ಕೇಂದ್ರ ಸರ್ಕಾರಿ ನೌಕರಿ ಪಡೆಯುವ ಕನಸು ಕಾಣುತ್ತಿರುವ ಯುವಕರಿಗೆ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ರೈಲ್ವೆ ಸಚಿವಾಲಯದ ಅಧೀನದಲ್ಲಿ ಬರುವ ‘ರೈಲ್ವೆ ನೇಮಕಾತಿ ಮಂಡಳಿ’ಯು (RRB) ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 4,029 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಮುಖ್ಯವಾಗಿ ಜೂನಿಯರ್ ಎಂಜಿನಿಯರ್ (JE) ಹಾಗೂ ಡಿಪೋಟ್ ಮೆಟೀರಿಯಲ್ ಸೂಪರಿಟೆಂಡೆಂಟ್ (DMS) ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಇದರಲ್ಲಿ ಆರ್ಆರ್ಬಿ ಬೆಂಗಳೂರು ವಲಯದಲ್ಲಿಯೇ 299 ಹುದ್ದೆಗಳು ಲಭ್ಯವಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟೆಂಬರ್ 13 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ.
ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:
- ವಿದ್ಯಾರ್ಹತೆ: ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿ ಅಥವಾ 3 ವರ್ಷಗಳ ಡಿಪ್ಲೋಮಾ ಕೋರ್ಸ್ ಪೂರ್ಣಗೊಳಿಸಿದವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.
- ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 33 ವರ್ಷಗಳ ಒಳಗೆ ಇರಬೇಕು.
- ವಯೋಮಿತಿ ಸಡಿಲಿಕೆ: ಸರ್ಕಾರದ ನಿಯಮಾವಳಿಗಳ ಪ್ರಕಾರ ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ವರ್ಗಕ್ಕೆ 3 ವರ್ಷ, ಮಾಜಿ ಸೈನಿಕರಿಗೆ 3 ರಿಂದ 8 ವರ್ಷ ಹಾಗೂ ವಿಕಲಚೇತನ (PwBD) ಅಭ್ಯರ್ಥಿಗಳಿಗೆ 10 ರಿಂದ 15 ವರ್ಷಗಳ ವರೆಗೆ ವಯೋಮಿತಿಯಲ್ಲಿ ರಿಯಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕದ ವಿವರ:
- ಸಾಮಾನ್ಯ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: ರೂ. 500/-
- ಎಸ್ಸಿ, ಎಸ್ಟಿ, ಇಬಿಸಿ, ಮಾಜಿ ಸೈನಿಕರು, ಮಹಿಳೆಯರು ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ: ರೂ. 250/-
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ? ಅರ್ಹ ಅಭ್ಯರ್ಥಿಗಳನ್ನು ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು (CBT- 1 ಮತ್ತು CBT- 2), ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕ 35,400 ರೂ.ಗಳ ಆಕರ್ಷಕ ಆರಂಭಿಕ ವೇತನ ಸಿಗಲಿದೆ.
ಪರೀಕ್ಷಾ ವಿಧಾನ (CBT 1 & 2):
- ಮೊದಲ ಹಂತದ ಸಿಬಿಟಿ (CBT-1): 90 ನಿಮಿಷಗಳ ಕಾಲ ನಡೆಯುವ ಈ ಪರೀಕ್ಷೆಯಲ್ಲಿ ಒಟ್ಟು 100 ಪ್ರಶ್ನೆಗಳಿರುತ್ತವೆ. ಗಣಿತ (30), ಜನರಲ್ ಇಂಟೆಲಿಜೆನ್ಸ್ & ರೀಸನಿಂಗ್ (25), ಜನರಲ್ ಅವರ್ನೆಸ್ (15) ಮತ್ತು ಸಾಮಾನ್ಯ ವಿಜ್ಞಾನದಿಂದ (30) ಪ್ರಶ್ನೆಗಳು ಬರಲಿವೆ.
- ಎರಡನೇ ಹಂತದ ಸಿಬಿಟಿ (CBT-2): 120 ನಿಮಿಷಗಳ ಕಾಲಾವಕಾಶವಿದ್ದು, 150 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಇದರಲ್ಲಿ ತಾಂತ್ರಿಕ ಸಾಮರ್ಥ್ಯದ (100 ಪ್ರಶ್ನೆ) ಜೊತೆಗೆ, ಸಾಮಾನ್ಯ ಜ್ಞಾನ, ಭೌತಶಾಸ್ತ್ರ, ರಸಾಯನಶಾಸ್ತ್ರ, ಕಂಪ್ಯೂಟರ್ ಮತ್ತು ಪರಿಸರ ವಿಜ್ಞಾನದ ಮೂಲಭೂತ ಪ್ರಶ್ನೆಗಳು ಒಳಗೊಂಡಿರುತ್ತವೆ.
- ಸೂಚನೆ: ಎರಡೂ ಹಂತದ ಪರೀಕ್ಷೆಗಳಲ್ಲಿ ನೆಗೆಟಿವ್ ಮಾರ್ಕಿಂಗ್ (ಋಣಾತ್ಮಕ ಮೌಲ್ಯಮಾಪನ) ಇರುವುದರಿಂದ, ಅಭ್ಯರ್ಥಿಗಳು ಎಚ್ಚರಿಕೆಯಿಂದ ಉತ್ತರಿಸುವುದು ಅಗತ್ಯ.
ಅರ್ಜಿ ಸಲ್ಲಿಸುವ ಸರಳ ವಿಧಾನ:
- ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್ಸೈಟ್ https://www.rrbapply.gov.in ಗೆ ಭೇಟಿ ನೀಡಿ.
- ಮುಖಪುಟದಲ್ಲಿ ‘Create An Account’ ಮೇಲೆ ಕ್ಲಿಕ್ ಮಾಡಿ ನಿಮ್ಮ ವಿವರಗಳನ್ನು ನೀಡಿ ನೋಂದಾಯಿಸಿಕೊಳ್ಳಿ.
- ಬಳಿಕ ಲಾಗಿನ್ ಆಗಿ, ಆನ್ಲೈನ್ ಅರ್ಜಿಯಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ನಿಖರವಾಗಿ ಭರ್ತಿ ಮಾಡಿ.
- ನಿಮ್ಮ ವರ್ಗಕ್ಕೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
- ಒಮ್ಮೆ ಭರ್ತಿ ಮಾಡಿದ ವಿವರಗಳನ್ನು ಪರಿಶೀಲಿಸಿ, ‘Submit’ ಬಟನ್ ಕ್ಲಿಕ್ ಮಾಡಿ.
- ಮುಂದಿನ ರೆಫರೆನ್ಸ್ಗಾಗಿ ಅರ್ಜಿ ನಮೂನೆಯ ಪ್ರಿಂಟ್ ಅಥವಾ ಡೌನ್ಲೋಡ್ ಮಾಡಿಟ್ಟುಕೊಳ್ಳಿ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j