ಕಾಂಗ್ರೆಸ್ ಸಂಘಟನೆ ಬಲವರ್ಧನೆಗೆ ಹೊಸ ಅಭಿಯಾನ: ಹಿರಿಯೂರು ಉಪಚುನಾವಣೆ ಗೆಲುವಿಗೆ ತಳಮಟ್ಟದ ಸಿದ್ಧತೆ.

ಚಿತ್ರದುರ್ಗ ಆ. 28

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಮುಂಬರುವ ಉಪಚುನಾವಣೆಗಳು ಹಾಗೂ 2028-29ರ ಸಾರ್ವತ್ರಿಕ ಚುನಾವಣೆಗಳನ್ನು ಎದುರಿಸಲು ಕಾಂಗ್ರೆಸ್ ಪಕ್ಷವು ತಳಮಟ್ಟದಿಂದ ಸಂಘಟನೆಯನ್ನು ಬಲಪಡಿಸುತ್ತಿದ್ದು, ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಸಂಘಟನಾ ಸೃಜನ ಅಭಿಯಾನ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರು ಪಿ ವಿ ಮೋಹನ್ ರವರು ತಿಳಿಸಿದರು.

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಾಗೂ ಎಸ್‍ಐಆರ್ ಬಗ್ಗೆ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ತಾವು ಹಿರಿಯೂರು ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಇಲ್ಲಿನ ಎರಡು ಬ್ಲಾಕ್‍ಗಳ ಸಭೆ ನಡೆಸಿ ಸದ್ಯದ ಪಕ್ಷದ ಪರಿಸ್ಥಿತಿ, ಅನುಕೂಲ-ಅನನುಕೂಲಗಳು ಹಾಗೂ ಬೂತ್ ಮಟ್ಟದ ಸಾಮಥ್ರ್ಯದ ಕುರಿತು ಹಿರಿಯ ನಾಯಕರು ಮತ್ತು ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿರುವುದಾಗಿ ಹೇಳಿದರು.

ಈ ಭೇಟಿಯ ಮುಖ್ಯ ಉದ್ದೇಶ ಅಭ್ಯರ್ಥಿಗಳ ಆಯ್ಕೆಯ ಕುರಿತು ಚರ್ಚಿಸುವುದಲ್ಲ, ಬದಲಿಗೆ ಪಕ್ಷದ ಸಂಘಟನಾ ಬಲವನ್ನು ಪರಿಶೀಲಿಸುವುದಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಮುಂಬರುವ ಚುನಾವಣೆಯ ಪೂರ್ವಭಾವಿಯಾಗಿ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿ ದ್ದು, ಮುಂದಿನ ಒಂದು ತಿಂಗಳ ಅವಧಿಯಲ್ಲಿ ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸುವುದು ಹಾಗೂ ಅನರ್ಹರನ್ನು ತೆಗೆದುಹಾಕುವ ಕಾರ್ಯದಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಮತ್ತು ಗ್ಯಾರಂಟಿ ಸಮಿತಿ ಅಧ್ಯಕ್ಷರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿ ಅಧಿಕಾರದಲ್ಲಿದ್ದಾಗ ಪಕ್ಷ ಸಂಘಟನೆ ಸ್ವಲ್ಪ ಹಿನ್ನೆಡೆಯಾಗುವುದು ಸಹಜ. ಇದನ್ನು ಸರಿಪಡಿಸಲು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಅಭಿಯಾನ ಆರಂಭಿಸಲಾಗಿದೆ.

ಮೇಲಿಂದ ನಾಯಕರನ್ನು ಹೇರುವ ಬದಲು, ತಳಮಟ್ಟದ ಕಾರ್ಯಕರ್ತರ ಧ್ವನಿಗೆ ಆದ್ಯತೆ ನೀಡಿ ಜಿಲ್ಲಾ ಕಾಂಗ್ರೆಸ್ ಸಮಿತಿ (ಆಅಅ) ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು.ಸೆಪ್ಟೆಂಬರ್ ಮೊದಲ ವಾರದಲ್ಲಿ ರಾಜ್ಯದ 40 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ಘೋಷಿಸುವ ಸಾಧ್ಯತೆಯಿದೆ ಇದರ ನಂತರ ಅಭಿಯಾನದ ಎರಡನೇ ಹಂತದಲ್ಲಿ ಬ್ಲಾಕ್ ಹಾಗೂ ಬೂತ್ ಮಟ್ಟದ ಸಮಿತಿಗಳನ್ನು ಪುನರ್ರಚಿಸಲಾಗುವುದು. 2028ರ ವೇಳೆಗೆ ಪಕ್ಷವನ್ನು ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಳಿಸಲಾಗುವುದು ಎಂದರು.

