
RCB vs MI Live Score, WPL 2023: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ನಡೆಯುತ್ತಿರುವ ವುಮೆನ್ಸ್ ಪ್ರೀಮಿಯರ್ ಲೀಗ್ನ 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ. ಈಗಾಗಲೇ ಪ್ಲೇಆಫ್ನಿಂದ ಹೊರಬಿದ್ದಿರುವ ಆರ್ಸಿಬಿಗೆ ಇದು ಔಪಚಾರಿಕ ಪಂದ್ಯ. ಮತ್ತೊಂದೆಡೆ ಪಾಯಿಂಟ್ ಟೇಬಲ್ನಲ್ಲಿ 2ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ಗೆ ಇದು ನಿರ್ಣಾಯಕ ಪಂದ್ಯವಾಗಿದೆ. ಏಕೆಂದರೆ ಲೀಗ್ ಹಂತದ ಮುಕ್ತಾಯದ ವೇಳೆ ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನ ಅಲಂಕರಿಸುವ ತಂಡವು ನೇರವಾಗಿ ಫೈನಲ್ಗೆ ಪ್ರವೇಶಿಸಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ಇರಾದೆಯಲ್ಲಿದೆ ಮುಂಬೈ ಇಂಡಿಯನ್ಸ್.
ಮುಂಬೈ ಇಂಡಿಯನ್ಸ್ ತಂಡ: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವೊಂಗ್, ಅಮನ್‌ಜೋತ್ ಕೌರ್, ಹುಮೈರಾ ಕಾಜಿ, ಧಾರಾ ಗುಜ್ಜರ್, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್, ಕ್ಲೋಯ್ ಟ್ರಯಾನ್, ಹೀದರ್ ಗ್ರಹಾಂ, ಪೂಜಾ ವಸ್ತ್ರಾಕರ್, ಸೋನಮ್ ಯಾದವ್, ನೀಲಂ ಬಿಷ್ಟ್, ಪ್ರಿಯಾಂಕಾ ಬಾಲಾ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಕನಿಕಾ ಅಹುಜಾ, ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಮೇಗನ್ ಸ್ಚುಟ್, ಆಶಾ ಶೋಬನಾ, ಪ್ರೀತಿ ಬೋಸ್, ಡೇನ್ ವ್ಯಾನ್ ನಿಕೆರ್ಕ್, ಎರಿನ್ ಬರ್ನ್ಸ್, ಕೋಮಲ್ ಜಂಜಾದ್, ರೇಣುಕಾ ಠಾಕೂರ್ ಸಿಂಗ್, ಇಂದ್ರಾಣಿ ರಾಯ್, ಸಹನಾ ಪವಾರ್, ಪೂನಂ ಖೇಮ್ನಾರ್.
Views: 0