KARNATAKA 2ND PUC RESULTS 2025 : ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ. ಒಟ್ಟಾರೆ ಶೇ.73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಮುಂಬರುವ ದಿನಗಳಲ್ಲಿ ಈ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಪರೀಕ್ಷೆ ಬರೆದಿದ್ದ 6,37,805 ಲಕ್ಷ ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಮೂಲಕ ಶೇ.73.45ರಷ್ಟು ಫಲಿತಾಂಶ ಬಂದಿದೆ. ಕಳೆದ ಸಾಲಿಗೆ ಹೋಲಿಸಿದರೆ ಶೇ.8ರಷ್ಟು ಕುಸಿತವಾಗಿದೆ.
- ಕಲಾ ವಿಭಾಗದಲ್ಲಿ ಬಳ್ಳಾರಿಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಎಲ್.ಆರ್.ಸಂಜನಾಬಾಯಿ ಅವರಿಗೆ ಒಟ್ಟು 600ರಲ್ಲಿ 597 ಅಂಕ ಬಂದಿದೆ.
- ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್ನ ಕೆನೆರಾ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಪಾಶ್ರೀ ಎಸ್. ಅವರು 599 ಅಂಕ ಗಳಿಸುವ ಮೂಲಕ ಟಾಪರ್ ಆಗಿದ್ದಾರೆ.
- ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೋಡಿಬೈಲ್ನ ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ಅವರು 599 ಅಂಕಗಳನ್ನು ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.

ಬಾಲಕಿಯರ ಮೇಲುಗೈ: ಹಿಂದಿನ ವರ್ಷಗಳಂತೆ ಈ ಬಾರಿಯೂ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ಬರೆದಿದ್ದ 3,45,694 ವಿದ್ಯಾರ್ಥಿಗಳ ಪೈಕಿ 2,69,212 ಬಾಲಕಿಯರು ತೇರ್ಗಡೆಯಾಗಿದ್ದಾರೆ. 2,92,211 ಬಾಲಕರ ಪೈಕಿ 1,99,227 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಅದೇ ರೀತಿ, ನಗರ ಪ್ರದೇಶಗಳಲ್ಲಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೈಕಿ ಶೇ.74.55 ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳ ಪೈಕಿ ಶೇ.69.33ರಷ್ಟು ಮಂದಿ ಪಾಸಾಗಿದ್ದಾರೆ.
ಉಡುಪಿ ಫಸ್ಟ್: ಉಡುಪಿ (ಶೇ.93.90), ದಕ್ಷಿಣ ಕನ್ನಡ (93.57) ಹಾಗೂ ಬೆಂಗಳೂರು ದಕ್ಷಿಣ (85.36) ಕ್ರಮವಾಗಿ ಅತಿ ಹೆಚ್ಚು ಫಲಿತಾಂಶ ಪಡೆದ ಜಿಲ್ಲೆಗಳಾಗಿವೆ.
ಯಾದಗಿರಿ ಲಾಸ್ಟ್: ಯಾದಗಿರಿ (ಶೇ.48.45) ಕಲಬುರಗಿ (55.70) ಹಾಗೂ ರಾಯಚೂರು (58.75) ಜಿಲ್ಲೆಗಳು ಅತಿ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳಾಗಿವೆ.
“ಒಟ್ಟಾರೆ ಶೇ.73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು ಬರುವ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಿಸುವತ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
ಟಾಪ್ ಹಾಗೂ ಶೂನ್ಯ ಫಲಿತಾಂಶ ಪಡೆದ ಕಾಲೇಜುಗಳಿವು: ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಹಾಗೂ ವಸತಿ ಶಾಲಾ ಪದವಿ ಪೂರ್ವ ಕಾಲೇಜುಗಳ ಪೈಕಿ 134 ಕಾಲೇಜುಗಳಿಂದ ಶೇ.100ರಷ್ಟು ಫಲಿತಾಂಶ ಬಂದಿವೆ. ಅದೇ ರೀತಿ, 123 ಕಾಲೇಜುಗಳಿಂದ ಶೂನ್ಯರಹಿತ ರಿಸರ್ಲ್ಟ್ ನೀಡಿವೆ.
ಹೊಸದಾಗಿ ಪರೀಕ್ಷೆ ಹಾಜರಾಗಿದ್ದ 6.37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಪಾಸಾಗಿದ್ಧಾರೆ. 33,576 ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 2,987 ಹಾಗೂ 17,297 ಖಾಸಗಿ ಆಭ್ಯರ್ಥಿಗಳ ಪೈಕಿ ಶೇ.4,830 ಮಂದಿ ತೇರ್ಗಡೆಯಾಗಿದ್ದಾರೆ.
ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದಿದ್ದ ಶೇ.56.37 ವಿದ್ಯಾರ್ಥಿಗಳು ಹಾಗೂ ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆ ಎದುರಿಸಿದ್ದ ವಿದ್ಯಾರ್ಥಿಗಳ ಪೈಕಿ ಶೇ.87.75ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ.

ಅನುರ್ತೀರ್ಣರಾದ ವಿದ್ಯಾರ್ಥಿಗಳೇ, ಭಯ ಬೇಡ: ಈ ಬಾರಿ ನಡೆದ ಪರೀಕ್ಷೆಯಲ್ಲಿ ಪಾಸಾಗದ ಅಥವಾ ಫಲಿತಾಂಶದಿಂದ ತೃಪ್ತಿಯಾಗದ ವಿದ್ಯಾರ್ಥಿಗಳು ಇನ್ನೂ ಎರಡು ಪರೀಕ್ಷೆ ಬರೆಯಬಹುದಾಗಿದೆ. ಪರೀಕ್ಷೆ-2 ಏ.24ರಿಂದ ಮೇ 8ರವರೆಗೆ ನಡೆಯಲಿದೆ. ಪರೀಕ್ಷೆ-3 ಜೂನ್ 9ರಿಂದ 21ರವರೆಗೆ ನಡೆಯಲಿದ್ದು, ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪರೀಕ್ಷೆ-2ಕ್ಕೆ ಬರೆಯಲಿರುವ ವಿದ್ಯಾರ್ಥಿಗಳು ಇಂದಿನಿಂದ ಏ.15ರವರೆಗೆ ಹೆಸರು ನೋಂದಾಯಿಸಬಹುದು. ಮರು ಪರೀಕ್ಷೆ ಬರೆಯುವ ಈ ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷಾ ಶುಲ್ಕ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ ಪಡೆಯಲು ಹಾಗೂ ಮರುಮೌಲ್ಯಮಾಪನ ಬಯಸುವ ವಿದ್ಯಾರ್ಥಿಗಳು ಆನ್ಲೈನ್ ಹಾಗೂ ಆಫ್ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಏ.8ರಿಂದ 14ರವರೆಗೆ ಅರ್ಜಿ ಸಲ್ಲಿಬಹುದಾಗಿದೆ. ಏ.12ರಿಂದ 16ರವರೆಗೆ ಉತ್ತರ ಪತ್ರಿಕೆಯ ಸ್ಕ್ಯ್ರಾನ್ ಪ್ರತಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಮೌಲ್ಯಮಾಪನ ಹಾಗೂ ಮರುಎಣಿಕೆಗಾಗಿ ಅರ್ಜಿ ಸಲ್ಲಿಸಲು (ಸ್ಕ್ರ್ಯಾನ್ ಪ್ರತಿ ಪಡೆದುಕೊಂಡವರಿಗೆ ಮಾತ್ರ) ಏ.12ರಿಂದ 17ರವರೆಗೆ ಅರ್ಜಿ ಸಲ್ಲಿಸಬಹುದು. ಪ್ರತಿ ವಿಷಯದ ಸ್ಕ್ಯಾನ್ ಪ್ರತಿಗಾಗಿ 530 ರೂ. ಹಾಗೂ ಮರುಮೌಲ್ಯಮಾಪನ ಶುಲ್ಕ 1,670 ರೂ. ಪಾವತಿಸಬೇಕಿದೆ ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.
ETV Bharat
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1