ಪಕ್ಷದ ಹೊಸ ಸಂಘಟನಾ ಶೈಲಿಯಲ್ಲಿ ಜಂಬೋ ಕಮಿಟಿಗಳಿಗೆ ಅವಕಾಶವಿರುವುದಿಲ್ಲ; ಚಿಕ್ಕದಾದ ಮತ್ತು ಪರಿಣಾಮಕಾರಿ ಸಮಿತಿಗಳನ್ನು ರಚಿಸಲಾಗುವುದು. ಜಿಲ್ಲಾ ನಾಯಕತ್ವದ ಆಯ್ಕೆಗಾಗಿ ಆರು ಹೆಸರುಗಳನ್ನು ಶಿಫಾರಸು ಮಾಡಲು ಸೂಚಿಸಲಾಗಿದ್ದು, ಇದರಲ್ಲಿ ಮಹಿಳೆಯರು, ಯುವಕರು, ಒಬಿಸಿ, ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತರು ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ನಾಯಕರಿಗೆ ಪ್ರಾತಿನಿಧ್ಯ ನೀಡಲಾಗುತ್ತದೆ.

ಒಟ್ಟಾರೆಯಾಗಿ ಶೇಕಡಾ 60ರಷ್ಟು ಅವಕಾಶವನ್ನು ಅಹಿಂಧ, ಯುವಕರು ಮತ್ತು ಮಹಿಳೆಯರಿಗೆ ನೀಡಲಾಗುವುದು. ಈಗಾಗಲೇ ಕಳೆದ ಮೂರು ಉಪಚುನಾವಣೆಗಳಲ್ಲಿ ಪಕ್ಷವು ಅತ್ಯುತ್ತಮ ಗೆಲುವು ಸಾಧಿಸಿದೆ. ಶಿಗ್ಗಾಂವಿ ಕ್ಷೇತ್ರದಲ್ಲೂ ಸವಾಲುಗಳ ನಡುವೆ ಸಾಗಿದ ರೀತಿಯಲ್ಲೇ, ಹಿರಿಯೂರು ಕ್ಷೇತ್ರದಲ್ಲೂ ಸಹ ಗೆಲುವು ಸಾಧಿಸುವ ವಾತಾವರಣವಿದೆ. ಕಾಂಗ್ರೆಸ್ ಪಕ್ಷದಲ್ಲಿ ಪ್ರಜಾಸತ್ತಾತ್ಮಕವಾಗಿ ಆಕಾಂಕ್ಷಿಗಳ ನಡುವೆ ಸ್ಪರ್ಧೆ ಮತ್ತು ಚರ್ಚೆಗಳು ಇರುವುದು ಸಹಜ. ಆದರೆ ಒಮ್ಮೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಂಡ ಬಳಿಕ ಪ್ರತಿಯೊಬ್ಬರೂ ಒಂದಾಗಿ ಶ್ರಮಿಸುವ ಸಂಸ್ಕೃತಿ ಕಾಂಗ್ರೆಸ್‍ನಲ್ಲಿದೆ ಎಂದು ತಿಳಿಸಿದರು.

ತಳಮಟ್ಟದಿಂದ ಪಕ್ಷವನ್ನು ಗಟ್ಟಿಗೊಳಿಸುವ ಮೂಲಕ ಮುಂಬರುವ ಉಪಚುನಾವಣೆಗಳನ್ನು ಗೆಲ್ಲುವುದು ಹಾಗೂ 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡು ವುದೇ ಈ ಎಲ್ಲಾ ಸಂಘಟನಾತ್ಮಕ ಚಟುವಟಿಕೆಗಳ ಮುಖ್ಯ ಗುರಿಯಾಗಿದೆ ಎಂದು ಎಐಸಿಸಿ ಕಾರ್ಯ ದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರು ಪಿ.ವಿ.ಮೋಹನ್ ರವರು ತಿಳಿಸಿದರು.

ಈ ಸಂದರ್ಭದಲ್ಲಿ ಸಹ ಸಂಚಾಲಕರಾದ ಸಂದೀಪ್ ಕುಮಾರ್, ಕೆಪಿಸಿಸಿ ವಕ್ತರರಾದ ಲಕ್ಷ್ಮೀಪತಿ, ಮಿನಿರ ಅಬ್ದುಲ್, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಂ.ಕೆ. ತಾಜ್‍ಪೀರ್, ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಕೆ.ಪಿ. ಸಂಪತ್ ಕುಮಾರ್ ,ಮೈಲಾರಪ್ಪ, ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷರಾದ ಶಿವಣ್ಣ ಗಂಜಿಗಟ್ಟೆ, ಮುನಿರಾ ಮಕಾಂದರ್, ಮಧುಗೌಡ, ನರಹರಿ ಸೇರಿದಂತೆ ಇತರರು ಭಾಗವಹಿಸಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *