ಐಪಿಎಲ್‌ಗೆ ವಿದಾಯ ಹೇಳಿದ ರವಿಚಂದ್ರನ್ ಅಶ್ವಿನ್: 17 ವರ್ಷಗಳ ಪಯಣಕ್ಕೆ ತೆರೆ

ಭಾರತದ ದಿಗ್ಗಜ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (Ravichandran Ashwin) ಇಂಡಿಯನ್ ಪ್ರೀಮಿಯರ್ ಲೀಗ್‌ (IPL)‌ನಿಂದ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಅವರು, ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದಾರೆ.

ಅಶ್ವಿನ್ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ, “ಪ್ರತಿಯೊಂದು ಅಂತ್ಯಕ್ಕೂ ಹೊಸ ಆರಂಭವಿದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ ಪಯಣ ಇಂದು ಮುಗಿಯುತ್ತದೆ. ಆದರೆ ವಿವಿಧ ಲೀಗ್‌ಗಳಲ್ಲಿ ಹೊಸ ಅವಕಾಶಗಳನ್ನು ಅನ್ವೇಷಿಸಲು ನಾನು ಎದುರು ನೋಡುತ್ತಿದ್ದೇನೆ. ಈವರೆಗಿನ ಅದ್ಭುತ ನೆನಪುಗಳು ಮತ್ತು ಸಂಬಂಧಗಳಿಗಾಗಿ ಎಲ್ಲಾ ಫ್ರಾಂಚೈಸಿಗಳಿಗೆ ಹಾಗೂ ಮುಖ್ಯವಾಗಿ ಐಪಿಎಲ್ ಮತ್ತು ಬಿಸಿಸಿಐಗೆ ಧನ್ಯವಾದಗಳು” ಎಂದು ಬರೆದಿದ್ದಾರೆ.

ಕಳೆದ ಸೀಸನ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದ ಅಶ್ವಿನ್, ಒಟ್ಟು 9 ಪಂದ್ಯಗಳಲ್ಲಿ ಬೌಲಿಂಗ್ ಮಾಡಿ 7 ವಿಕೆಟ್‌ಗಳನ್ನು ಪಡೆದಿದ್ದರು. 2009ರಲ್ಲಿ ಐಪಿಎಲ್ ಪ್ರವೇಶಿಸಿದ ಅಶ್ವಿನ್, ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ಪರ ಕಣಕ್ಕಿಳಿದಿದ್ದರು.

ಅಶ್ವಿನ್‌ ಅವರ ಐಪಿಎಲ್ ಸಾಧನೆ:

ಒಟ್ಟು 221 ಪಂದ್ಯಗಳು

4710 ಎಸೆತಗಳು

187 ವಿಕೆಟ್‌ಗಳು

ಬ್ಯಾಟಿಂಗ್ ಮೂಲಕ 833 ರನ್‌ಗಳು

17 ವರ್ಷಗಳ ಸುದೀರ್ಘ ಐಪಿಎಲ್ ಪಯಣದ ನಂತರ ಅಶ್ವಿನ್ ತಮ್ಮ ಕ್ರಿಕೆಟ್ ಬದುಕಿಗೆ ತೆರೆ ಎಳೆದಿದ್ದಾರೆ.

Leave a Reply

Your email address will not be published. Required fields are marked *