

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ರೋಚಕತೆ ಪಡೆಯುತ್ತಿದೆ. ದುರ್ಬಲ ಎಂದುಕೊಂಡಿದ್ದ ತಂಡ ಭರ್ಜರಿ ಪ್ರದರ್ಶನ ತೋರುತ್ತಿದೆ. ಮತ್ತೊಂದೆಡೆ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಆಡಿದ ಎರಡೂ ಪಂದ್ಯಗಳಲ್ಲಿ ಸೋತು ಹಿನ್ನಡೆ ಅನುಭವಿಸಿದೆ. ಈಗಾಗಲೇ ಐಪಿಎಲ್ 2023 ರಲ್ಲಿ (IPL 2023) 14 ಪಂದ್ಯಗಳು ಮುಕ್ತಾಯಗೊಂಡಿದೆ. ಇಂದು ನಡೆಯಲಿರುವ 15ನೇ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ (RCB vs LSG) ಮುಖಾಮುಖಿ ಆಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswami Stadium) ಈ ಪಂದ್ಯವನ್ನು ಆಯೋಜಿಸಲಾಗಿದ್ದು ಹೈವೋಲ್ಟೇಜ್ ಮ್ಯಾಚ್ ಆಗುವುದು ಖಚಿತ.
ಆರ್ಸಿಬಿ:
ರಾಯಲ್ ಚಾಲೆಂಜರ್ಸ್ ತಂಡ ಆಡಿದ ಎರಡು ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ಗೆದ್ದರೆ ದ್ವಿತೀಯ ಮ್ಯಾಚ್ನಲ್ಲಿ ಸೋಲುಂಡಿತ್ತು. ಕೆಕೆಆರ್ ವಿರುದ್ಧ ಆಡಿದ ಎರಡನೇ ಪಂದ್ಯದಲ್ಲಿ ಆರ್ಸಿಬಿ ಬ್ಯಾಟಿಂಗ್ – ಬೌಲಿಂಗ್ನಲ್ಲಿ ಹೀನಾಯ ಪ್ರದರ್ಶನ ತೋರಿತ್ತು. 123 ರನ್ಗೆ ಆಲೌಟ್ ಆಗಿದ್ದ ಫಾಫ್ ಪಡೆಯ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಶಹಬಾಜ್ ಅಹಮದ್ ಬದಲು ಮಹಿಪಾಲ್ ಲೊಮ್ರೂರ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿರುವ ರಿಸೆ ಟೋಪ್ಲೆ ಜಾಗಕ್ಕೆ ದಕ್ಷಿಣಾ ಆಫ್ರಿಕಾ ವೇಗಿ ವೇಯ್ನ್ ಪಾರ್ನೆಲ್ ಆಯ್ಕೆ ಆಗಿದ್ದು ತಂಡ ಸೇರಿಕೊಂಡಿದ್ದಾರೆ. ಇವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸುವ ಸಾಧ್ಯತೆ ಇದೆ.
ಆರ್ಸಿಬಿ ಮೊದಲ ಪಂದ್ಯದಲ್ಲಿ ಉತ್ತಮ ಆರಂಭ ಪಡೆದುಕೊಂಡಿತ್ತು. ಆದರೆ, ದ್ವಿತೀಯ ಪಂದ್ಯದಲ್ಲಿ ಕೊಹ್ಲಿ-ಫಾಫ್ ಕಡೆಯಿಂದ ನಿರೀಕ್ಷೆಗೆ ತಕ್ಕ ಆಟ ಬರಲಿಲ್ಲ. ಗ್ಲೆನ್ ಮ್ಯಾಕ್ಸ್ವೆಲ್, ದಿನೇಶ್ ಕಾರ್ತಿಕ್ ಕೂಡ ಸಂಪೂರ್ಣ ವೈಫಲ್ಯ ಅನುಭವಿಸಿದ್ದರು. ಮಿಚೆಲ್ ಬ್ರೇಸ್‌ವೆಲ್ ಕಡೆಯಿಂದ ಆಕ್ರಮಣಕಾರಿ ಆಟ ಹೊರಬರಬೇಕಿದೆ. ಕರ್ಣ್ ಶರ್ಮಾ ಹಾಗೂ ಮೊಹಮ್ಮದ್ ಸಿರಾಜ್ ಅಪಾಯಕಾರಿ ಆಗಿ ಕಾಣಿಸಿಕೊಂಡಿದ್ದಾರೆ. ಹರ್ಷಲ್ ಪಟೇಲ್ ದುಬಾರಿ ಆಗುತ್ತಿದ್ದು ಲೆಂತ್ನಲ್ಲಿ ಎಡವುತ್ತಿದ್ದಾರೆ. ಹಿಂದಿನ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಸರಿ ಪಡಿಸಿ ಆರ್ಸಿಬಿ ಇಂದು ಉತ್ತಮ ಪ್ರದರ್ಶನ ನೀಡಿದ ಬೇಕಾದ ಒತ್ತಡದಲ್ಲಿದೆ.
