ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ, ಡಿ.24:
ಚಿತ್ರದುರ್ಗ ನಗರದ ಕಬೀರಾನಂದ ನಗರದಲ್ಲಿರುವ ಶ್ರೀ ಸದ್ಗುರು ಕಬೀರಾನಂದಾಶ್ರಮದಲ್ಲಿ ನಡೆಯಲಿರುವ 96ನೇ ಮಹಾ ಶಿವರಾತ್ರಿ ಸಪ್ತಾಹದ ಅಂಗವಾಗಿ ರೂಪುರೇಷೆಗಳ ಕುರಿತು ಚರ್ಚಿಸುವ ಭಕ್ತಾಧಿಗಳ ಪೂರ್ವಭಾವಿ ಸಭೆಯನ್ನು ಡಿಸೆಂಬರ್ 27ರಂದು ಶನಿವಾರ ಸಂಜೆ 4.30ಕ್ಕೆ ಆಶ್ರಮದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಹಾ ಶಿವರಾತ್ರಿ ಉತ್ಸವ ಸಮಿತಿಯ ಕಾರ್ಯದರ್ಶಿ ವಿ.ಎಲ್. ಪ್ರಶಾಂತ್ ತಿಳಿಸಿದ್ದಾರೆ.
96ನೇ ಶಿವನಾಮ ಸಪ್ತಾಹವು 2026ರ ಫೆಬ್ರವರಿ 9ರಿಂದ ಫೆಬ್ರವರಿ 15ರವರೆಗೆ ನಡೆಯಲಿದ್ದು, ವೇದಿಕೆ ಕಾರ್ಯಕ್ರಮಗಳು ಫೆಬ್ರವರಿ 11ರಿಂದ ಪ್ರಾರಂಭವಾಗಲಿವೆ. ಈ ಪೂರ್ವಭಾವಿ ಸಭೆಯ ದಿವ್ಯ ಸಾನಿಧ್ಯವನ್ನು ಶ್ರೀ ಸದ್ಗುರು ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಮಹಾ ಸ್ವಾಮಿಗಳು ವಹಿಸಲಿದ್ದಾರೆ.
ಮಹಾ ಶಿವರಾತ್ರಿ ಸಪ್ತಾಹದ ಯಶಸ್ವಿ ಆಯೋಜನೆಗಾಗಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಹಾಗೂ ಸಹಕಾರ ನೀಡುವಂತೆ ಉತ್ಸವ ಸಮಿತಿ ಮನವಿ ಮಾಡಿದೆ. ಈ ಮಹೋತ್ಸವವನ್ನು ಭಕ್ತಿಭಾವ, ಶಿಸ್ತಿನೊಂದಿಗೆ ನಡೆಸಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಲಾಗಿದೆ.
Views: 19