Rain Alert: ಈ ಭಾಗಗಳಲ್ಲಿ ಮುಂದಿನ 24 ಗಂಟೆಯಲ್ಲಿ ಸಿಡಿಲು ಸಹಿತ ವರುಣಾರ್ಭಟ: ಬಿರುಗಾಳಿ ಎಚ್ಚರಿಕೆ ನೀಡಿದ IMD

Weather Update in Kannada: ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದೆಹಲಿ ಹೊರತುಪಡಿಸಿ, ದೇಶದ ಇತರ ಹಲವು ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಮತ್ತು ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Weather Update and Forecast 14th August 2023: ಅನೇಕ ರಾಜ್ಯಗಳಲ್ಲಿ ನಿರಂತರ ಮಳೆಯಿಂದಾಗಿ, ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಈ ಮಧ್ಯೆ ಭಾರತೀಯ ಹವಾಮಾನ ಇಲಾಖೆ (IMD) ಹಲವು ರಾಜ್ಯಗಳಲ್ಲಿ ಭಾರೀ ಮಳೆಯ ಕಾರಣದಿಂದ ರೆಡ್ ಅಲರ್ಟ್ ಘೋಷಿಸಿದೆ. ಇದರೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ವಾತಂತ್ರ್ಯ ದಿನದಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದೆಹಲಿ ಹೊರತುಪಡಿಸಿ, ದೇಶದ ಇತರ ಹಲವು ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಮತ್ತು ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಉತ್ತರಾಖಂಡದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್!

ಉತ್ತರಾಖಂಡದ 6 ಜಿಲ್ಲೆಗಳಲ್ಲಿ ಇಂದು (ಆಗಸ್ಟ್ 14) ರೆಡ್ ಅಲರ್ಟ್ ಘೋಷಿಸಲಾಗಿದೆ. ರೆಡ್ ಅಲರ್ಟ್ ಸಂದರ್ಭದಲ್ಲಿ ಕೆಲವೆಡೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಡೆಹ್ರಾಡೂನ್ ಹವಾಮಾನ ಕೇಂದ್ರವು ನೀಡಿದ ಇತ್ತೀಚಿನ ಮುನ್ಸೂಚನೆಯಲ್ಲಿ, ತೆಹ್ರಿ, ಡೆಹ್ರಾಡೂನ್, ಪೌರಿ, ಚಂಪಾವತ್, ನೈನಿತಾಲ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ಹರಿದ್ವಾರ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು 24 ಗಂಟೆಗಳ ಕಾಲ ಅಲರ್ಟ್ ಮೋಡ್‌ನಲ್ಲಿರಲು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಗೆ ಸರ್ಕಾರ ಸೂಚಿಸಿದೆ.

ಇನ್ನು ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಘು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಸೋಮವಾರ ಮತ್ತು ಮಂಗಳವಾರ ದೆಹಲಿಯಲ್ಲಿ ಗುಡುಗು ಸಹಿತ ಅತಿ ಕಡಿಮೆ ಮಳೆಯಾಗಬಹುದು. ಭಾನುವಾರ ದೆಹಲಿಯಲ್ಲಿ ಗರಿಷ್ಠ ತಾಪಮಾನ 35.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಸೋಮವಾರ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲಾಖೆಯ ಪ್ರಕಾರ, ಸೋಮವಾರ ಒಂದೆರಡು ಸ್ಥಳಗಳಲ್ಲಿ ಅತಿ ಕಡಿಮೆ ಮಳೆಯಾಗಬಹುದು. ಆದರೆ ಮಂಗಳವಾರ ಸಂಜೆ ದೆಹಲಿಯಲ್ಲಿ ಅತಿ ಕಡಿಮೆ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ಈ ರಾಜ್ಯಗಳಲ್ಲೂ ಎಚ್ಚರಿಕೆ:

ಮುಂದಿನ ಎರಡು ದಿನಗಳಲ್ಲಿ ಉತ್ತರಾಖಂಡ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ಬಿಹಾರ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಸಂಸ್ಥೆಯ ಪ್ರಕಾರ, ವಾಯುವ್ಯ ಭಾರತದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ವಿವಿಧೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಹೆಚ್ಚಿದ ತಾಪಮಾನ!

ಆಗಸ್ಟ್‌ ತಿಂಗಳ ಮೊದಲ ಎರಡು ವಾರಗಳಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ರೀತಿಯಲ್ಲಿ ಮಳೆಯಾಗಿತ್ತಯ. ಆದರೆ ಈಗ ಮತ್ತೆ  ತಾಪಮಾನದ ಪರಿಸ್ಥಿತಿ ಚಾಲ್ತಿಯಲ್ಲಿವೆ. ರಾಜ್ಯದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್‌’ಗಿಂತ ಹೆಚ್ಚಿದ್ದರೆ, ಸಾಧಾರಣ ಹವಾಮಾನಕ್ಕೆ ಹೆಸರುವಾಸಿಯಾದ ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್‌ ತಲುಪಿದೆ.

Source : https://zeenews.india.com/kannada/india/rain-update-14-08-2023-heavy-rain-with-lightning-in-these-parts-of-the-nation-in-the-next-24-hours-152101

Leave a Reply

Your email address will not be published. Required fields are marked *