರ್ಶ್ವನಾಥ ವಿದ್ಯಾ ಸಂಸ್ಥೆಯ ಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಪ್ರಾರ್ಥನಾ ಎಂ, ಅವರು ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡಿ ಪ್ರಥಮ ಸ್ಥಾನ ಪಡೆದಿರುತ್ತಾರೆ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇದು ನಮಗೆ ಅಪಾರ ಹೆಮ್ಮೆಯ ವಿಷಯವಾಗಿದೆ. ಈ ವಿದ್ಯಾರ್ಥಿನಿಯ ಅದ್ಭುತ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕವೃಂದ ಮತ್ತು ಸಿಬ್ಬಂದಿ ವರ್ಗ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಯಶಸ್ಸುಗಳನ್ನು ಸಾಧಿಸಲಿ ಎಂದು ಹಾರೈಸಿದ್ದಾರೆ.
Views: 82