ಲಖನೌ:
ಇತ್ತ ಲಖನೌ ಸೂಪರ್ ಜೇಂಟ್ಸ್ ಆಡಿದ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ಕೇವಲ ಒಂದು ಪಂದ್ಯದಲ್ಲಷ್ಟೆ ಸೋಲು ಕಂಡಿದೆ. ನಾಯಕ ಕೆಎಲ್ ರಾಹುಲ್ ಕಡೆಯಿಂದ ದೊಡ್ಡ ಮೊತ್ತ ಬರದಿದ್ದರೂ ಮಧ್ಯಮ ಕ್ರಮಾಂಕ ಬಲಿಷ್ಠವಾಗಿದೆ. ಖೈಲ್ ಮೇಯರ್ಸ್ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ನಿಕೋಲಸ್ ಪೂರನ್, ಮಾರ್ಕಸ್ ಸ್ಟೋಯಿನಿಸ್, ಆಯುಷ್ ಬದೋನಿ, ಕ್ರುನಾಲ್ ಪಾಂಡ್ಯ, ದೀಪಕ್ ಹೂಡ ಪ್ರಮುಖ ಬ್ಯಾಟಿಂಗ್ ಅಸ್ತ್ರ. ಬೌಲಿಂಗ್ನಲ್ಲಿ ಮಾರ್ಕ್ ವುಡ್ ವಿಕೆಟ್ ಟೇಕರ್ ಆಗಿ ಕಾಣಿಸಿಕೊಂಡಿದ್ದು ಅಪಾಯಕಾರಿ ಆಗಿದ್ದಾರೆ. ಜಯದೇವ್ ಉನಾದ್ಕಟ್, ರವಿ ಬಿಷ್ಟೋಯಿ ಹಾಗೂ ಆವೇಶ್ ಖಾನ್ ಪ್ರಮುಖ ಬೌಲರ್ಗಳಾಗಿದ್ದಾರೆ. ಇಂದಿನ ಪಂದ್ಯಕ್ಕೆ ಲಖನೌ ತಂಡದಲ್ಲಿ ಬದಲಾವಣೆ ಅನುಮಾನ. ಕಳೆದ ಗೆದ್ದ ಪಂದ್ಯದಲ್ಲಿ ಆಡಿದ ಆಟಗಾರರೇ ಕಣಕ್ಕಿಳಿಯಬಹುದು.
ಆರ್ಸಿಬಿ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೊರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲಿ, ವೇಯ್ನ್ ಪಾರ್ನೆಲ್, ಹಿಮಾಂಶು ಶರ್ಮಾ, ಮನೋಜ್ ಬಾಂಢಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್, ಮಿಚೆಲ್ ಬ್ರೇಸ್‌ವೆಲ್.
ಲಖನೌ ಸೂಪರ್ ಜೈಂಟ್ಸ್ ತಂಡ: ಕೆಎಲ್ ರಾಹುಲ್ (ನಾಯಕ), ಖೈಲ್ ಮೇಯರ್ಸ್, ದೀಪಕ್ ಹೂಡಾ, ಕ್ರುನಾಲ್ ಪಾಂಡ್ಯ, ಮಾರ್ಕಸ್ ಸ್ಟೋಯಿನಿಸ್, ನಿಕೋಲಸ್ ಪೂರನ್,, ಆಯುಷ್ ಬದೋನಿ, ಮಾರ್ಕ್ ವುಡ್, ಜಯದೇವ್ ಉನಾದ್ಕಟ್, ರವಿ ಬಿಷ್ಣೋಯ್, ಅವೇಶ್ ಖಾನ್, ಕೃಷ್ಣಪ್ಪ ಗೌತಮ್, ಪ್ರೇರಕ್ ಮಂಕಡ್, ಸ್ವಪ್ನಿಲ್ ಸಿಂಗ್, ನವೀನ್-ಉಲ್-ಹಕ್, ಯಶ್ ಠಾಕೂರ್, ಡೇನಿಯಲ್ ಸಾಮ್ಸ್, ರೊಮಾರಿಯೋ ಶೆಫರ್ಡ್, ಯುದ್ವೀರ್ ಸಿಂಗ್ ಚರಕ್, ಮಯಾಂಕ್ ಯಾದವ್, ಅಮಿತ್ ಮಿಶ್ರಾ, ಮನನ್ ವೋಹ್ರಾ.
ಪಂದ್ಯ ಆರಂಭ: ಸಂಜೆ 7:30ಕ್ಕೆ
ಸ್ಥಳ: ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು