IPL 2023: ಮುಂಬೈ ಇಂಡಿಯನ್ಸ್ ವಿರುದ್ಧ RCB ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ

IPL 2023 RCB Playing XI vs MI: ಐಪಿಎಲ್​ನ 54ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ ಉಭಯ ತಂಡಗಳು.ಏಕೆಂದರೆ ಕಳೆದ ಪಂದ್ಯದಲ್ಲಿ ಆರ್​ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತರೆ, ಮುಂಬೈ ಇಂಡಿಯನ್ಸ್ ತಂಡವು ಸಿಎಸ್​ಕೆ ವಿರುದ್ಧ ಸೋಲನುಭವಿಸಿತ್ತು. ಇದೀಗ ತಂಡಗಳು ಪ್ಲೇಆಫ್ ರೇಸ್​ನಲ್ಲಿದ್ದು, ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ.ಇತ್ತ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿರುವ ಆರ್​ಸಿಬಿ ತಂಡವು ಈ ಪಂದ್ಯಕ್ಕಾಗಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಕಳೆದ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಆಡಿದ ಗ್ಲೆನ್ ಮ್ಯಾಕ್ಸ್​ವೆಲ್ ಶೂನ್ಯಕ್ಕೆ ಔಟಾಗಿದ್ದರು. ಇದಕ್ಕೂ ಮುನ್ನ ಮ್ಯಾಕ್ಸಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದರು.ಆದರೆ ಗ್ಲೆನ್ ಮ್ಯಾಕ್ಸ್​ವೆಲ್ ಸ್ಥಾನದಲ್ಲಿ ಕಣಕ್ಕಿಳಿದಿದ್ದ ಮಹಿಪಾಲ್ ಲೋಮ್ರರ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಲೋಮ್ರರ್​ ಅವರನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಸಿ, ಮ್ಯಾಕ್ಸ್​ವೆಲ್​ರನ್ನು ಮತ್ತೆ 4ನೇ ಸ್ಥಾನದಲ್ಲಿ ಕಣಕ್ಕಿಳಿಸಬಹುದು. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ...1- ಫಾಫ್ ಡುಪ್ಲೆಸಿಸ್ (ನಾಯಕ)2- ವಿರಾಟ್ ಕೊಹ್ಲಿ3- ಮಹಿಪಾಲ್ ಲೊಮ್ರೋರ್4- ಗ್ಲೆನ್ ಮ್ಯಾಕ್ಸ್​ವೆಲ್5- ಕೇದಾರ್ ಜಾಧವ್6- ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್)7- ವನಿಂದು ಹಸರಂಗ8- ಕರ್ಣ್ ಶರ್ಮಾ9- ಹರ್ಷಲ್ ಪಟೇಲ್10- ಮೊಹಮ್ಮದ್ ಸಿರಾಜ್11- ಜೋಶ್ ಹ್ಯಾಝಲ್​ವುಡ್RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

source https://tv9kannada.com/photo-gallery/cricket-photos/ipl-2023-rcb-playing-xi-vs-mi-rcb-playing-11-kannada-news-zp-573336.html

Leave a Reply

Your email address will not be published. Required fields are marked *