
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ RCB ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 222 ರನ್ಗಳ ಬೃಹತ್ ಗುರಿ ನೀಡಿದೆ. ರಜತ್ ಪಾಟೀದಾರ್ ಮತ್ತು ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿದರು.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೃಹತ್ ಗುರಿ ನೀಡಿದೆ. ನಾಯಕ ರಜತ್ ಪಾಟೀದಾರ್ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ ಸಿಡಿಸಿದ ಅರ್ಧಶತಕಗಳ ನೆರವಿನಿಂದ ಮುಂಬೈಗೆ ಗೆಲ್ಲಲು 226ರನ್ಗಳ ಕಠಿಣ ಟಾರ್ಗೆಟ್ ನೀಡಿದೆ. ನಿಗದಿತ 20 ಓವರ್ಗಳಲ್ಲಿ ಆರ್ಸಿಬಿ ಐದು ವಿಕೆಟ್ಗಳಿಗೆ 221 ರನ್ ಗಳಿಸಿತು. ಬೆಂಗಳೂರು ಪರ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ (67) ಮತ್ತು ನಾಯಕ ರಜತ್ ಪಾಟಿದಾರ್ (64) ಅರ್ಧಶತಕ ಬಾರಿಸಿದರು. ಮುಂಬೈ ಪರ ಟ್ರೆಂಟ್ ಬೌಲ್ಟ್ ಮತ್ತು ನಾಯಕ ಹಾರ್ದಿಕ್ ಪಾಂಡ್ಯ ತಲಾ ಎರಡು ವಿಕೆಟ್ ಪಡೆದರು. ವಿಘ್ನೇಶ್ ಪುತೂರ್ ಒಂದು ವಿಕೆಟ್ ಪಡೆದರು. ಜನವರಿ ನಂತರ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳಿದ ವೇಗಿ ಜಸ್ಪ್ರೀತ್ ಬುಮ್ರಾ 29 ರನ್ ಮಾತ್ರ ಬಿಟ್ಟುಕೊಟ್ಟರಾದರೂ ವಿಕೆಟ್ ಪಡೆಯುವಲ್ಲಿ ವಿಫಲರಾದರು.
