ರೇಷನ್ ಕಾರ್ಡ್ ಇ-ಕೆವೈಸಿ ಸರ್ವರ್ ಸಮಸ್ಯೆ: ಡೆಡ್‌ಲೈನ್ ಆತಂಕದಲ್ಲಿರುವ ಜನತೆಗೆ ಭರ್ಜರಿ ಸಿಹಿಸುದ್ದಿ!

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (BPL) ಹಾಗೂ ಎಪಿಎಲ್ (APL) ಪಡಿತರ ಚೀಟಿದಾರರಿಗೆ ಇ-ಕೆವೈಸಿ (e-KYC) ಮಾಡಿಸುವ ಪ್ರಕ್ರಿಯೆ ತೀವ್ರಗೊಂಡಿದ್ದು, ಸೆಪ್ಟೆಂಬರ್ 30ರ ಗಡುವಿನ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸಾಗರವೇ ಹರಿದುಬರುತ್ತಿದೆ. ಆದರೆ, ನಿರಂತರ ಸರ್ವರ್ ಡೌನ್ ಸಮಸ್ಯೆಯಿಂದಾಗಿ ಸಾರ್ವಜನಿಕರು ತೀವ್ರ ಹೈರಾಣಾಗಿದ್ದಾರೆ. ಗಡುವು ವಿಸ್ತರಣೆಯಾಗಲಿದೆಯೇ ಎಂಬ ಗೊಂದಲಗಳ ನಡುವೆ, ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.

ಸರ್ವರ್ ಸಮಸ್ಯೆಗೆ ಶೀಘ್ರ ಪರಿಹಾರ ಮಂಗಳವಾರ (ಸೆಪ್ಟೆಂಬರ್ 15) ವಿಕಾಸಸೌಧದಲ್ಲಿ ಹಿರಿಯ ಅಧಿಕಾರಿಗಳು, NIC ಹಾಗೂ KSDC ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಸಚಿವ ರಿಜ್ವಾನ್ ಅರ್ಷದ್, ತಾಂತ್ರಿಕ ಅಡಚಣೆಗಳನ್ನು ತಕ್ಷಣವೇ ಬಗೆಹರಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೇವಲ 15 ದಿನಗಳು ಮಾತ್ರ ಬಾಕಿ ಇರುವಾಗ ಸರ್ವರ್ ಸಮಸ್ಯೆಯಿಂದಾಗಿ ಇದುವರೆಗೆ ಶೇ. 37 ರಷ್ಟು (ಸುಮಾರು 97,54,197) ಫಲಾನುಭವಿಗಳು ಮಾತ್ರ ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸರ್ವರ್ ಸಾಮರ್ಥ್ಯ ಹೆಚ್ಚಿಸಲು ‘ಲೋಡ್ ಟೆಸ್ಟಿಂಗ್’ (Load Testing) ಮಾಡಲಾಗುತ್ತಿದೆ. ಮುಂದಿನ ಒಂದು ತಿಂಗಳೊಳಗೆ ತಾಂತ್ರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ‘ಥರ್ಡ್ ಪಾರ್ಟಿ ಏಜೆನ್ಸಿ‘ (3rd Party Agency) ನೇಮಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಮನೆಯಲ್ಲೇ ಕುಳಿತು ಮೊಬೈಲ್‌ನಲ್ಲೇ ಮಾಡಿ ಇ-ಕೆವೈಸಿ! ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ಅಲೆಯುವುದನ್ನು ತಪ್ಪಿಸಲು ಸರ್ಕಾರ ಹೊಸದೊಂದು ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸುತ್ತಿದೆ. ‘ಫೇಸ್ ಅಥೆಂಟಿಕೇಶನ್’ (Face Authentication) ತಂತ್ರಜ್ಞಾನ ಹೊಂದಿರುವ ಈ ಆ್ಯಪ್ ಇನ್ನೊಂದು ವಾರದೊಳಗೆ ಬಿಡುಗಡೆಯಾಗಲಿದೆ. ಇದರಿಂದ ಫಲಾನುಭವಿಗಳು ತಮ್ಮ ಸ್ಮಾರ್ಟ್‌ಫೋನ್ ಮೂಲಕವೇ ಅತ್ಯಂತ ಸುಲಭವಾಗಿ ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದೆ.

ಐದು ವರ್ಷಕ್ಕೊಮ್ಮೆ ಕೆವೈಸಿ ಕಡ್ಡಾಯ ಏಕೆ? ಕೇಂದ್ರ ಸರ್ಕಾರವು 2025ರ ಜುಲೈ 22 ರಂದು ಹೊರಡಿಸಿರುವ ಆದೇಶದನ್ವಯ, ಪ್ರತಿ ಐದು ವರ್ಷಕ್ಕೊಮ್ಮೆ ಪಡಿತರ ಚೀಟಿದಾರರ ಇ-ಕೆವೈಸಿ ಕಡ್ಡಾಯವಾಗಿದೆ. ರಾಜ್ಯದಲ್ಲಿ ಒಟ್ಟು 2,67,64,276 ಫಲಾನುಭವಿಗಳಿದ್ದು, 2026ರ ಸೆಪ್ಟೆಂಬರ್ 30 ರೊಳಗೆ ಪ್ರಕ್ರಿಯೆ ಮುಗಿಸಲು ಗಡುವು ನೀಡಲಾಗಿದೆ.

ಪ್ರತಿನಿತ್ಯ ಸರಾಸರಿ 5.40 ಲಕ್ಷ ಜನರು ಇ-ಕೆವೈಸಿ ಮಾಡಿಸುತ್ತಿದ್ದು, ಮುಂಬರುವ ದಿನಗಳಲ್ಲಿ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಮತ್ತಷ್ಟು ವೇಗವಾಗಿ ಹಾಗೂ ಪರಿಣಾಮಕಾರಿಯಾಗಿ ಒದಗಿಸುವುದು ಸರ್ಕಾರದ ಗುರಿಯಾಗಿದೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *