ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ! ಅಂಗೀಕಾರ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು!

PM Narendra Modi Resignation : ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಚಿವರ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿದರು. ರಾಜೀನಾಮೆ ಪತ್ರ ನೀಡುವುದರೊಂದಿಗೆ 17ನೇ ಲೋಕಸಭೆಯನ್ನು ವಿಸರ್ಜಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ಮೋದಿ ಮನವಿ ಮಾಡಿದರು.

PM Narendra Modi Resignation on Prime Minister Post: ಬೆಂಗಳೂರು: ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ ಪ್ರಧಾನಿ ಮೋದಿ ಅವರು 17ನೇ ಲೋಕಸಭೆಯನ್ನು ವಿಸರ್ಜಿಸುವಂತೆ ಮನವಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಚಿವರ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿದರು. ರಾಜೀನಾಮೆ ಪತ್ರ ನೀಡುವುದರೊಂದಿಗೆ 17ನೇ ಲೋಕಸಭೆಯನ್ನು ವಿಸರ್ಜಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ಮೋದಿ ಮನವಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಕೊಂಡಿದ್ದು, ಹಂಗಾಮಿ ಪ್ರಧಾನಿಯಾಗಿ ಉಳಿಯುವಂತೆ ಮನವಿ ಮಾಡಿದ್ದಾರೆ. ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಯ ವೇಳೆಯ ಸಭೆಯ ಚಿತ್ರಗಳು ಹೊರಬಿದ್ದಿವೆ, ಅದರಲ್ಲಿ ಅವರು ರಾಜೀನಾಮೆ ಸಲ್ಲಿಸುತ್ತಿರುವುದನ್ನು ಕಾಣಬಹುದು. ದೆಹಲಿಯಲ್ಲಿ ನಡೆಯಲಿರುವ ಎನ್‌ಡಿಎ ಸಭೆಗೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಜೆಪಿಗೆ ಬಹುಮತ ಸಿಗದ ಕಾರಣ ಹದಗೆಟ್ಟ ಪರಿಸ್ಥಿತಿ

ಬಿಜೆಪಿ ನೇತೃತ್ವದ ಎನ್‌ಡಿಎ 294 ಸ್ಥಾನಗಳೊಂದಿಗೆ ಬಹುಮತ ಪಡೆದಿದೆ. ಇಂತಹ ಪರಿಸ್ಥಿತಿಯಲ್ಲಿ ಎನ್‌ಡಿಎ ಸರ್ಕಾರ ರಚಿಸುವ ಸಾಧ್ಯತೆ ದಟ್ಟವಾಗಿದೆ. ಆದರೆ ಬಿಜೆಪಿಗೆ ಸ್ವಂತ ಬಲದಿಂದ ಬಹುಮತ ಬಂದಿಲ್ಲ. ಇದರಿಂದಾಗಿ ಎನ್‌ಡಿಎ ಮಿತ್ರಪಕ್ಷಗಳು ಕೈಬಿಡುವ ಸಾಧ್ಯತೆ ಇದೆಯಾ ಅನ್ನೋದರ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಗ್ಗೆ ಹೆಚ್ಚಿನ ಚರ್ಚೆ ನಡೆಯುತ್ತಿದೆ. ಆದರೆ, ಇಬ್ಬರೂ ನಾಯಕರು ಎನ್‌ಡಿಎ ಜೊತೆಗಿರುವ ಸುಳಿವು ನೀಡಿದ್ದಾರೆ.  

ಎನ್‌ಡಿಎ ಸಭೆಯಲ್ಲಿ ಸರ್ಕಾರ ರಚನೆ ಕುರಿತು ಚರ್ಚೆ

ಬುಧವಾರ ದೆಹಲಿಯಲ್ಲಿ ಎನ್‌ಡಿಎ ಸಭೆ ನಡೆಯಲಿದ್ದು, ಇದರಲ್ಲಿ ಭಾಗವಹಿಸಲು ಎಲ್ಲಾ ಮಿತ್ರಪಕ್ಷಗಳ ಪ್ರಮುಖ ನಾಯಕರು ಆಗಮಿಸುತ್ತಿದ್ದಾರೆ. ನಿತೀಶ್ ಕುಮಾರ್ ಕೂಡ ದೆಹಲಿ ತಲುಪಿದ್ದಾರೆ. ಚಂದ್ರಬಾಬು ನಾಯ್ಡು ಕೂಡ ಆಗಮಿಸಲಿದ್ದಾರೆ. ಈ ಸಭೆಯಲ್ಲಿ ಸರ್ಕಾರ ರಚನೆ ಹಾಗೂ ಮುಂದಿನ ಕಾರ್ಯತಂತ್ರ ಕುರಿತು ಚರ್ಚೆ ನಡೆಯಲಿದೆ. ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದ್ದು, ಈ ಕಾರಣಕ್ಕಾಗಿ ಜೂನ್ 7 ರಂದು ಸಂಸತ್ ಭವನದಲ್ಲಿ ಎನ್‌ಡಿಎಯ ಎಲ್ಲ ಸಂಸದರ ಸಭೆ ಕರೆಯಲಾಗಿದೆ.

ಜೂನ್ 8 ರಂದು ಪ್ರಮಾಣ ವಚನ ಸ್ವೀಕಾರ

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಬಹುಮತ ಪಡೆದು ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ. ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರದ ದಿನಾಂಕ ಮತ್ತು ಸಮಯ ಕೂಡ ನಿಗದಿಯಾಗಿದೆ. ಜೂನ್ 8 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಸಿದ್ಧತೆಗಳ ವಿಚಾರ ಮಂಥನ ಚುರುಕುಗೊಂಡಿದೆ. ಹೊಸ ಸಚಿವ ಸಂಪುಟದ ಮುಖಗಳಿಗೆ ಸಂಬಂಧಿಸಿದಂತೆ ಮಿತ್ರಪಕ್ಷಗಳೊಂದಿಗೆ ಮಾತುಕತೆ ಮತ್ತು ಸಭೆಗಳ ಸುತ್ತು ಕೂಡ ತೀವ್ರಗೊಂಡಿದೆ. ಇನ್ನು ಎರಡು-ಮೂರು ದಿನಗಳಲ್ಲಿ ಹೆಸರು ಅಂತಿಮವಾಗುವ ಸಾಧ್ಯತೆ ಇದೆ.

ಸಂಪುಟ ಸಭೆಯ ನಂತರ ಲೋಕಸಭೆ ವಿಸರ್ಜನೆ

ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. ಬೆಳಗ್ಗೆ 11.30ಕ್ಕೆ ಸಭೆ ನಡೆದಿದ್ದು, ಈ ವೇಳೆ ಚುನಾವಣಾ ಫಲಿತಾಂಶ ಪರಾಮರ್ಶೆ ಜತೆಗೆ ಸರ್ಕಾರ ರಚನೆಯ ಸಂಭವನೀಯ ರೂಪುರೇಷೆ ಕುರಿತು ಚರ್ಚೆ ನಡೆಸಲಾಯಿತು.

Source : https://kannada.news18.com/news/national-international/pm-narendra-modi-meets-president-draupadi-murmu-and-submits-resignation-on-prime-minister-post-akd-1728771.html


Views: 0

Leave a Reply

Your email address will not be published. Required fields are marked *