Railway Recruitment: ಭಾರತೀಯ ರೈಲ್ವೆ ನೇಮಕಾತಿ, 790 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Indian Railway Jobs 2023: ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 234 ಅಸಿಸ್ಟೆಂಟ್ ಲೋಕೋ ಪೈಲೆಟ್, 27 ಟ್ರೈನಿ ಮ್ಯಾನೇಜರ್, 168 ಜ್ಯೂನಿಯರ್ ಇಂಜಿನಿಯರ್ ಮತ್ತು 361 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.  

ನವದೆಹಲಿ: ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 790 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 30ರೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.  

ಈ ಸಂಬಂಧ ನೈರುತ್ಯ  ರೈಲ್ವೆ ಇಲಾಖೆಯ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಅಸಿಸ್ಟೆಂಟ್ ಲೋಕೋ ಪೈಲೆಟ್, ಟೆಕ್ನೀಶಿಯನ್ ಮತ್ತು ಟ್ರೈನಿ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಹುದ್ದೆಗಳ ವಿವರ: ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 234 ಅಸಿಸ್ಟೆಂಟ್ ಲೋಕೋ ಪೈಲೆಟ್, 27 ಟ್ರೈನಿ ಮ್ಯಾನೇಜರ್, 168 ಜ್ಯೂನಿಯರ್ ಇಂಜಿನಿಯರ್ ಮತ್ತು 361 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.  

ವಿದ್ಯಾರ್ಹತೆ: ಅಭ್ಯರ್ಥಿಗಳು ಅಸಿಸ್ಟೆಂಟ್ ಲೋಕೋ ಪೈಲಟ್ ಹಾಗೂ ಟೆಕ್ನಿಶಿಯನ್ ಹುದ್ದೆಗಳಿಗೆ SSLC ಮತ್ತು ಐಟಿಐ, ಪದವಿ ಮಾಡಿರಬೇಕು. ಜ್ಯೂನಿಯರ್ ಇಂಜಿನಿಯರಿಂಗ್ ಹುದ್ದೆಗಳಿಗೆ ಡಿಪ್ಲೋಮಾ ಪದವಿ ಮತ್ತು ಟೆಕ್ನಿಶಿಯನ್ ಹುದ್ದೆಗೆ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಗರಿಷ್ಠ ವಯೋಮಿತಿ 42 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು www.rrcmas.in ವೆಬ್‍ಸೈಟ್‍ಗೆ ಭೇಟಿ ನೀಡಿ ಆನ್‍ಲೈನ್‍ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ಬಹು ಆಯ್ಕೆ ಮಾದರಿ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ನಡೆಸಿ, ನೇಮಕಾತಿ ಆದೇಶವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಗೆ ಆಗಸ್ಟ್ 30 ಕೊನೆಯ ದಿನಾಂಕ ಆಗಿರುತ್ತದೆ. ಈ  ಹುದ್ದೆಗಳಿಗೆ ಸಂಬಂಧಿಸಿದ ಮತ್ತುಷ್ಟು ಮಾಹಿತಿಗೆ ಆಸಕ್ತ ಅಭ್ಯರ್ಥಿಗಳು 044-28213185 ಸಂಖ್ಯೆಗೆ ಕರೆ ಮಾಡಬಹುದಾಗಿದೆ.  

Source : https://zeenews.india.com/kannada/career/railway-recruitment-indian-railways-recruitment-790-posts-invitation-for-application-149972

Views: 0

Leave a Reply

Your email address will not be published. Required fields are marked *