ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಆ. 01 : ರೆಡ್ಡಿ ಜನ ಸಂಘದವತಿಯಿಂದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಮಾಜಿ ಸೈನಿಕರಿಗೆ ಹಾಗೂ ನಿವೃತ್ತ ಅಧಿಕಾರಿಗಳು, ನೌಕರರಿಗೆ ಅಭಿನಂದನಾ ಸಮಾರಂಭವು ಆ.3ರ ಶನಿವಾರ ಮಧ್ಯಾಹ್ನ 12ಕ್ಕೆ ನಗರದ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರೆಡ್ಡಿ ಜನ ಸಂಘದ ಕಾರ್ಯದರ್ಶಿ ಜೆ.ಪರಶುರಾಮ್, ಶ್ರೀಮತಿ ಡಿ.ಕೆ.ಶೀಲಾ ತಿಳಿಸಿದ್ದಾರೆ.
2023-24ನೇ ಸಾಲಿನಲ್ಲಿ ಶೇ.85ಕ್ಕಿಂತ ಮೇಲ್ಪಟ್ಟ ಫಲಿತಾಂಶವನ್ನು ಪಡೆದ ಎಸ್.ಎಸ್.ಎಲ್.ಸಿ., ದ್ವಿತೀಯ ಪಿ.ಯು.ಸಿ.ಯ ರೆಡ್ಡಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ದೇಶ ಸೇವೆಯ ಕರ್ತವ್ಯದಲ್ಲಿ ತೊಡಗಿಸಿಕೊಂಡು ಸಾರ್ಥಕ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಸಮುದಾಯದ ಮಾಜಿ ಸೈನಿಕರಿಗೆ ಹಾಗೂ 01.04.2023 ರಿಂದ 31.07.2024ರವರೆಗೆ ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತರಾದ ಮತ್ತು ರಾಷ್ಟ್ರ ಮಟ್ಟದ ವಿಶೇಷ ಪ್ರಶಸ್ತಿಗೆ ಭಾಜನರಾದ ಸಮುದಾಯದ ಅಧಿಕಾರಿಗಳು ಮತ್ತು ನೌಕರರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ತಿಳಿಸಿದ್ದಾರೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ರೆಡ್ಡಿ ಜನ ಸಂಘದ ಅಧ್ಯಕ್ಷರು, ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಎಂ.ಕೆ.ಅನಂತರೆಡ್ಡಿ, ಖಂಜಾಚಿ ಜಿ.ವೈ.ಸುರೇಶ್ ಕುಮಾರ್ ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.