ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಆ. 23 : ಜಿಲ್ಲೆಯಲ್ಲಿ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಈರುಳ್ಳಿ ಹಾಗೂ ತೋಟಗಾರಿಕೆ ಬೆಳೆಗಳು ನಾಶವಾಗಿದ್ದು, ಬೆಳೆ ಸಮೀಕ್ಷೆಯನ್ನು ನಡೆಸಿ, ಬೆಳೆ ಪರಿಹಾರವನ್ನು ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸರ್ಕಾರವನ್ನು ಒತ್ತಾಯಿಸಿದೆ.

ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆಯನ್ನು ನಡೆಸಿದ ರೈತ ಸಂಘದ ಪದಾಧಿಕಾರಿಗಳು,ಜಿಲ್ಲೆಯಲ್ಲಿ ಕಳೆದ ವರ್ಷ ಬರಗಾಲದಿಂದ ತುತ್ತಾಗಿದ್ದು, ಇದರಿಂದ ರೈತರು ಸಾಲಗಾರಾಗಿದ್ದಾರೆ. ಈ ಸಾಲವನ್ನು ತೀರಿಸಲು ಸಾಹಸವನ್ನುಪಡಬೇಕಿದೆ ಭಾರಿ ಆರಂಭದಲ್ಲಿ ಉತ್ತಮ ಮಳೆಯಾಗಿತ್ತು ಆದರೆ ಇತ್ತೀಚೇಗೆ ಸುರಿದ ಮಳೆಗೆ ಈರುಳ್ಳಿ ಮತ್ತು ತೋಟಗಾರಿಕೆ ಮುಂತಾದ
ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಇದರಿಂದ ಸಾಲ ತೀರಿಸಲಾಗದೆ ರೈತರು ಕಂಗಲಾಗಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣವೇ ಬೆಳೆ ಸಮೀಕ್ಷೆಯನ್ನು ಮಾಡಿಸಿ, ರೈತರಿಗೆ ಬೆಳೆ ಪರಿಹಾರವನ್ನು ಕೂಡಿಸುವಂತೆ ಒತ್ತಾಯಿಸಿದ್ದಾರೆ.
ಪರಿಹಾರ ಕೂಡಿಸುವುದ್ದಲ್ಲದೆ ಬೆಳೆ ವಿಮೆಗೆ ಒಳಪಟ್ಟವರಿಗೆ ತಕ್ಷಣ ಬೆಳೆ ವಿಮೆ ಕೊಡಿಸಬೇಕಿದೆ. ಇದ್ದಲ್ಲದೆ ಚಿತ್ರದುರ್ಗ ತಾಲ್ಲೂಕಿನಲ್ಲಿ ಹೆಚ್ಚಾಗಿ ಖುಷ್ಕಿ ಜಮೀನುಗಳಲ್ಲಿ ಸೂರ್ಯಕಾಂತಿಯನ್ನು ಬೆಳೆಯನ್ನು ಬೆಳೆದಿದ್ದಾರೆ. ಇದರ ಖರೀದಿಗೆ ಸರ್ಕಾರ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವುದರ ಮೂಲಕ ರೈತರ ನೆರವಿಗೆ ಬರುವಂತೆ ಸರ್ಕಾರವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಡಿ.ಎಸ್.ಹಳ್ಳಿ ಮಲ್ಲಿಕಾರ್ಜನ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಬಿ.ನಿಜಲಿಂಗಪ್ಪ, ಶಶಿಧರ್,ಕೃಷ್ಣಮೂರ್ತಿ, ರಂಗಸ್ವಾಮಿ, ಬಾಬುರೆಡ್ಡಿ, ಹರಳಯ್ಯ, ರಾಜಶೇಖರಪ್ಪ, ಲೋಕೇಶ್ ಪ್ರತಾಪ್ ರೆಡ್ಡಿ ಸೇರಿದಂತೆ ಇತರರು ಭಾಗವಹಿಸಿದ್ದರು.