ವಕ್ಫ್ ಕಾಯಿದೆ ದುರ್ಬಳಕೆ ಹಾಗೂ ವಕ್ಫ್ ಹಗರಣದ ವಿರುದ್ಧ ಚಿತ್ರದುರ್ಗ ನಗರದಲ್ಲಿಂದು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ನ. 05: ವಕ್ಫ್ ಕಾಯಿದೆ ದುರ್ಬಳಕೆ ಹಾಗೂ ವಕ್ಫ್ ಹಗರಣದ ವಿರುದ್ಧ ಚಿತ್ರದುರ್ಗ ನಗರದಲ್ಲಿಂದು ನಗರದ ಓಬವ್ವ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರ ಸಿ.ಎಂ. ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶವನ್ನ ಹೊರ ಹಾಕಿದ್ದಾರೆ.

ಇನ್ನೂ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಲ್ಯಾಂಡ್ ಜಿಹಾದ್ ಹಾಗೂ ವಕ್ಫ್ ಅಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದ್ದು ಸಿ ಎಂ
ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಹಾಗೂ ಸಂವಿಧಾನ ವಿರೋಧಿ ವಕ್ಫ್ ಮಂಡಳಿ, ಕಾಂಗ್ರೆಸ್ ಸರ್ಕಾರದ ಲ್ಯಾಂಡ್ ಜಿಹಾಧ್ ಎಂಬ
ಬಿತ್ತಿ ಪತ್ರಗಳನ್ನ ಕೈನಲ್ಲಿ ಹಿಡಿದ ಬಿಜೆಪಿಯ ಕಾರ್ಯಕರ್ತರು ರಾಜ್ಯ ಸರ್ಕಾರ ಸಿ.ಎಂ. ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್
ಖಾನ್‍ರ ಭಾವಚಿತ್ರಗಳನ್ನ ಕೈನಲ್ಲಿ ಹಿಡಿದು ಪ್ರತಿಭಟನೆ ನಡೆಸಿ ಆಕ್ರೋಷವನ್ನ ಹೊರ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಯುವ ಮುಖಂಡ ಅನಿತ್ ಕುಮಾರ್, ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ
ನಡೆಸುತ್ತಿರುವ ಕಾಂಗ್ರೆಸ್ ವಕ್ಪ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ. ಅದರಲ್ಲೂ ಕೇಂದ್ರದ ನರೇಂದ್ರ ಮೋದಿ
ನೇತೃತ್ವದ ಸರಕಾರ ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿದ್ದ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು
ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕವನ್ನು ಮಂಡಿಸಿದೆ. ಇದು ಜಂಟಿ ಪಾರ್ಲಿಮೆಂಟರಿ ಬೋರ್ಡ್‍ನ ಪರಿಶೀಲನೆಯಲ್ಲಿದೆ. ಈ
ತಿದ್ದುಪಡಿ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್ ಬೋರ್ಡ್ ತನ್ನ ಕರಾಳ ಕೈಚಳಕವನ್ನು ಮಾಡುವ ಮೂಲಕ ಇಡೀ
ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈಹಾಕಿದೆ ಎಂದು ಆರೋಪಿಸಿದರು.

ಚಳ್ಳಕೆರೆ ನಗರಸಭೆಯ ಮಾಜಿ ಸದಸ್ಯ ಶಿವಮೂರ್ತಿ ಮಾತನಾಡಿ, ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ವಕ್ಫ್ ಅದಾಲತ್ ನಡೆಸದಂತೆ
ಸರ್ಕಾರ ಆದೇಶವನ್ನು ಹೊರಡಿಸಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಗೆಜೆಟ್ ನೋಟಿಫೀಕೇಷನ್‍ನ್ನು ಹಿಂಪಡೆಯಬೇಕು. ಕೇಂದ್ರ
ಸರ್ಕಾರವು ಜಾರಿಗೆ ತರುತ್ತಿರುವ ವಕ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ಸರ್ಕಾರವು ಮುಂದಿನ ಅಧಿವೇಶನದಲ್ಲಿ ಒಮ್ಮತದಿಂದ ನಿರ್ಣಯವನ್ನು
ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಬೇಕು ಎಂದು ಆಗ್ರಹಿಸಿದರು.

ಜಿಂಕಲ್ ಬಸವರಾಜು ಮಾತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಎಲ್ಲಾ ಕುಕೃತ್ಯಗಳಿಗೂ ಕಾಂಗ್ರೆಸ್ ಸರಕಾರ ಹಾಗೂ ಸಚಿವ
ಜಮೀರ್ ಅಹಮದ್ ನೇರವಾಗಿ ಕುಮ್ಮಕ್ಕು ಕೊಡುತ್ತಿರುವುದು ಇಡೀ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ ರಾಜ್ಯದ ಬಡ ಜನರ
ಹಾಗೂ ರೈತರ ಜಮೀನುಗಳನ್ನು ಕಿತ್ತುಕೊಳ್ಳುತ್ತಿರುವ ಜಮೀರ್ ಅಹಮ್ಮದ್ ಅವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾಗೊಳಿಸಬೇಕು.
ಇಂತಹ ಕೆಲಸಕ್ಕೆ ಕೈ ಹಾಕಲು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಹಾಗೂ ಸ್ಪಷ್ಟನೆ
ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರು ಒನಕೆ ಓಬವ್ವ ವೃತದಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಲು ಜಿಲ್ಲಾಧಿಕಾರಿಗಳು ಕಚೇರಿ ಬಳಿ ಹೋಗುತ್ತಿದ್ದ ಬಿಜೆಪಿ ಪ್ರತಿಭಟನಾಕಾರರನ್ನು ಪೋಲಿಸರು ತಡೆದು ನಿಲ್ಲಿಸಿದರು. ಡಿ.ಸಿ. ಬಂದು ಮನವಿ ಸ್ವೀಕರಿಸುವಂತೆ ಪಟ್ಟು ಹಿಡಿದು ಡಿಸಿ ಕಚೇರಿ ಬಳಿ ತೆರಳಲು ಪ್ರತಿಭಟನಾಕಾರರು ಮುಂದಾಗಿದ್ದು ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ನಡೆದು ಬೇಕಿದ್ದರೆ
ನಮ್ಮನ್ನ ಬಂದಿಸಿ ನಾವು ಒಳ ಬರುತ್ತೇವೆ ಎಂದು ಪೊಲೀಸ್ ಬ್ಯಾರೀಕೇಡ್‍ಗಳನ್ನು ತಳ್ಳಿಕೊಂಡು ಡಿಸಿ ಕಚೇರಿ ಬಳಿ ಆಗಮಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದು ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿ ಮನವಿಯನ್ನು ಸಲ್ಲಿಸಲು ಬರುವವರುಗೆ ತೊಂದರೆಯನ್ನು ನೀಡಬೇಡಿ ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್‍ಕುಮಾರ್, ಬಾಳೇಕಾಯಿ ರಾಮದಾಸ್, ರಾಜ್ಯ ರೈತ ಮೋರ್ಚಾದ
ಕಾರ್ಯದರ್ಶಿ ಮಲ್ಲಿಕಾರ್ಜನ್, ರಾಜ್ಯ ಯುವ ಮೋರ್ಚಾದ ಕಾರ್ಯದರ್ಶಿ ಭಾರ್ಗವಿ ದ್ರಾವಿಡ್, ನಗರಾಧ್ಯಕ್ಷ ಚಾಲುಕ್ಯ ನವೀನ್,
ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ಮೊಳಕಾಲ್ಮೂರು ಮಂಡಲ ಅಧ್ಯಕ್ಷ ಡಾ.ಮಂಜುನಾಥ್, ಭರಮಸಾಗರ ಮಂಡಲ ಅಧ್ಯಕ್ಷ ಶೈಲೇಶ್,
ಮೋಹನ್, ನಗರಸಭಾ ಸದಸ್ಯ ಹರೀಶ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಜಿಲ್ಲಾ ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ಶಿಂಧುತನಯ,
ಲೋಕೇಶ್, ತಿಪ್ಪೇಸ್ವಾಮಿ, ಪರಶುರಾಮ್, ಹೇರಿಸ್ವಾಮಿ, ಶಶಿಧರರೆಡ್ಡಿ, ಶ್ಯಾಮಲ ಶಿವಪ್ರಕಾಶ್, ರೂ ಸುರೇಶ್, ಶಾಂತಮ್ಮ, ಸೇರಿದಂತೆ
ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *