ಪರೀಕ್ಷಾ ಶುಲ್ಕ ಮರುಪಾವತಿ ಹಾಗೂ ಪರಿಶಿಷ್ಟಜಾತಿ/ ಪಂಗಡದ ವಿದ್ಯಾರ್ಥಿವೇತನ ಕಡಿತ ವಿರೋಧಿಸಿ ಸರಸ್ವತಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಜು. 23 : ಪರೀಕ್ಷಾ ಶುಲ್ಕ ಮರುಪಾವತಿ ಹಾಗೂ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿವೇತನವನ್ನು ಕಡಿತ ಮಾಡಿರುವುದನ್ನು ವಿರೋಧಿಸಿ ಮಂಗಳವಾರ ಸರಸ್ವತಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ನಗರದ ಜಿಲ್ಲಾಧಿಕಾರಿಗಳ, ಕಚೇರಿ ಬಳಿ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದವರು ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಪರೀಕ್ಷಾ ಶುಲ್ಕವನ್ನು ಮಾಡಿದ್ದು, ಹಿಂದಿನ ವರ್ಷದಲ್ಲಿ ಇದ್ದಂತಹ ಪರೀಕ್ಷಾ ಶುಲ್ಕವನ್ನು ಪ್ರಸ್ತುತ ವರ್ಷದ ಪರೀಕ್ಷಾ ಶುಲ್ಕವನ್ನು ಮುಂದುವರೆಸಿಕೊಂಡು ಹೋಗುವಂತೆ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿವೇತನ ಸರಿಯಾದ ರೀತಿಯಲ್ಲಿ ಹಂಚಿಕೆ ಮಾಡಿರುವುದಿಲ್ಲ. ಸಮಾಜ ಕಲ್ಯಾಣ ಇಲಾಖೆ ಯವರು ಕಡಿತ ಮಾಡಿದ ವಿದ್ಯಾರ್ಥಿ ವೇತನವನ್ನು ಕೂಡಲೇ ಸಂಬಂಧಿಸಿದ (ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ) ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಸಂಬಂಧಪಟ್ಟ ಇಲಾಖೆಯವರು ಕಾನೂ ನಾತ್ಮಕ ಅಗತ್ಯ ಕ್ರಮಗಳನ್ನು ವಹಿಸಿ ಹೆಚ್ಚುವರಿಯಾದ ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡುವುದು ಹಾಗೂ ವಿದ್ಯಾರ್ಥಿವೇತನವನ್ನು ಮಂಜೂರು ಮಾಡುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸರಸ್ವತಿ ಕಾನೂನು ಕಾಲೇಜಿನ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *