ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಸೆ. 9 : ಸುಪ್ರೀಂ ಕೋರ್ಟ್ ತೀರ್ಪಿನಂತೆ ಪರಿಶಿಷ್ಟರ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಜರೂರಾಗಿ ಜಾರಿ ಮಾಡಲು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಚಿತ್ರದುರ್ಗ ಜಿಲ್ಲಾ ಸಮಿತಿವತಿಯಿಂದ ಪ್ರತಿಭಟನೆಯನ್ನು ನಡೆಸಿ
ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಸಲ್ಲಿಸಲಾಯಿತು.
ಪರಿಶಿಷ್ಟರ ಮೀಸಲಾತಿ ಪರಿಶಿಷ್ಟ ಜನಾಂಗದ 101 ಜಾತಿಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ ಎಂಬ ಆತಂಕ ಹಾಗೂ ಅಸಹನೆಯಿಂದ
ಮೂರು ದಶಕಗಳಿಂದ ರಾಜ್ಯಾದ್ಯಂತ ನಿರಂತರವಾಗಿ ಹೋರಾಟಗಳು ನಡೆಯುತ್ತಿವೆ. ಈ ಹೋರಾಟದಲ್ಲಿ ಹಲವಾರು ಹೋರಾಟಗಾರರು
ಜೀವ, ಜೀವನ ಹಾಗೂ ಬದುಕನ್ನೇ ಕಳೆದುಕೊಂಡಿದ್ದಾರೆ. ಪರಿಶಿಷ್ಟರ ಒಳಮೀಸಾತಿ ವರ್ಗೀಕರಣ ಮಾಡಲು ಕರ್ನಾಟಕ, ಆಂಧ್ರ ಮತ್ತು
ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆದ ಹೋರಾಟಗಳ ಹಿನ್ನಲೆಯಲ್ಲಿ ಹತ್ತಾರು ರಾಜ್ಯ ಸರ್ಕಾರಗಳು ರಚಿಸಿದ ಹಲವಾರು
ಆಯೋಗಗಳು ನೀಡಿದ ವರದಿಗಳನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟಿನ 7 ನ್ಯಾಯಾಧೀಶರ ಸಂವಿಧಾನ ಪೀಠ ಐತಿಹಾಸಿಕ ತೀರ್ಪು
ನೀಡಿ ಈ ವಿವಾದಕ್ಕೆ ತೆರೆ ಎಳೆದಿದೆ ಎಂದಿದ್ದಾರೆ.
ಪರಿಶಿಷ್ಟರ ಮೀಸಲಾತಿ ವರ್ಗೀಕರಣ ರಾಜ್ಯಕ್ಕೆ ಸಂವಿಧಾನದತ್ತ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ.
ಅಲ್ಲದೆ, ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಯಿರವರ ನೇತೃತ್ವದಲ್ಲಿ “ಸಚಿವ ಸಂಪುಟ ಸಭೆ”
ತೀರ್ಮಾನಿಸಿದಂತೆ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಮುಖ್ಯಮಂತ್ರಿ
ಸಿದ್ದರಾಮಯ್ಯನವರಾದ ತಮ್ಮ ನೇತೃತ್ವದಲ್ಲಿ ಸಹ “ಸಚಿವ ಸಂಪುಟದ ಸಭೆಯ” ತೀರ್ಮಾನದಂತೆ ಪರಿಶಿಷ್ಟ ಜಾತಿ ಮೀಸಲಾತಿಯ
ವರ್ಗೀಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ದಲಿತ ಸಂಘರ್ಷ ಸಮಿತಿ ಪರಿಶಿಷ್ಟರ ಮೀಸಲಾತಿ ವರ್ಗೀಕರಣಕ್ಕೆ
ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.
ಸುಪ್ರೀಂ ಕೋರ್ಟ್ ತೀರ್ಪು ನೀಡಿ 40 ದಿನಗಳು ಕಳೆದಿದೆ. ಸರ್ಕಾರ ಈ ಬಗ್ಗೆ ದೃಢ ನಿಲುವು ತಾಳಿಲ್ಲ. ಆದ್ದರಿಂದ ಕರ್ನಾಟಕ
ರವಾನಿಸುತ್ತಿದ್ದೇವೆ. ಕೂಡಲೇ ಮುಖ್ಯಮಂತ್ರಿಗಳು “ಸಚಿವ ಸಂಪುಟದ ಸಭೆ” ನಡೆಸಿ ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವರವರ
ಆಯೋಗದ ವರದಿಯಂತೆ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ಮನವಿ ಮಾಡಿ ಸುಪ್ರೀಂ ಕೋರ್ಟ್‍ನ 7 ನ್ಯಾಯಾಧೀಶರ
ತೀರ್ಪಿನಂತೆ ಪರಿಶಿಷ್ಟರ ಮೀಸಲಾತಿಯಲ್ಲಿ ಒಳಮೀಸಲಾತಿ ಅನುಷ್ಠಾನ ಮಾಡಬೇಕು. 2023-24 ಮತ್ತು 2024-2025ನೇ ಸಾಲಿನಲ್ಲಿ
25,391 ಸಾವಿರ ಕೋಟಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ SಅSP/ಖಿSP ಅಭಿವೃದ್ಧಿ ಹಣವನ್ನು ಸಾಮಾನ್ಯ ಯೋಜನೆಗೆ ಬಳಸಲಾಗಿದೆ.
ರಾಜ್ಯ ಸರ್ಕಾರ ಈ ಹಣವನ್ನು ಈ ಸಮಾಜದ ಅಭಿವೃದ್ಧಿಗೆ ವಾಪಾಸ್ ನೀಡಬೇಕು, ಪರಿಶಿಷ್ಟಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿ
ವೇತನವನ್ನು ಸಕಾಲಕ್ಕೆ ನೀಡುತ್ತಿಲ್ಲ ಹಾಗೂ ಮೆರಿಟ್ ವಿದ್ಯಾರ್ಥಿ ವೇತನ ಮತ್ತು ವಿದೇಶ ವ್ಯಾಸಾಂಗದ ಪ್ರಬುದ್ಧ ಯೋಜನೆ ರದ್ದಾಗಿರುವ
ದಟ್ಟವದಂತಿ ಹಬ್ಬಿದೆ. ಇದನ್ನು ಪುನರಾಂಭಿಸಬೇಕು, ಆ ಪರಿಶಿಷ್ಟ ಮೀಸಲಾತಿ ವರ್ಗೀಕರಣವಾಗುವವರೆಗೂ ಸರ್ಕಾರ ಎಲ್ಲಾ ಉದ್ಯೋಗ
ನೇಮಕಾತಿಗಳನ್ನು ಸ್ಥಗಿತಗೊಳಿಸಲಿ. ಖಾಸಗಿ ಉದ್ಯೋಗ ಕ್ಷೇತ್ರ ಮತ್ತು ಗುತ್ತಿಗೆ ನೇಮಕಾತಿಗಳಲ್ಲಿಯೂ ಎಸ್.ಸಿ./ಎಸ್.ಟಿ ಮೀಸಲಾತಿ
ನೀಡಬೇಕು, ಕೇಂದ್ರ ಸರ್ಕಾರ ಕೂಡಲೇ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಅಭಿವೃದ್ಧಿಗಾಗಿ SಅSP/ಖಿSP ಕಾಯ್ದೆ ರಚಿಸಲಿ ಮತ್ತು
ಜನಸಂಖ್ಯೆಗನುಗುಣವಾಗಿ ಬಜೆಟ್‍ನಲ್ಲಿ ಹಣ ನೀಡಬೇಕು ಎಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ದ.ಸಂ.ಸ.ಯ ಜಿಲ್ಲಾಧ್ಯಕ್ಷ ಎಸ್.ಎನ್.ವಿಶ್ವನಾರಾಯಣಮೂರ್ತಿ, ರಾಜ್ಯಾಧ್ಯಕ್ಷ ಕುಂಚಿಗನಾಳ್ ಮಹಾಲಿಂಗಪ್ಪ,
ವಿಭಾಗೀಯ ಕಾರ್ಯಾಧ್ಯಕ್ಷರಾದ ನೇಹಮಲ್ಲೇಶ್, ಜೈ ಭಾರತ್ ರಕ್ಷಣಾ ವೇದಿಕೆ ಸಂಸ್ಥಾಪಕ ಜಿಲ್ಲಾಧ್ಯಕ್ಷ ಕೆ.ನಾಗಭೂಷಣ್, ಯುವ ಘಟಕದ
ಜಿಲ್ಲಾಧ್ಯಕ್ಷ ಪ್ರದೀಪ್, ಕಾನೂನು ಸಲಹೆಗಾರರಾದ ಪ್ರಭಾಕರ್, ತಾಲ್ಲೂಕು ಉಪಾಧ್ಯಕ್ಷ ಚನ್ನಬಸವ, ತಾಲ್ಲೂಕು ಅಧ್ಯಕ್ಷ ಕಣುಮೇಶ್
ಕಲ್ಲಾಹಟ್ಟಿ, ಶ್ರೀಹರಿ ಇಮ್ರಾನಗ ಬೇಗ್ ಸೇರಿದಂತೆ ಇತರರು ಭಾಗವಹಿಸಿದ್ದರು.