ಕರ್ನಾಟಕದ ಎಲ್ಲ ಮತದಾರರನ್ನು ತಲುಪುವ ನಿಟ್ಟಿನಲ್ಲಿ ಮತ್ತು ಮೋದಿ ಭಾಷಣದ, ಅವರು ನೀಡುವ ಮಾಹಿತಿಯನ್ನು ಜನತೆಗೆ ತಲುಪಿಸುವ ಉದ್ದೇಶದೊಂದಿಗೆ ಈ ಎಕ್ಸ್ ಖಾತೆ ಆರಂಭಿಸಲಾಗಿದೆ. ಕನ್ನಡ ಭಾಷೆಯಲ್ಲಿ ಮೋದಿ ತೆರೆದಿರುವ ಪ್ರತ್ಯೇಕ ಎಕ್ಸ್ ಖಾತೆಯಲ್ಲಿ ಮೋದಿ ಭಾಷಣದ ವಿಡಿಯೋ ತುಣುಕುಗಳನ್ನು ಪೋಸ್ಟ್ ಮಾಡಲಾಗಿದೆ.

ಬೆಂಗಳೂರು, ಏಪ್ರಿಲ್ 10: ಲೋಕಸಭೆ ಚುನಾವಣೆಯ (Lok Sabha Elections) ಮೊದಲನೇ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ (ಹಿಂದಿನ ಟ್ವಿಟರ್) ಕನ್ನಡ ಭಾಷೆಯಲ್ಲಿ ಪ್ರತ್ಯೇಕ ಖಾತೆ (Narendra Modi Kannada X) ತೆರೆದಿದ್ದಾರೆ. ‘ನಮೋ ಕನ್ನಡ’ ಎಂಬ ಹೆಸರಿನಲ್ಲಿ ನರೇಂದ್ರ ಮೋದಿ ಕನ್ನಡ ಖಾತೆ ಆರಂಭಿಸಲಾಗಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದ್ದು, ಮೇ 7ರಂದು ನಂತರದ ಹಂತದ ಮತದಾನ ನಡೆಯಲಿದೆ. ಹೀಗಾಗಿ ಮತದಾರರನ್ನು ತಲುಪುವ ಉದ್ದೇಶದಿಂದ ಹೊಸ ಖಾತೆ ತೆರೆಯಲಾಗಿದೆ.
ಕರ್ನಾಟಕದ ಎಲ್ಲ ಮತದಾರರನ್ನು ತಲುಪುವ ನಿಟ್ಟಿನಲ್ಲಿ ಮತ್ತು ಮೋದಿ ಭಾಷಣದ, ಅವರು ನೀಡುವ ಮಾಹಿತಿಯನ್ನು ಜನತೆಗೆ ತಲುಪಿಸುವ ಉದ್ದೇಶದೊಂದಿಗೆ ಈ ಎಕ್ಸ್ ಖಾತೆ ಆರಂಭಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮೋದಿ ತೆರೆದಿರುವ ಪ್ರತ್ಯೇಕ ಎಕ್ಸ್ ಖಾತೆಯಲ್ಲಿ ಮೋದಿ ಭಾಷಣದ ವಿಡಿಯೋ ತುಣುಕುಗಳನ್ನು ಪೋಸ್ಟ್ ಮಾಡಲಾಗಿದೆ. ಆದರೆ, ಈ ವಿಡಿಯೋಗಳಿಗೆ ಮೋದಿ ಭಾಷಣದ ಕನ್ನಡಾನುವಾದದ ಹಿನ್ನೆಲೆ ಧ್ವನಿ ನೀಡಲಾಗಿದೆ.
ಮೋದಿ ಎಕ್ಸ್ ಸಂದೇಶಗಳು
ಒಂದು ಸಂದೇಶದಲ್ಲಿ, 1984 ರಲ್ಲಿ ಸಿಖ್ ಸಮುದಾಯದ ವಿರುದ್ಧ ಕಾಂಗ್ರೆಸ್ ಮಾಡಿದ್ದನ್ನು ನಾವ್ಯಾರೂ ಮರೆಯಲಾಗದು ಎಂಬ ಮೋದಿ ಭಾಷಣದ ತುಣುಕು ಇದೆ.
ನವರಾತ್ರಿಯ ಸಮಯದಲ್ಲಿ ನಾವು ಶಕ್ತಿಯ ಚೈತನ್ಯವನ್ನು ಅನುಭವಿಸುತ್ತೇವೆ. ಆದರೆ ‘ಇಂಡಿಯಾ’ ಮೈತ್ರಿಕೂಟದವರು ಶಕ್ತಿಯನ್ನು ಕೊನೆಗೊಳಿಸುವುದಾಗಿ ಹೇಳಿದ್ದಾರೆ ಎಂದು ಮತ್ತೊಂದು ವಿಡಿಯೋದಲ್ಲಿ ಮೋದಿ ಹೇಳಿದ್ದಾರೆ. ಇನ್ನೊಂದು ವಿಡಿಯೋದಲ್ಲಿ ಕಾಂಗ್ರೆಸ್ ಪಕ್ಷಗಳೇ ಸಮಸ್ಯೆಯ ಸೃಷ್ಟಿಕರ್ತ ಎಂದು ಹೇಳಿದ್ದಾರೆ.
ಈಗಾಗಲೇ ಕರ್ನಾಟಕದಲ್ಲಿ ಭರ್ಜರಿಯಾಗಿ ಚುನಾವಣಾ ಪ್ರಚಾರ ನಡೆಸಿರುವ ಮೋದಿ, ಮತ್ತೊಮ್ಮೆ ಏಪ್ರಿಲ್ 14ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 14ರ ಭಾನುವಾರ ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲಿದ್ದು, ನಂತರ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1