

ಭಾನುವಾರದ ಡಬಲ್ ಹೆಡರ್‌ನ ಮೊದಲ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ (Royal Challengers Bangalore vs Rajasthan Royals) ಮುಖಾಮುಖಿಯಾಗಿವೆ. ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ಆರ್‌ಸಿಬಿ ತನ್ನ ಕೊನೆಯ ಪಂದ್ಯವನ್ನು ಗೆದ್ದುಕೊಂಡಿತು. ಇತ್ತ ಟೇಬಲ್ ಟಾಪರ್ ರಾಜಸ್ಥಾನ ತನ್ನ ಕೊನೆಯ ಪಂದ್ಯದಲ್ಲಿ ಸೋಲನುಭವಿಸಿತ್ತು. ಈ ಬಾರಿ ವಿರಾಟ್ ಕೊಹ್ಲಿ (Virat Kohli) ಪಡೆ ಭಾನುವಾರ ತವರಿನಲ್ಲಿ ಪಿಂಕ್ ಆರ್ಮಿಯನ್ನು ಸೋಲಿಸಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.