RCB vs MI, IPL 2023: ಐಪಿಎಲ್​ನಲ್ಲಿಂದು ಎರಡು ಹೈವೋಲ್ಟೇಜ್ ಪಂದ್ಯ: ಆರ್​ಸಿಬಿ-ಮುಂಬೈ ಕಾದಾಟಕ್ಕೆ ಫ್ಯಾನ್ಸ್ ಕಾತುರ

RCB vs MI IPL 2023

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2023) ಎರಡನೇ ಡಬಲ್ ಹೆಡರ್ ಪಂದ್ಯ ನಡೆಯಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಮಧ್ಯಾಹ್ನ 3:30 ಕ್ಕೆ ನಡೆಯಲಿರುವ ಮೊದಲ ಮ್ಯಾಚ್​ನಲ್ಲಿ ಭುವನೇಶ್ವರ್ ಕುಮಾರ್ ನಾಯಕತ್ವದ ಸನ್​ರೈಸರ್ಸ್ ಹೈದರಾಬಾದ್ ಮತ್ತು ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ (SRH vs RR) ಮುಖಾಮುಖಿ ಆಗಲಿದೆ. ಸಂಜೆ 7:30ಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುರುವಾಗಲಿರುವ ದ್ವಿತೀಯ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಹಿತ್ ಶರ್ಮಾ ಕ್ಯಾಪ್ಟನ್ ಆಗಿರುವ ಮುಂಬೈ ಇಂಡಿಯನ್ಸ್ (RCB vs MI) ಅನ್ನು ಎದುರಿಸಲಿದೆ.

ಆರ್​ಸಿಬಿ- ಮುಂಬೈ:

ಆರ್​ಸಿಬಿ ಹಾಗೂ ಮುಂಬೈ ನಡುವಣ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಈಗಾಗಲೇ ಎಲ್ಲ ಟಿಕೆಟ್​ಗಳು ಸೋಲ್ಡ್ ಔಟ್ ಆಗಿದ್ದು ಸಂಪೂರ್ಣ ಸ್ಟೇಡಿಯಂ ತುಂಬಿರಲಿದೆ. ಹೈವೋಲ್ಟೇಜ್ ಪಂದ್ಯ ಆಗುವುದು ಖಚಿತ. ಕಳೆದ ಆರು ತಿಂಗಳುಗಳಿಂದ ಭರ್ಜರಿ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ ಮೇಲೆ ಎಲ್ಲರ ಕಣ್ಣಿದೆ. ಕೊಹ್ಲಿ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಆರ್​​ಸಿಬಿ ಪರ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಗ್ಲೆನ್ ಮ್ಯಾಕ್ಸ್​ವೆಲ್, ದಿನೇಶ್ ಕಾರ್ತಿಕ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ಸ್ಟಾರ್ ಆಟಗಾರರಾಗಿದ್ದಾರೆ.

ಇತ್ತ ಮುಂಬೈ ಪರ ರೋಹಿತ್ ಶರ್ಮಾ ಫಿಟ್ ಆಗಿದ್ದಾರೆ. ಸೂರ್ಯಕುಮಾರ್ ಯಾದವ್ ಫಾರ್ಮ್ ಕಂಡುಕೊಳ್ಳಬೇಕಿದೆ. ಟಿಮ್ ಡೇವಿಡ್, ತಿಲಕ್ ವರ್ಮಾ, ಇಶಾನ್ ಕಿಶನ್, ಕ್ಯಾಮರಾನ್ ಗ್ರೀನ್ ಬ್ಯಾಟಿಂಗ್ ವಿಭಾಗದ ಶಕ್ತಿಯಾಗಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ವೇಗಿ ಜೋಫ್ರಾ ಆರ್ಚರ್ ಮೇಲೆ ಕಣ್ಣಿದೆ. ಅನುಭವಿ ಸ್ಪಿನ್ನರ್ ಪಿಯೂಷ್ ಚಾವ್ಲಾ ಕೂಡ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಬಹುದು.

LSG vs DC Highlights IPL 2023: ಮೇಯರ್ಸ್​, ಮಾರ್ಕ್​ವುಡ್ ಅಬ್ಬರ; ಲಕ್ನೋಗೆ 50 ರನ್ ಜಯ

ಆರ್​ಸಿಬಿ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಶಹಬಾಜ್ ಅಹಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೊರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಕರ್ಣ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲಿ, ರೀಸ್ ಟಾಪ್ಲಿ, ಹಿಮಾಂಶು ಶರ್ಮಾ, ಮನೋಜ್ ಬಾಂಢಗೆ, ರಾಜನ್‌ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್, ಮಿಚೆಲ್ ಬ್ರೇಸ್‌ವೆಲ್.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ಡೇವಿಡ್ ಬ್ರೆವಿಸ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್‌ಕೀಪರ್), ಟ್ರಿಸ್ಟನ್ ಸ್ಟಬ್ಸ್, ವಿಷ್ಣು ವಿನೋದ್, ಕ್ಯಾಮೆರಾನ್ ಗ್ರೀನ್, ಅರ್ಜುನ್ ತೆಂಡೂಲ್ಕರ್, ರಮಣದೀಪ್ ಸಿಂಗ್, ಶಮ್ಸ್ ಮುಲಾನಿ, ನೇಹಲ್ ವಡೇರಾ, ಹೃತಿಕ್ ಶೊಕೀನ್, ಅರ್ಷದ್ ಖಾನ್, ಡಾನ್ ಜೇನ್ಸನ್, ಪಿಯೂಷ್ ಚಾವ್ಲಾ, ಕುಮಾರ್ ಕಾರ್ತಿಕೆಯ, ರಾಘವ್ ಗೋಯಲ್, ಜೋಫ್ರಾ ಆರ್ಚರ್, ಜೇಸನ್ ಬೆಹ್ರೆನ್‌ಡ್ರಾಫ್, ಆಕಾಶ್ ಮದವಾಲ್.

ಹೈದರಾಬಾದ್- ರಾಜಸ್ಥಾನ್:

ಐಪಿಎಲ್ 2022 ಟೂರ್ನಿಯ ರನ್ನರ್‌ ಅಪ್‌ ರಾಜಸ್ಥಾನ ರಾಯಲ್ಸ್‌ ತಂಡ ಐಪಿಎಲ್‌ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಇಂದು ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಎದುರಿಸಲಿದೆ. ಆರ್​ಆರ್​ ಎಲ್ಲ ವಿಭಾಗಗಳಲ್ಲಿ ಬಲಿಷ್ಠವಾಗಿರುವಂತೆ ಗೋಚರಿಸುತ್ತಿದೆ. ಯುಜ್ವೇಂದ್ರ ಚಹಲ್‌ ಅಲ್ಲದೆ ಆರ್‌.ಅಶ್ವಿನ್‌ ಮತ್ತು ಆ್ಯಡಂ ಜಂಪಾ ಅವರನ್ನು ಒಳಗೊಂಡಿರುವ ತಂಡದ ಸ್ಪಿನ್‌ ವಿಭಾಗ ಬಲಿಷ್ಠವಾಗಿದೆ. ವೇಗದ ಬೌಲಿಂಗ್‌ ವಿಭಾಗದಲ್ಲಿ ಟ್ರೆಂಟ್‌ ಬೌಲ್ಟ್‌, ಒಬೇದ್‌ ಮೆಕಾಯ್‌ ಮತ್ತು ನವದೀಪ್‌ ಸೈನಿ ಇದ್ದಾರೆ. ರಾಯಲ್ಸ್‌ ತಂಡ ಬ್ಯಾಟಿಂಗ್‌ನಲ್ಲಿ ನಾಯಕ ಸಂಜು ಸ್ಯಾಮ್ಸನ್, ಜೋ ರೂಟ್, ಶಿಮ್ರಾನ್‌ ಹೆಟ್ಮೆಯರ್ ಮತ್ತು ಜೇಸನ್‌ ಹೋಲ್ಡರ್‌ ಮೇಲೆ ಭರವಸೆ ಇಟ್ಟಿದೆ.

ಇತ್ತ ಹೈದರಾಬಾದ್‌ ತಂಡದ ನಾಯಕ ಏಡನ್‌ ಮರ್ಕರಂ ಮೊದಲ ಪಂದ್ಯಕ್ಕೆ ಲಭ್ಯರಿಲ್ಲ. ಹೀಗಾಗಿ ಭುವಿ ಮುನ್ನಡೆಸುತ್ತಿದ್ದಾರೆ. ಎಸ್​ಆರ್​ಹೆಚ್ ಪರ ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಹ್ಯಾರಿ ಬ್ರೂಕ್, ಗ್ಲೆನ್ ಪಿಲಿಪ್ಸ್, ಸುಂದರ್, ನಟರಾಜನ್, ಉಮ್ರಾನ್ ಮಲಿಕ್ ರಂತಹ ಸ್ಟಾರ್ ಆಟಗಾರರಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/royal-challengers-bangalore-rcb-are-taking-on-mumbai-indians-mi-in-their-first-match-of-ipl-2023-today-vb-au48-547559.html

Views: 0

Leave a Reply

Your email address will not be published. Required fields are marked *