ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಸಮಯ 11:00 ಗಂಟೆ : ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿರುವ ಹೆಲಿಪ್ಯಾಡ್ಗೆ ಬಂದಿಳಿದಿದ್ದಾರೆ.ವಾಹನದ ಮೂಲಕ ಕಾರ್ಯಕ್ರಮ ನಡೆಯುವ ವೇದಿಕೆಗೆ ಆಗಮಿಸಲಿದ್ದಾರೆ.

 

ಚಿತ್ರದುರ್ಗ, (ಮೇ.02) : ವಾಯುಸೇನೆಯ ವಿಶೇಷ ವಿಮಾನದ ಮೂಲಕ ಚಳ್ಳಕೆರೆ ತಾಲ್ಲೂಕಿನ ಕುದಾಪುರದ ಬಳಿ ಇರುವ ಡಿಆರ್‌ಡಿಓಗೆ ಪ್ರಧಾನಿ ಮೋದಿ ಆಗಮಿಸಿದ್ದು, ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗ ನಗರದ ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು.

ಚಿತ್ರದುರ್ಗದಿಂದ ಜಿ.ಹೆಚ್. ತಿಪ್ಪಾರೆಡ್ಡಿ
ಹೊಳಲ್ಕೆರೆಯಿಂದ ಎಂ. ಚಂದ್ರಪ್ಪ
ಹೊಸದುರ್ಗದಿಂದ ಲಿಂಗಮೂರ್ತಿ
ಹಿರಿಯೂರಿನಿಂದ ಪೂರ್ಣಿಮಾ ಶ್ರೀನಿವಾಸ್
ಚಳ್ಳಕೆರೆಯಿಂದ ಅನಿಲ್ ಕುಮಾರ್
ಮೊಳಕಾಲ್ಮೂರಿನಿಂದ ತಿಪ್ಪೇಸ್ವಾಮಿ ಯವರು ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದು ಅವರ ಪರವಾಗಿ ಚುನಾವಣಾ ಭಾಷಣ ಮಾಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಈಗಾಗಲೇ ಕ್ರೀಡಾಂಗಣದಲ್ಲಿ ಅಪಾರ ಪ್ರಮಾಣದ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದಾರೆ.

The post ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/Cloiwdr
via IFTTT

Leave a Reply

Your email address will not be published. Required fields are marked *