Skip to content
  • Monday, March 23, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • Rashid Khan: ಇಂಜುರಿ ನಡುವೆ ಐಪಿಎಲ್ ಆಡಿದ್ದ ರಶೀದ್ ಖಾನ್ ಏಕದಿನ ಸರಣಿಯಿಂದ ಔಟ್..!
Sports

Rashid Khan: ಇಂಜುರಿ ನಡುವೆ ಐಪಿಎಲ್ ಆಡಿದ್ದ ರಶೀದ್ ಖಾನ್ ಏಕದಿನ ಸರಣಿಯಿಂದ ಔಟ್..!

June 1, 2023
samagrasuddi

ಶ್ರೀಲಂಕಾ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಗೆ ಅಫ್ಘಾನಿಸ್ತಾನ ತನ್ನ 15 ಆಟಗಾರರ ತಂಡವನ್ನು ಪ್ರಕಟಿಸಿದೆ. ಆದರೆ ತಂಡಕ್ಕೆ ಆಘಾತವೆಂಬಂತೆ ತಂಡದ ಸ್ಟಾರ್ ಆಲ್​ರೌಂಡರ್ ರಶೀದ್​ ಖಾನ್ ಇಂಜುರಿಯಿಂದಾಗಿ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ.ಹಸ್ಮತುಲ್ಲಾ ಶಾಹಿದಿ ತಂಡದ ನಾಯಕತ್ವದಲ್ಲಿ ಅಫ್ಘಾನಿಸ್ತಾನ ತಂಡವನ್ನು ಪ್ರಕಟಿಸಿದ್ದು, ಗಾಯದ ಸಮಸ್ಯೆಯಿಂದಾಗಿ ರಶೀದ್ ಖಾನ್ ಅವರನ್ನು ಮೊದಲ ಎರಡು ಏಕದಿನ ಪಂದ್ಯದಿಂದ ಹೊರಗಿಡಲಾಗಿದೆ ಎಂದು ಅಫ್ಘಾನ್ ಮಂಡಳಿ ತಿಳಿಸಿದೆ. ಅಲ್ಲದೆ ಸರಣಿಯ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿರುವ ರಶೀದ್ ಈ ಸಮಯದಲ್ಲಿ ನಮ್ಮ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿರುತ್ತಾರೆ ಎಂದು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದೆ.ರಶೀದ್ ಖಾನ್ ಅನುಪಸ್ಥಿತಿಯಲ್ಲಿ ಆಫ್ಘನ್ ತಂಡದ ಸ್ಪಿನ್ ಬೌಲಿಂಗ್‌ನ ಸಂಪೂರ್ಣ ಜವಾಬ್ದಾರಿ ಮೊಹಮ್ಮದ್ ನಬಿ, ಮುಜೀಬ್-ಉರ್-ರೆಹಮಾನ್ ಮತ್ತು ನೂರ್ ಅಹ್ಮದ್ ಅವರ ಮೇಲಿದೆ. ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ನಡುವಿನ ಏಕದಿನ ಸರಣಿ ಜೂನ್ 2 ರಿಂದ ಆರಂಭವಾಗಲಿದೆ. ಈ ಸರಣಿಯ ಎರಡನೇ ಪಂದ್ಯ ಜೂನ್ 4 ರಂದು ನಡೆಯಲಿದೆ. ಜೂನ್ 7 ರಂದು ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ನಡೆಯಲ್ಲಿದ್ದು, ಈ ಪಂದ್ಯದಲ್ಲಿ ರಶೀದ್ ಖಾನ್ ಆಡುವ ಸಾಧ್ಯತೆಯಿದೆ. ಈ ಸರಣಿ ಮುಗಿದ ಒಂದು ವಾರದ ನಂತರ ಅಫ್ಘಾನಿಸ್ತಾನ, ಬಾಂಗ್ಲಾದೇಶದೊಂದಿಗೆ ಟೆಸ್ಟ್ ಪಂದ್ಯವನ್ನು ಆಡಬೇಕಾಗಿದೆ.ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ನಜಿಬುಲ್ಲಾ ಝದ್ರಾನ್, ರಹಮತ್ ಶಾ, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ರಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಅಬ್ದುಲ್ ರಹಮಾನ್, ಫಝಲ್ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್ಇನ್ನು ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಅದ್ಭುತ ಪ್ರದರ್ಶನ ನೀಡಿದ ರಶೀದ್ ಖಾನ್ ತಂಡವನ್ನು ಫೈನ್​ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಸೀಸನ್​ನಲ್ಲಿ ಒಟ್ಟು 27 ವಿಕೆಟ್ ಪಡೆದ ರಶೀದ್ ಪರ್ಪಲ್ ಕ್ಯಾಪ್​ ರೇಸ್​ನಲ್ಲೂ ಕಾಣಿಸಿಕೊಂಡಿದ್ದರು. ಬೌಲಿಂಗ್​ ಜೊತೆಗೆ ರಶೀದ್ ಕೆಲವು ಪಂದ್ಯಗಳಲ್ಲಿ ಬ್ಯಾಟಿಂಗ್​ನಲ್ಲೂ ಕಮಾಲ್ ಮಾಡಿದ್ದರು.

source https://tv9kannada.com/photo-gallery/cricket-photos/afg-vs-sl-rashid-khan-ruled-out-of-first-two-odis-against-sri-lanka-due-to-lower-back-injury-psr-591804.html

Tags: Cricket, samagrasuddi, ಸಮಗ್ರ ಸುದ್ದಿ

Post navigation

Junior Asia Cup Hockey 2023: ಪಾಕ್ ಮುಂದೆ ಭಾರತವೇ ಬಲಿಷ್ಠ; ಇಂದು ಬದ್ಧವೈರಿಗಳ ನಡುವೆ ಫೈನಲ್ ಕಾಳಗ!
WTC Final 2023: ಓವಲ್​ ಮೈದಾನದಲ್ಲಿ ಟೀಮ್ ಇಂಡಿಯಾಗೆ ಅಗ್ನಿ ಪರೀಕ್ಷೆ…ಯಾಕೆ ಗೊತ್ತಾ?

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress