ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ಕಿಡಿ: ಸಾಂವಿಧಾನಿಕ ಸಂಸ್ಥೆಗಳಿಗೆ ಅಗೌರವ ಆರೋಪ.

ಚಿತ್ರದುರ್ಗ ಅ. 7

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಸಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗದ ವಿರುದ್ಧ ಬೀದಿಯಲ್ಲಿ ನಿಂತು ಪ್ರತಿಭಟನೆ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಆಯೋಗದ ವಿರುದ್ಧ ಆಕ್ಷೇಪಣೆಗಳಿದ್ದರೆ ಸಂಸತ್ತಿನಲ್ಲಿ ಚರ್ಚಿಸಿ, ನಿಯಮಾವಳಿಗಳ ಪ್ರಕಾರ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಪಕ್ಷವು ಗೆದ್ದಾಗ ಚುನಾವಣಾ ಆಯೋಗ ಸರಿ ಇರುತ್ತದೆ, ಸೋತಾಗ ಆಯೋಗದ ಮೇಲೆ ಗೂಬೆ ಕೂರಿಸುತ್ತದೆ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಕಾಂಗ್ರೆಸ್ ನಾಯಕರ ಮೇಲೆ ಹರಿದಾಯ್ದರು.

ಚಿತ್ರದುರ್ಗ ನಗರದಲ್ಲಿ ವಾಲ್ಮಿಕೀ ಭವನದಲ್ಲಿ ನಡೆದ ಸೇವಾ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿಯಲ್ಲಿ ರಾಹುಲ್ ಗಾಂಧಿ ನಡೆಸುತ್ತಿರುವ ಪ್ರತಿಭಟನೆಯನ್ನು ಟೀಕಿಸಿದ ಅವರು, ರಾಹುಲ್ ಗಾಂಧಿ ನಡೆಸುತ್ತಿರುವ ಪ್ರತಿಭಟನೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಇತ್ತೀಚಿನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿದ ಅವರು, ಕಾಂಗ್ರೆಸ್ ನಾಯಕರು ಸಾಂವಿಧಾನಿಕ ಸಂಸ್ಥೆಗಳಿಗೆ ಅಗೌರವ ತೋರುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಇಡಿ, ಸಿಬಿಐ ಹಾಗೂ ನ್ಯಾಯಾಂಗದಂತಹ ಸಾಂವಿಧಾನಿಕ ಸಂಸ್ಥೆಗಳಿಗೆ ನಿರಂತರವಾಗಿ ಅಗೌರವ ತೋರುತ್ತಿದ್ದಾರೆ ಇನ್ನು ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿ ಅಧಿಕಾರದ ಮದ ನೆತ್ತಿಗೇರಿರುವ ಡಿ.ಕೆ. ಶಿವಕುಮಾರ್ ಅವರು ಮಠಾಧೀಶರ ಹಾಗೂ ಸ್ವಾಮೀಜಿಗಳ ಕುರಿತು ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದರು.

ಮಾಧ್ಯಮಗಳು ವರದಿ ಮಾಡಿರುವ ದೃಶ್ಯಾವಳಿಗಳು ಸತ್ಯವಾಗಿದ್ದು, ಮಾಧ್ಯಮಗಳ ಮೇಲೆ ಗೂಬೆ ಕೂರಿಸುವು ದನ್ನು ಬಿಟ್ಟು ಮಠಾಧೀಶರ ಹಾಗೂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಈ ರೀತಿಯ ನಡೆಯನ್ನು ರಾಜ್ಯ ಹಾಗೂ ದೇಶದ ಜನತೆ ತಿರಸ್ಕರಿಸಿದ್ದು, ಮುಂಬರುವ ಚುನಾವಣೆಗಳಲ್ಲಿ ಅವರಿಗೆ ಸೂಕ್ತ ಪಾಠ ಕಲಿಸಲಿದ್ದಾರೆ ಎಂದು ಆರ್.ಅಶೋಕ್ ತಿಳಿಸಿದರು.

ದೇಶಾದ್ಯಂತ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಸೇವಾ ಸಂಕಲ್ಪ ಯಾತ್ರೆ ಹಾಗೂ ಸೇವಾ ಜ್ಯೋತಿ' ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿವೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಜೀವನದ 25 ವರ್ಷಗಳಲ್ಲಿ ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಿಯಾಗಿ ದೇಶದ ಭವಿಷ್ಯವನ್ನು ರೂಪಿಸಿದ್ದಾರೆ. ಬಡವರು, ದಲಿತರು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಗೌರವಿಸುವ ಉದ್ದೇಶದಿಂದ ಈ ಸೇವಾ ಸಂಕಲ್ಪ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಮಾಜಿ ಅಧ್ಯಕ್ಷ ಎ. ಮುರಳಿ ಸೇರಿದಂತೆ ಇತರರು ಹಾಜರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
🟠 Instagram
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *