
ಅಹಮದಾಬಾದ್: ಹದಿನೆಂಟನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಫೈನಲ್ ಮೇಲೆ ಕಣ್ಣಿಟ್ಟಿರುವ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು (PBKS vs MI) ಜೂನ್ ಒಂದರಂದು ಭಾನುವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಕಾದಾಟ ನಡೆಸಲಿವೆ.
ಈ ಪಂದ್ಯದಲ್ಲಿ ಗೆಲುವು ಪಡೆದ ತಂಡ, ಜೂನ್ 3 ರಂದು ಇದೇ ಅಂಗಣದಲ್ಲಿ ನಡೆಯುವ ಫೈನಲ್ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ದ ಕಾದಾಟ ನಡೆಸಲಿವೆ. ಈ ಹಿನ್ನೆಲೆಯಲ್ಲಿ ಈ ಪಂದ್ಯ ಮುಂಬೈ ಹಾಗೂ ಪಂಜಾಬ್ ಎರಡೂ ತಂಡಗಳಿಗೆ ಅತ್ಯಂತ ಮುಖ್ಯವಾಗಿವೆ.
ಟೂರ್ನಿಯ ಲೀಗ್ ಹಂತದಲ್ಲಿ 19 ಅಂಕಗಳನ್ನು ಕಲೆ ಹಾಕಿದ್ದ ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸುವ ಮೂಲಕ ಆರ್‌ಸಿಬಿ ಎದುರು ಮೊದಲನೇ ಕ್ವಾಲಿ ಫೈಯರ್‌ನಲ್ಲಿ ಕಾದಾಟ ನಡೆದಿತ್ತು. ಆದರೆ, ಬ್ಯಾಟಿಂಗ್ ವೈಫಲ್ಯದಿಂದ ಪಂಜಾಬ್ ತಂಡ 8 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತ್ತು. ಇದೀಗ ಎರಡನೇ ಕ್ವಾಲಿಫೈಯರ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಫೈನಲ್‌ಗೆ ಪ್ರವೇಶಿಸಲು ಶ್ರೇಯಸ್ ಅಯ್ಯರ್ ಪಡೆ ಎದುರು ನೋಡುತ್ತಿದೆ.
ಮತ್ತೊಂದು ಕಡೆ ಲೀಗ್ ಹಂತದಲ್ಲಿ 16 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ 16 ಅಂಕಗಳ ಮೂಲಕ ಪ್ಲೇಆಫ್ಸ್‌ಗೆ ಅರ್ಹತೆ ಪಡೆದಿದ್ದ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್, ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 20 ರನ್‌ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಎರಡನೇ ಕ್ವಾಲಿಫೈಯರ್‌ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡಿದೆ. ಇದೀಗ ಅದೇ ಲಯನವನ್ನು ಮುಂದುವರಿಸಿ ಪಂಜಾಬ್ ವಿರುದ್ಧ ಗೆದ್ದು ಫೈನಲ್‌ಗೆ ಪ್ರವೇಶಿಸಲು ಸಜ್ಜಾಗುತ್ತಿದೆ.
ಅಂದ ಹಾಗೆ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಲೀಗ್‌ನಲ್ಲಿ ಒಮ್ಮೆ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 7 ವಿಕೆಟ್‌ಗಳಿಂದ ಮುಂಬೈ ತಂಡವನ್ನು ಮಣಿಸಿತ್ತು. ಇದರ ವಿಶ್ವಾಸದಲ್ಲಿರುವ ಶ್ರೇಯಸ್ ಅಯ್ಯರ್ ಪಡೆ, ಬಲಿಷ್ಠ ಮುಂಬೈ ತಂಡವನ್ನು ಸೋಲಿಸಲು ತಯಾರಿ ನಡೆಸುತ್ತಿದೆ.
ಪಂದ್ಯದ ವಿವರ
ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್
2025ರ ಐಪಿಎಲ್, ಎರಡನೇ ಕ್ವಾಲಿಫೈಯರ್
ದಿನಾಂಕ: ಜೂನ್ 1, 2025
ಸಮಯ: ಸಂಜೆ 07: 30ಕ್ಕೆ
ಸ್ಥಳ: ನರೇಂದ್ರ ಮೋದಿ ಕ್ರೀಡಾಂಗಣ, ಅಹಮದಾಬಾದ್
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಡಿಸ್ನಿ ಹಾಟ್‌ಸ್ಟಾರ್
ಪಿಚ್ ರಿಪೋರ್ಟ್
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಬೌಲರ್‌ಗಳಿಗಿಂತ ಬ್ಯಾಟ್ಸ್‌ಮನ್‌ಗಳಿಗೆ ಸ್ವಲ್ಪ ಜಾಸ್ತಿ ನೆರವು ನೀಡುತ್ತದೆ. ಆದರೂ ಕೊನೆಯ ಪಂದ್ಯದಲ್ಲಿ ಎರಡೂ ತಂಡಗಳು 200ಕ್ಕೂ ಅಧಿಕ ರನ್‌ಗಳನ್ನು ಕಲೆ ಹಾಕಿದ್ದವು. ಈ ಅಂಗಣದಲ್ಲಿ ಟಾಸ್ ಗೆದ್ದ ತಂಡದ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಬಹುದು.
ಮುಖಾಮುಖಿ ದಾಖಲೆ
ಒಟ್ಟು ಆಡಿರುವ ಪಂದ್ಯಗಳು: 32
ಮುಂಬೈ ಇಂಡಿಯನ್ಸ್: 17
ಪಂಜಾಬ್ ಕಿಂಗ್ಸ್: 15
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ಪಂಜಾಬ್ ಕಿಂಗ್ಸ್: ಪ್ರಭ್‌ಸಿಮ್ರನ್ ಸಿಂಗ್, ಪ್ರಿಯಾಂಶ್ ಆರ್ಯ, ಜಾಶ್ ಇಂಗ್ಲಿಸ್ (ವಿ.ಕೀ), ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೋಯ್ನಿಸ್, ಅಝಮತ್‌ವುಲ್ಲಾ ಒಮರ್ಜಾಯ್, ಹರಪ್ರೀತ್ ಬ್ರಾರ್ ಹಾಗೂ ಅರ್ಷದೀಪ್ ಸಿಂಗ್
ಇಂಪ್ಯಾಕ್ಟ್ ಪ್ಲೇಯರ್: ಪ್ರವೀಣ್ ದುಬೆ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಜಾನಿ ಬೈರ್‌ಸ್ಟೋವ್ (ವಿ.ಕೀ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ರಾಜ್ ಬಾವಾ, ಮಿಚೆಲ್ ಸ್ಯಾಂಟ್ನರ್, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್ ಬುಮ್ರಾ, ರಿಚರ್ಡ್ ಗ್ಲೀಸನ್
ಇಂಪ್ಯಾಕ್ಟ್ ಪ್ಲೇಯರ್: ಅಶ್ವಿನಿ ಕುಮಾರ್
Vishwavani
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1