ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ, ಆರ್ಥಿಕ ಬಿಕ್ಕಟ್ಟು: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ, ಅ. 31: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ದುರ್ಬಲಗೊಂಡಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಸರ್ಕಾರದ ವೈಫಲ್ಯಗಳಿಂದ ರೈತರು ಸೇರಿದಂತೆ ಜನಸಾಮಾನ್ಯರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ಸರ್ಕಾರ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕಿಸಿದರು.

ಶನಿವಾರ ಚಿತ್ರದುರ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ವೈಖರಿ ಮತ್ತು ಆರ್ಥಿಕ ಸ್ಥಿತಿಗತಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ. ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾರಿಗೆ ಬಸ್‌ಗಳನ್ನು ಸಂಚರಿಸಲು ಡೀಸೆಲ್ ಖರೀದಿಸುವುದಕ್ಕೂ ಹಣದ ಕೊರತೆಯಿದೆ ಎಂದು ಅವರು ಆರೋಪಿಸಿದರು. ಕಬ್ಬು ಬೆಳೆಗಾರರು ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ. ರೈತರಿಗೆ ಪರಿಹಾರ ನೀಡುವ ವಿಚಾರದಲ್ಲಿಯೂ ಹಲವು ಷರತ್ತುಗಳನ್ನು ವಿಧಿಸಲಾಗುತ್ತಿದೆ ಎಂದು ದೂರಿದರು.

ರೈತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ, ನೆರವು ಪಡೆಯಲು ಅನೇಕ ನಿಯಮಗಳನ್ನು ರೂಪಿಸಿದೆ. ಇದರಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ಯೋಜನೆಗಳ ಪ್ರಯೋಜನ ಸುಲಭವಾಗಿ ತಲುಪುತ್ತಿಲ್ಲ ಎಂದು ಟೀಕಿಸಿದರು.

ರಾಜ್ಯದ ರಸ್ತೆಗಳು ಹದಗೆಟ್ಟಿದ್ದು, ನೀರಾವರಿ ಯೋಜನೆಗಳಿಗೂ ನಿರೀಕ್ಷಿತ ಪ್ರಮಾಣದಲ್ಲಿ ಹಣ ಬಿಡುಗಡೆಯಾಗುತ್ತಿಲ್ಲ. ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು ಆರೋಪಿಸಿದ ಅವರು, ಅಬಕಾರಿ ಇಲಾಖೆಯಲ್ಲಿನ ಅಕ್ರಮಗಳ ಜೊತೆಗೆ ಬೆಂಗಳೂರಿನ ಕಸ ನಿರ್ವಹಣೆ ವಿಚಾರದಲ್ಲಿಯೂ ಲೂಟಿ ನಡೆಯುತ್ತಿದೆ ಎಂದು ಗಂಭೀರವಾಗಿ ದೂರಿದರು.

ಕಾಂಗ್ರೆಸ್ ಪಕ್ಷದ ಶಾಸಕರಿಗೂ ಕ್ಷೇತ್ರಗಳ ಅಭಿವೃದ್ಧಿಗಾಗಿ ಅಗತ್ಯ ಅನುದಾನ ದೊರೆಯುತ್ತಿಲ್ಲ. ಇದರಿಂದ ಪಕ್ಷದೊಳಗೇ ಅಸಮಾಧಾನ ಹೆಚ್ಚಾಗಿದೆ ಎಂದು ಹೇಳಿದ ಅವರು, ಜನಸಾಮಾನ್ಯರ ಮೇಲೆ ನಿರಂತರವಾಗಿ ಬೆಲೆ ಏರಿಕೆಯ ಹೊರೆ ಬೀಳುತ್ತಿದೆ. ವಿದ್ಯುತ್ ದರ ಏರಿಕೆಯಿಂದ ಕಾಫಿ, ಟೀ, ಮೊಸರು ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗಿ ಜನರ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ, ಸಿಡಿ ಪ್ರಕರಣದ ವಿಚಾರವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ಮಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಮತ್ತೆ ಪ್ರಧಾನಿಯಾಗುತ್ತಿರುವುದನ್ನು ಸಹಿಸದ ಕಾಂಗ್ರೆಸ್ ನಾಯಕರು ಇವಿಎಂ ವಿಚಾರದಲ್ಲಿ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಡಾ. ಎಂ. ಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೆ ಹಾಗೂ ಗ್ರಾಮಾಂತರ ಅಧ್ಯಕ್ಷ ನಾಗರಾಜ್ ಛಲವಾದಿ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *