ಪ್ರಾಥಮಿಕ ಶಾಲಾ ಶಿಕ್ಷಕರ ಮುಷ್ಕರ ತಾತ್ಕಾಲಿಕವಾಗಿ ಮುಂದೂಡಿಕೆ: ಸಕರಾತ್ಮಕ ನಿರ್ಧಾರದ ಭರವಸೆ.

ಚಿತ್ರದುರ್ಗ ಆ. 30

ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸೆಪ್ಟಂಬರ್-03ರಂದು ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಗೆ ತರುವ ಭರವಸೆ ನೀಡಿ ಹಾಗೂ ಶಿಕ್ಷಕರು ಮುಷ್ಕರಕ್ಕೆ ಹೋಗದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧುಬಂಗಾರಪ್ಪನವರ ತಿಳಿಸುತ್ತಾ, ಸಕರಾತ್ಮಕ ನಿರ್ಧಾರದ ನಿರೀಕ್ಷೆಯ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದರಿಂದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದಿರುವುದಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ (ರಿ.)ದ ಚಿತ್ರದುರ್ಗ ತಾಲ್ಲೂಕು ಘಟಕದ ತಾಲ್ಲೂಕು ಅಧ್ಯಕ್ಷರಾದ ಕೆಂಚಪ್ಪ.ಎಸ್ ತಿಳಿಸಿದ್ದಾರೆ. 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧುಬಂಗಾರಪ್ಪನವರ ನೇತೃತ್ವದಲ್ಲಿ ಆ. 29 ರಂದು ನಡೆದ ಸಭೆಯಲ್ಲಿ ಶಿಕ್ಷಕರ ವಿವಿಧ ಬೇಡಿಕೆಗಳಾದ 2016ಕ್ಕಿಂತ ಮೊದಲು ನೇಮಕಾತಿ ಆದವರಿಗೆ ಪದವೀಧರ ಶಿಕ್ಷಕರೆಂದು ಸೇವಾ ಜೇಷ್ಠತೆ ನೀಡಬೇಕು.ಪ್ರಾ.ಶಾ.ಶಿಕ್ಷಕರಿಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. ಸಿ ಅಂಡ್ ಆರ್ ತಿದ್ದುಪಡಿಯಾಗಬೇಕು. ಹಾಗೂ ಮುಖ್ಯ ಶಿಕ್ಷಕರ ಹುದ್ದೆಯಿಂದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವುದು. ಈ ಬೇಡಿಕೆಗಳ ಬಗ್ಗೆ ರಾಜ್ಯದ ಎಲ್ಲಾ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಶಾಲಾ ಶಿಕ್ಷಣ ಇಲಾಖೆ ಸದಾ ಶಿಕ್ಷಕರೊಂದಿಗೆ ನಿಲ್ಲುತ್ತದೆ. ಈ ಎಲ್ಲಾ ಬೇಡಿಕೆಗಳನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಗೆ ತರುವ ಭರವಸೆ ನೀಡಲಾಯಿತು ಹಾಗೂ ಶಿಕ್ಷಕರು ಮುಷ್ಕರಕ್ಕೆ ಹೋಗದಂತೆ ತಿಳಿಸುತ್ತಾ, ಸಕರಾತ್ಮಕ ನಿರ್ಧಾರದ ನಿರೀಕ್ಷೆಯ ಬಗ್ಗೆ ಭರವಸೆ ವ್ಯಕ್ತಪಡಿಸಿದರು. ಆದ್ದರಿಂದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ತಾತ್ಕಾಲಿಕವಾಗಿ ಸೆ. 03 ರಂದು ನಡೆಸಲು ತೀರ್ಮಾನಿಸಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಭೆಯಲ್ಲಿ ಇಲಾಖಾ ಪ್ರಧಾನ ಕಾರ್ಯದರ್ಶಿಗಳಾದ ಡಾ.ರಶ್ಮಿ ಮಹೇಶ್, ಆಯುಕ್ತರಾದ ತ್ರಿಲೋಕ ಚಂದ್ರ.ಕೆ.ವಿ, ಪ್ರಾಥಮಿಕ ಶಾಲಾ ನಿರ್ದೇಶಕರಾದ ಅನಿತ ನಜಾರೀಯ ಹಾಗೂ ಕರ್ನಾಟಕ ರಾಜ್ಯ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರು ಚಂದ್ರಶೇಖರ್ ಮೂಗಲಿ, ರಾಜ್ಯ ಪ್ರಧಾನ ಕಾರ್ಯದರ್ಶಿಯವರಾದ ಚೇತನ್, ರಾಜ್ಯ ಸಂಘದ ಗೌರವಾಧ್ಯಕ್ಷರಾದ ನಾಗೇಶ್ ರಾಜ್ಯ ಉಪಾಧ್ಯಕ್ಷರಾದ ಮಾರುತೇಶ್ ಚಿತ್ರದುರ್ಗ ಜಿಲ್ಲಾ ಘಟಕ ಅಧ್ಯಕ್ಷರಾದ ಜಿ.ವಿ.ಮಹಂತೇಶ್ ಪ್ರಧಾನ ಕಾರ್ಯದರ್ಶಿ ಜಿ.ಟಿ.ಹನುಮಂತಪ್ಪ ಹಾಗೂ ರಾಜ್ಯದ ಎಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಹಾಜರಿದ್ದರು. 

Leave a Reply

Your email address will not be published. Required fields are marked *