ಬೆಂಗಳೂರು ಆಕಾಶವಾಣಿ ಕೇಂದ್ರದಲ್ಲಿ ರೇಡಿಯೋ ಜಾಕಿ ಹುದ್ದೆಗೆ ಅರ್ಜಿ ಆಹ್ವಾನ.

BENGALURU ALL INDIA RADIO JOBS : ಆಕಾಶವಾಣಿ ಕೇಂದ್ರದಲ್ಲಿ ಸಾಂದರ್ಭಿಕ ಉದ್ಘೋಷಕರಾಗಿ ಕಾರ್ಯನಿರ್ವಹಿಸಲು ಅರ್ಹ, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು: ಆಕಾಶವಾಣಿ ಬೆಂಗಳೂರು ಕೇಂದ್ರದಲ್ಲಿ ಸಾಂದರ್ಭಿಕ ಉದ್ಘೋಷಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಅಧಿಕೃತ ವಿಶ್ವವಿದ್ಯಾಲಯದಿಂದ ಪದವಿ. ಬೆಂಗಳೂರು ನಗರ ನಿವಾಸಿಯಾಗಿರಬೇಕು.

ಕನ್ನಡ ಭಾಷೆಯ ಸ್ಪಷ್ಟ ಉಚ್ಛಾರಣೆ, ಸಾಹಿತ್ಯ, ಸಂಗೀತ, ಕಲೆ, ಸಂಸ್ಕೃತಿಯ ಪರಿಜ್ಞಾನ, ದೈನಂದಿನ ಆಗು-ಹೋಗುಗಳ ಬಗ್ಗೆ ತಿಳುವಳಿಕೆಯ ಜೊತೆಗೆ ಕಂಪ್ಯೂಟರ್​ ಜ್ಞಾನ ಹೊಂದಿರಬೇಕು.

ವಯೋಮಿತಿ: ಕನಿಷ್ಠ 21 ವರ್ಷ, ಗರಿಷ್ಠ 50 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಕೆ: ಖುದ್ದು ಬೆಂಗಳೂರು ಆಕಾಶವಾಣಿ ಕೇಂದ್ರಕ್ಕೆ ಆಗಮಿಸಿ ನಿಗದಿತ ಅರ್ಜಿ ನಮೂನೆ ಪಡೆದು ನಿಗದಿತ ದಿನಾಂಕಕ್ಕೆ ಮುನ್ನ ಅರ್ಜಿ ಸಲ್ಲಿಸಬೇಕು.

Bengaluru ALL india Radio Invited Application for Radio Jockey

ಅಧಿಸೂಚನೆ (ಬೆಂಗಳೂರು ಆಕಾಶವಾಣಿ ಕೇಂದ್ರ)

ಅರ್ಜಿ ಸಲ್ಲಿಸುವ ವಿಳಾಸ: ನಿಲಯ ನಿರ್ದೇಶಕರು, ಕಾರ್ಯಕ್ರಮ ಸಮನ್ವಯ ವಿಭಾಗ, ಆಕಾಶವಾಣಿ, ಪ್ರಸಾರ ಭಾರತಿ, ರಾಜಭವನ ರಸ್ತೆ, ಬೆಂಗಳೂರು- 560001.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 354 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 266 ರೂ ಶುಲ್ಕ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಧ್ವನಿ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ.

ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಮೇ 23.

ವಿಶೇಷ ಸೂಚನೆ: ಈ ಹುದ್ದೆಗೆ ಯಾವುದೇ ಆನ್​ಲೈನ್​ ಅರ್ಜಿ ಪಡೆಯಲು ಮತ್ತು ಅರ್ಜಿ ಸಲ್ಲಿಕೆಗೆ ಅವಕಾಶವಿಲ್ಲ

Leave a Reply

Your email address will not be published. Required fields are marked *