
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ,(ಜ.18): ಜಿ.ಎನ್.ಎಂ. ನರ್ಸಿಂಗ್ ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸಬಾರದೆಂದು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಸುಡು ಬಿಸಿಲಿನಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದ ಗೇಟ್‍ನಲ್ಲಿ ಕುಳಿತು ಯಾರು ಒಳ ಹೋಗಲು ಹೊರ ಬರಲು ಅವಕಾಶ ನೀಡದ ನರ್ಸಿಂಗ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಯೆ ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸುವಂತೆ ಪಟ್ಟು ಹಿಡಿದು ಘೋಷಣೆಗಳನ್ನು ಕೂಗಿದರು.
ಜಿಲ್ಲಾಧಿಕಾರಿ ವಿ.ಸಿ.ಯಲ್ಲಿದ್ದ ಕಾರಣ ಬರುವುದು ತಡವಾಗುತ್ತದೆನ್ನುವುದನ್ನು ಅರಿತ ಪ್ರತಿಭಟನಾನಿರತ ವಿದ್ಯಾರ್ಥಿಗಳು ಮಧ್ಯಾಹ್ನ 2.30 ಗಂಟೆಯವರೆಗೆ ಸ್ಥಳ ಬಿಟ್ಟು ಕದಲದೆ ಕಾದಿದ್ದು, ಜಿಲ್ಲಾಧಿಕಾರಿಗೆ ಮನವಿ ಅರ್ಪಿಸಿ ಮರು ಪರೀಕ್ಷೆ ನಡೆಸದಂತೆ ಕೋರಿದರು.
The post ಮರು ಪರೀಕ್ಷೆ ನಡೆಸದಂತೆ ಜಿ.ಎನ್.ಎಂ. ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಭಟನೆ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/0LktwNi
via IFTTT