

ಎಂ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು ಹೈವೋಲ್ಟೆಜ್ ಪಂದ್ಯ ನಡೆಯಲಿದೆ. ದೆಹಲಿ ವಿರುದ್ಧದ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಆರ್‌ಸಿಬಿ ಗೆಲುವಿನ ಲಯಕ್ಕೆ ಮರಳಿದೆ. ಮತ್ತೊಂದೆಡೆ, ಚೆನ್ನೈ ಸೂಪರ್ ಕಿಂಗ್ಸ್ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ಟೂರ್ನಿಯಲ್ಲಿ ಹಿನ್ನಡೆ ಅನುಭವಿಸಿದೆ. ಎರಡೂ ತಂಡಗಳು ಐಪಿಎಲ್ ಇತಿಹಾಸದಲ್ಲಿ 30 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ 19 ಪಂದ್ಯಗಳನ್ನು ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಗೆದ್ದಿದ್ದರೆ, ಆರ್‌ಸಿಬಿ 10 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಡ್ರಾ ಆಗಿದೆ.