ವಕ್ಫ್ ಬೋರ್ಡ್ ನಿಂದ ಎಲ್ಲೆಲ್ಲಿ ಸ್ಥಾಪನೆಯಾಗಲಿದೆ ಮಹಿಳಾ ಪಿಯು ಕಾಲೇಜು?

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಂಪುಟ ಸಭೆಯಲ್ಲಿ 47.76 ಕೋಟಿ ರೂ. ವೆಚ್ಚದಲ್ಲಿ 15 ಮಹಿಳಾ. ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಅನುಮೋದನೆ ದೊರೆತಿದೆ. ಪ್ರತಿ ಕಾಲೇಜಿಗೆ 3.18ಕೋಟಿ ರೂ. ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.

ಸಂಪುಟ ಸಭೆಯ ನಂತರ ಜಮೀರ್ ಅಹಮದ್ ಖಾನ್ ಅವರು ಪತ್ರಿಕಾ ಹೇಳಿಕೆ ನೀಡಿದ್ದು, ವಖ್ಫ್ ಬೋರ್ಡ್ ನಲ್ಲಿ ಜಮೆ ಆಗಿರುವ ಬಡ್ಡಿ ಮೊತ್ತ 47.76 ಕೋಟಿ ರೂ. ನಲ್ಲಿ ಬಾಗಲಕೋಟೆ, ಚಿತ್ರದುರ್ಗ, ಬೀದರ್, ಬಳ್ಳಾರಿ, ಕೊಪ್ಪಳ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ವಿಜಯ ನಗರ, ಕಲಬುರಗಿ, ಉಡುಪಿ, ವಿಜಯಪುರ, ಕೋಲಾರ, ದಾವಣಗೆರೆ ಹಾಗೂ ಧಾರವಾಡ ದಲ್ಲಿ ಮಹಿಳಾ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.

ಮಹಿಳಾ ಕಾಲೇಜು ಸ್ಥಾಪನೆಯಿಂದ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ ಕ್ಕೆ ನೆರವಾಗಲಿದೆ ಎಂದು ಹೇಳಿದ್ದಾರೆ. ಇದರ ಜತೆಗೆ, ಕರ್ನಾಟಕ ಗೃಹ ಮಂಡಳಿ ವತಿಯಿಂದ 50:50 ಅನುಪಾತದಲ್ಲಿ ಕಲಬುರಗಿಯ ತಾವರೆಗೆರೆ ಯಲ್ಲಿ 80ಕೋಟಿ ರೂ. ವೆಚ್ಚದಲ್ಲಿ ಒಟ್ಟು 286.28 ಎಕರೆ ಪೈಕಿ ಮೊದಲ ಹಂತದಲ್ಲಿ 87.34 ಎಕರೆ ಜಮೀನಿನಲ್ಲಿ ಹೊಸ ಬಡಾವಣೆ ನಿರ್ಮಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.

ಕೇಂದ್ರದಿಂದ 5000 ಕೋಟಿ ರೂ. ಕೋರಲು ನಿರ್ಣಯ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಕೇಂದ್ರ ಸರ್ಕಾರ ಈ ಭಾಗಕ್ಕೆ ಒಂದು ರೂಪಾಯಿ ಕೂಡ ನೀಡಿಲ್ಲ. ಸಂವಿಧಾನ ತಿದ್ದುಪಡಿಗೊಂಡು 371 ಜೆ ಬಂದ ನಂತರ ಈವರೆಗೆ ಅನುದಾನ ನೀಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರವೂ ಕೂಡ ಈ ಭಾಗದ ಅಭಿವೃದ್ಧಿಗೆ 5000 ಕೋಟಿ ರೂ. ನೀಡಲು ಕೇಂದ್ರಕ್ಕೆ ಮನವಿ ಮಾಡಲು ನಿರ್ಣಯ ಕೈಗೊಳ್ಳಲಾಯಿತು ಎಂದರು.

Source : https://m.dailyhunt.in/news/india/kannada/oneindiakannada-epaper-thatskannada/vakf+bord+nindha+ellelli+sthaapaneyaagalide+mahila+piyu+kaaleju+-newsid-n631355185?listname=topicsList&topic=news&index=23&topicIndex=1&mode=pwa&action=click

 

Leave a Reply

Your email address will not be published. Required fields are marked *