

ಇಂದು ಐಪಿಎಲ್ನ 9 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಆಡಿದ ಮೊದಲ ಪಂದ್ಯದಲ್ಲೇ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ಗೆ ಮಣ್ಣು ಮುಕ್ಕಿಸಿದ ಆರ್ಸಿಬಿ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಶುಭಾರಂಭ ಮಾಡಿತ್ತು. ಇತ್ತ ಕೆಕೆಆರ್ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಹೀಗಾಗಿ ನಿತೀಶ್ ರಾಣಾ ನೇತೃತ್ವದ ಕೆಕೆಆರ್ ತಂಡ ತನ್ನ ತವರಿನಲ್ಲಿ ಇಂದು ಮೊದಲ ಪಂದ್ಯವನ್ನಾಡುತ್ತಿದ್ದು, ಗೆಲುವಿನ ಖಾತೆ ತೆರೆಯುವತ್ತ ಕಣ್ಣಿಟ್ಟಿದೆ.
Views: 0