ಪ್ರಧಾನಿ ನರೇಂದ್ರ ಮೋದಿ ಸಮಾವೇಶಕ್ಕೆ ಹರಿದು ಬಂದ ಜನಸಾಗರದ

 

ವರದಿ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817

ಚಿತ್ರದುರ್ಗ, (ಮೇ.02) : ಐತಿಹಾಸಿಕ ಕೋಟೆನಾಡು ಚಿತ್ರದುರ್ಗದಲ್ಲಿ ಮಂಗಳವಾರ ಭಾರತೀಯ ಜನತಾ ಪಕ್ಷ ಹಮ್ಮಿಕೊಂಡಿದ್ದ ನವ ಕರ್ನಾಟಕ ಸಂಕಲ್ಪ ಸಮಾವೇಶಕ್ಕೆ ಜನಸಾಗರವೇ ಹರಿದು ಬಂದಿದೆ.

2023 ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಶ್ರೀ ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ಇಂದು ನವ ಕರ್ನಾಟಕ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.

ಅವಳಿ ಜಿಲ್ಲೆಗಳಾದ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆ ಜೊತೆಗೂಡಿ ಹಮ್ಮಿಕೊಂಡಿದ್ದ ನವ ಕರ್ನಾಟಕ ಸಂಕಲ್ಪ ಸಮಾವೇಶಕ್ಕೆ ಎರಡೂ ಜಿಲ್ಲೆಗಳಿಂದ ಸಾವರಾರೂ ಸಂಖ್ಯೆಯಲ್ಲಿ ಜನರು ಹರಿದು ಬಂದರು.

ನಿಗದಿತ 10 ಗಂಟೆಯ ಸಮಾವೇಶಕ್ಕೆ ಬೆಳಗ್ಗೆ 6 ಗಂಟೆಯಿಂದಲೇ ಜನರು ತಂಡೋಪ ತಂಡವಾಗಿ ಮುರುಘಾರಾಜೇಂದ್ರ ಕ್ರೀಡಾಂಗಣಕ್ಕೆ ಆಗಮಿಸುತ್ತಿದ್ದು, ಇವರನ್ನು ಹತೋಟಿಗೆ ತರಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಸಮಾವೇಶ ಹಿನ್ನೆಲೆಯಲ್ಲಿ ಮೊದಲೇ ವಾಹನಗಳ ಸಂಚಾರಕ್ಕೆ ನಗರದ ಹೊರವಲಯದಲ್ಲಿರುವ ಹೊಸ ರಾಷ್ಟ್ರೀಯ ಹೆದ್ದಾರಿಯನ್ನು ನಿಗದಿ ಮಾಡಲಾಗಿತ್ತು. ಇದರಿಂದ ನಗರದಲ್ಲಿ ವಾಹನಗಳ ಸಂಚಾರ ಸ್ಥಗೀತಗೊಂಡು, ಜನರ ಸಂಚಾರಕ್ಕೆ ಸುಗಮ ಆಗಿತ್ತು.

ಭಾರತ ದೇಶದ ನರೇಂದ್ರ ಮೋದಿ ಎಂದರೆ ಸಾಕು ಅತೀ ಹೆಚ್ಚಾಗಿ ಇಷ್ಟ ಪಡುವ ಜೈನ ಸಮುದಾಯದವರು ಇಂದು ತಮ್ಮ ಅಂಗಡಿ ಮುಂಗಟ್ಟುಗಳನ್ನು ತೆರೆಯದೆ ಸಮಾವೇಶ ನಡೆಯುವ ಮೈದಾನಕ್ಕೆ ಆಗಮಿಸಿ, ಮೋದಿ ಮೇಲೆ ಇರುವ ತಮ್ಮ ಅಭಿಮಾನವನ್ನು ತೋರಿಸಿದರು.

ಸಮಾವೇಶಕ್ಕೆ ಹೆಚ್ಚಿನ ಜನರು ಆಗಮಿಸುವ ನೀರಿಕ್ಷೇಯನ್ನು ಹೊಂದಿದ್ದ, ಪೊಲೀಸ್ ಇಲಾಖೆ ಐದು ಜನ ಜಿಲ್ಲಾ ವರಿಷ್ಠಾಧಿಕಾರಿಗಳನ್ನು, ಡಿಎಆರ್ 5 ತುಕಡಿ, ಕೆಎಸ್ ಆರ್ ಪಿ 5 ತುಕಡಿ, ಕ್ಯೂ ಆರ್ ಟಿ 2 ತುಕಡಿಗಳು ಸೇರಿದಂತೆ 1000 ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು.

The post ಪ್ರಧಾನಿ ನರೇಂದ್ರ ಮೋದಿ ಸಮಾವೇಶಕ್ಕೆ ಹರಿದು ಬಂದ ಜನಸಾಗರದ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/XT6KiLG
via IFTTT

Leave a Reply

Your email address will not be published. Required fields are marked *