ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಏ. 18
ಇದೆ ತಿಂಗಳ 23 ಮತ್ತು 24 ರಂದು ಕರ್ನಾಟಕ ಪರಿಕ್ಷಾ ಪ್ರಾಧಿಕಾರಿಂದ ನೆಡೆಸುವ ಸಿ.ಇ.ಟಿ ಪರಿಕ್ಷೆ ಹಿನ್ನಲೆಯಲ್ಲಿ ನಗರದ ಎಸ್.ಜೆ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏ. ದಿ.17 ರಿಂದ 18 ರವರೆಗೆ ಎರಡು ದಿನಗಳ ಕಾಲ ನಡೆದ ಕಲ್ಪಿತ ಸಿ.ಇ.ಟಿ(ಒಔಅಏ ಅಇಖಿ)- 2026ರನ್ನು ನಡೆಸಲಾಗಿದ್ದು, ಈ ಪರೀಕ್ಷೆಯಲ್ಲಿ ಸುಮಾರು 250ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಈ ವಿಧ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಭರತ್ಪಿ.ಬಿ ಶುಭಕೋರಿದರು.
ಇದೇ ಸಂಧರ್ಭದಲ್ಲಿ ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷರು ಹಾಗೂ ಶ್ರೀ ಬೃಹ್ಮನಠ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಪಿ.ಎಂ.ಜಿ ರಾಜೇಶ್ ಪರೀಕ್ಷ ಕೆಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಅಭೀನಂದಿಸಿದರು