Ashwin Records: ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (R Ashwin) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ಗಳನ್ನು ಕಬಳಿಸಿದ ವಿಶ್ವದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಪಂದ್ಯದ 2ನೇ ಇನಿಂಗ್ಸ್ನಲ್ಲಿ ರವಿಚಂದ್ರನ್ ಅಶ್ವಿನ್ (R Ashwin) ಐದು ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಐದು ವಿಕೆಟ್ಗಳೊಂದಿಗೆ ಟೆಸ್ಟ್ನಲ್ಲಿ ಟೀಮ್ ಇಂಡಿಯಾ (Team India) ಪರ ಅತೀ ಹೆಚ್ಚು ಬಾರಿ 5 ವಿಕೆಟ್ಗಳ ಕಬಳಿಸಿದ ದಾಖಲೆ ಬರೆದಿದ್ದಾರೆ.
ಅಂದರೆ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ ಐದು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆ ರವಿಚಂದ್ರನ್ ಅಶ್ವಿನ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸ್ಪಿನ್ ಲೆಜೆಂಡ್ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿತ್ತು.
ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ 132 ಟೆಸ್ಟ್ ಪಂದ್ಯಗಳಲ್ಲಿ 35 ಬಾರಿ 5 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ರವಿಚಂದ್ರನ್ ಅಶ್ವಿನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಭಾರತದ ಪರ 100ನೇ ಟೆಸ್ಟ್ ಪಂದ್ಯಗಳನ್ನಾಡಿರುವ ರವಿಚಂದ್ರನ್ ಅಶ್ವಿನ್ ಒಟ್ಟು 36 ಬಾರಿ 5 ವಿಕೆಟ್ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ನೂರನೇ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಳ್ಳುವಲ್ಲಿ ಅಶ್ವಿನ್ ಯಶಸ್ವಿಯಾಗಿದ್ದಾರೆ.
ಇನ್ನು ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. 133 ಟೆಸ್ಟ್ ಪಂದ್ಯಗಳನ್ನಾಡಿರುವ ಮುರಳೀಧರನ್ ಒಟ್ಟು 67 ಬಾರಿ 5 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಇದೀಗ 36ನೇ ಬಾರಿ 5 ವಿಕೆಟ್ ಕಬಳಿಸಿರುವ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. 2ನೇ ಸ್ಥಾನದಲ್ಲಿ 37 ಬಾರಿ 5 ವಿಕೆಟ್ಗಳ ಸಾಧನೆ ಮಾಡಿರುವ ಆಸ್ಟ್ರೇಲಿಯಾದ ಶೇನ್ ವಾರ್ನ್ ಇದ್ದು, ಮುಂಬರುವ ಟೆಸ್ಟ್ ಪಂದ್ಯಗಳ ಮೂಲಕ ಈ ದಾಖಲೆ ಮುರಿಯುವ ಅವಕಾಶ ರವಿಚಂದ್ರನ್ ಅಶ್ವಿನ್ ಮುಂದಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1