ನಶಿಸಿ ಹೋಗುತ್ತಿರುವ ಔಷಧಿ ಸಸ್ಯಗಳ ಸಂರಕ್ಷಣೆ ಎಲ್ಲರ ಹೊಣೆ._ಡಾ|| ಚಂದ್ರಕಾಂತ್ ನಾಗಸಮುದ್ರ, ಜಿಲ್ಲಾ ಆಯುಷ್ ಅಧಿಕಾರಿ ಚಿತ್ರದುರ್ಗ.

ಚಿತ್ರದುರ್ಗ: ಅ.22: ಭಾರತೀಯ ಸಸ್ಯಗಳಲ್ಲಿ ಆರನೇ ಒಂದು ಭಾಗವು ಔಷಧೀಯ ಗುಣಗಳನ್ನು ಹೊಂದಿದೆ ಆದರೆ ಅವುಗಳ ಅಳಿವಿನ ಅಪಾಯವು ದೊಡ್ಡದಾಗಿದೆ ಔಷಧೀಯ ಸಸ್ಯಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ” ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ|| ಚಂದ್ರಕಾಂತ್ ಎಸ್ ನಾಗಸಮುದ್ರ ಅಭಿಪ್ರಾಯ ಪಟ್ಟಿದ್ದಾರೆ.

9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ ಚಿತ್ರದುರ್ಗ ವತಿಯಿಂದ ನಗರದ ಕೆಳಗೋಟೆಯ ಈಶ್ವರೀಯ ವಿಶ್ವವಿದ್ಯಾಲಯದ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ‘ ಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದದ ಆವಿಷ್ಕಾರಗಳು ಮತ್ತು ಪರಿಸರ ರಕ್ಷಣೆ ಸಸ್ಯ ಹಾಗೂ ಪ್ರಾಣಿಗಳ ಸಂರಕ್ಷಣೆಯಲ್ಲಿ ಆಯುರ್ವೇದದ ಪಾತ್ರ ‘ ಎಂಬ ವಿಷಯ ಕುರಿತು ಅವರು ಮಾತನಾಡುತ್ತಾ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಹಾಗೂ ಔಷಧೀಯ ಸಸ್ಯಗಳ ಸಂರಕ್ಷಣೆಯನ್ನು ಗುರಿಯಾಗಿಸಿಕೊಂಡು ಸಾರ್ವಜನಿಕರು ಹಾಗೂ ಆಸಕ್ತ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇದೇ ಅಕ್ಟೋಬರ್ ದಿನಾಂಕ 21ರಿಂದ 28ರ ವರೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಅದರ ಭಾಗವಾಗಿ ಇದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ‘ ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ’ ಘೋಷವಾಕ್ಯದಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಆಯುಷ್ ಇಲಾಖೆಯ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ‌ಪಡಿಸಿಕೊಳ್ಳಬೇಕು ಎಂದು ಹೇಳಿದರು.


ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜೆ ಎನ್ ಕೋಟೆ ಆಯುಷ್ ಚಿಕಿತ್ಸಾಲಯದ ಆಡಳಿತ ವೈದ್ಯಾಧಿಕಾರಿ ಡಾ|| ವಿಜಯಲಕ್ಷ್ಮಿ ಪಿ ಮಹಿಳ ಸಬಲೀಕರಣಕ್ಕಾಗಿ ಆಯುರ್ವೇದ ಎಂಬ ವಿಷಯ ಕುರಿತು ಮಾತನಾಡುತ್ತಾ ‘
ಪ್ರತಿದಿನ ಒಂದೊಂದು ಆಯುರ್ವೇದ ಅರಿವು ಕಾರ್ಯಕ್ರಮವನ್ನು ಸಾರ್ವಜನಿಕರಿಗೆ ಹಮ್ಮಿಕೊಂಡಿದ್ದು ಆಯುಷ್ ಸಚಿವಾಲಯವು ಮಹಿಳೆಯರ ಸಮಸ್ಯಗಳಾದ ಪಿಸಿಓಎಸ್/ಪಿಸಿಒಡಿ, ಒತ್ತಡ ನಿರ್ವಹಣೆ, ಮತ್ತು ಆಯುರ್ವೇದದ ಆಧಾರದಲ್ಲಿ ಮಹಿಳೆಯರ ಆರೋಗ್ಯದ ಸುಧಾರಣೆಗಾಗಿ ಹೆಚ್ಚಿನ ಸಂಶೋಧನೆಯ ಮೇಲೆ ಕೇಂದ್ರೀಕರಿಸಲು ಮಹಿಳೆಯರ ಮೇಲೆ ಪರಿಣಾಮ ಬೀರುವ ವಿವಿಧ ಔಷಧೀಯ ಸಸ್ಯಗಳ ಸಂರಕ್ಷಣೆಯನ್ನು ಸಕ್ರಿಯವಾಗಿ ಚಿತ್ರದುರ್ಗ ಜಿಲ್ಲಾ ಆಯುಷ್ ಇಲಾಖೆಯು ಬೆಂಬಲಿಸುತ್ತಾ ಬಂದಿದೆ , ಆಯುರ್ವೇದ ಆಧಾರಿತ ಸಂಶೋಧನೆಯ ಮೂಲಕ ಮಹಿಳಾ ಸಬಲೀಕರಣವನ್ನು ಆಯುಷ್ ಇಲಾಖೆ ಉತ್ತೇಜಿಸುತ್ತದೆ . ಮಹಿಳೆಯರು ತಮ್ಮ ಸಮಸ್ಯಗಳ ಬಗ್ಗೆ ಹತ್ತಿತದ ಆಯುಷ್ ಇಲಾಖೆಯ ಚಿಕಿತ್ಸಾಲಯಗಳಿಗೆ ಭೇಟಿನೀಡಿ ಆಯುಷ್ ವೈಧ್ಯರಲ್ಲಿ ಮುಕ್ತವಾಗಿ ಚರ್ಚಿಸಿ ಸಮಸ್ಯಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಇದೇ ಸಂಧರ್ಭದಲ್ಲಿ ಹಾಜರಿದ್ದ ಹಿರಿಯೂರು ತಾಲ್ಲೂಕಿನ ಸೊಂಡೆಕೊಳ ಆಯುಷ್ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ|| ನಾಗರಾಜ್ ನಾಯಕ್ ಮಾತನಾಡಿ ” ಔಷಧಿ ಸಸ್ಯಗಳ ಮಹತ್ವ ಹಾಗೂ ಆಯುರ್ವೇದ ಪದ್ಧತಿಗೆ ಅವುಗಳ ಉಪಯೋಗವನ್ನು ಸಾರ್ವಜನಿಕರಿಗೆ ತಿಳಿಸಿದರು ಹಾಗೂ ಆಯುರ್ವೇದ ಪದ್ಧತಿಯು ರೋಗಿಗಳಿಗೆ ತಲುಪಬೇಕಾದರೆ ಔಷಧಿ ಸಸ್ಯಗಳು ಬಹಳ ಮುಖ್ಯ . ಹೇಗೆ ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುತ್ತೇವೆ ಅದೇ ರೀತಿ ಸಸ್ಯಗಳ ಆರೋಗ್ಯವನ್ನು ಸಹ ನಾವು ಕಾಪಾಡಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರಿ ರೋಹಿಣಿ, ರಶ್ಮಿ, ಅಮೃತ ಆಯುರ್ವೇದ ಕಾಲೇಜಿನ ಡಾ. ವೀರೇಶ್, ಆಯುಷ್ ಇಲಾಖೆಯ ಯೋಗ ತರಬೇತುದಾರ ರವಿ ಕೆ.ಅಂಬೇಕರ್ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *