
ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿರುವ ಆರ್ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಆರ್ಸಿಬಿ ಕೇವಲ ಒಂದು ಬದಲಾವಣೆ ಮಾಡಿಕೊಂಡಿದೆ. ನುವಾನ್ ತುಷಾರ ಬದಲಿಗೆ ಜೋಶ್ ಹ್ಯಾಜಲ್ವುಡ್ ತಂಡಕ್ಕೆ ಸೇರಿಕೊಂಡಿದ್ದಾರೆ. ಪಂಜಾಬ್ ಕಿಂಗ್ಸ್ ಕೂಡ ಒಂದು ಬದಲಾವಣೆ ಮಾಡಿಕೊಂಡಿದ್ದು, ತವರಿಗೆ ಮರಳಿರುವ ಮಾರ್ಕೊ ಜಾನ್ಸನ್ ಬದಲಿಗೆ ಒಮರ್ಝಾಯ್ಗೆ ಅವಕಾಶ ನೀಡಲಾಗಿದೆ.
ಐಪಿಎಲ್ 2025ರ ಮೊದಲ ಕ್ವಾಲಿಫೈಯರ್ ಪಂದ್ಯ ಗುರುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಮುಲ್ಲನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಆರ್ಸಿಬಿ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದದೆ. ಎರಡೂ ತಂಡಗಳು ಐಪಿಎಲ್ 2025 ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ-2 ರಲ್ಲಿವೆ. ಎರಡೂ ತಂಡಗಳು ಫೈನಲ್ ತಲುಪಲು ಪ್ರಬಲ ಸ್ಪರ್ಧಿಗಳಾಗಿವೆ. ಏಕೆಂದರೆ ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ನಂತರವೂ ತಂಡಗಳಿಗೆ ಪ್ರಶಸ್ತಿ ಪಂದ್ಯಕ್ಕೆ ಪ್ರವೇಶಿಸಲು ಮತ್ತೊಂದು ಅವಕಾಶ ಸಿಗುತ್ತದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಪಂಜಾಬ್ ಕಿಂಗ್ಸ್ 2014 ರ ನಂತರ ಮೊದಲ ಬಾರಿಗೆ ಪ್ಲೇಆಫ್ ತಲುಪಿದೆ, ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 2016ರ ನಂತರ ಮೊದಲ ಬಾರಿಗೆ ಫೈನಲ್‌ಗೆ ಟಿಕೆಟ್ ಕಾಯ್ದಿರಿಸಲು ಬಯಸುತ್ತಿದೆ.
ಈ ಪಂದ್ಯದಲ್ಲಿ ಆರ್ಸಿಬಿ ಕೇವಲ ಒಂದು ಬದಲಾವಣೆ ಮಾಡಿಕೊಂಡಿದೆ. ನುವಾನ್ ತುಷಾರ ಬದಲಿಗೆ ಜೋಶ್ ಹ್ಯಾಜಲ್ವುಡ್ ತಂಡಕ್ಕೆ ಸೇರಿಕೊಂಡಿದ್ದಾರೆ. ಪಂಜಾಬ್ ಕಿಂಗ್ಸ್ ಕೂಡ ಒಂದು ಬದಲಾವಣೆ ಮಾಡಿಕೊಂಡಿದ್ದು, ತವರಿಗೆ ಮರಳಿರುವ ಮಾರ್ಕೊ ಜಾನ್ಸನ್ ಬದಲಿಗೆ ಒಮರ್ಝಾಯ್ಗೆ ಅವಕಾಶ ನೀಡಲಾಗಿದೆ.
2025ರಲ್ಲಿ ಎರಡೂ ತಂಡಗಳು ತಲಾ 1 ಪಂದ್ಯದಲ್ಲಿ ಜಯ
ಐಪಿಎಲ್ 2025ರ ಲೀಗ್ ಹಂತದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆದ ಒಂದು ಪಂದ್ಯದಲ್ಲಿ ಬೆಂಗಳೂರು ಏಳು ವಿಕೆಟ್‌ಗಳಿಂದ ಜಯಗಳಿಸಿತು. ಇದಕ್ಕೂ ಮೊದಲು ಮಳೆ ಬಾಧಿತ ಪಂದ್ಯದಲ್ಲಿ ಪಂಜಾಬ್ ತಂಡ ಬೆಂಗಳೂರು ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿತ್ತು.
ಎರಡು ತಂಡಗಳು ಪ್ಲೇ ಆಫ್ ದಾಖಲೆಗಳು
ಪಂಜಾಬ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಪ್ಲೇಆಫ್‌ನಲ್ಲಿ ನಾಲ್ಕು ಪಂದ್ಯಗಳನ್ನು ಆಡಿದ್ದು, ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದ್ದು, ಮೂರರಲ್ಲಿ ಸೋತಿವೆ. 2014 ರ ಫೈನಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮೂರು ವಿಕೆಟ್‌ಗಳಿಂದ ಫೈನಲ್‌ನಲ್ಲಿ ಸೋಲು ಕಂಡಿತ್ತು. ಇದೇ ಕೊನೆಯ ಬಾರಿ ತಂಡ ಪ್ಲೇ ಆಫ್ ತಲುಪಿತ್ತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 15 ಪಂದ್ಯಗಳನ್ನು ಆಡಿದ್ದು ಕೇವಲ ಐದು ಪಂದ್ಯಗಳನ್ನು ಗೆದ್ದಿದೆ, 10 ಪಂದ್ಯಗಳಲ್ಲಿ ಸೋತಿದೆ. 2024 ರಲ್ಲಿ, ಆರ್ಸಿಬಿ ರಾಜಸ್ಥಾನ ರಾಯಲ್ಸ್ ವಿರುದ್ಧ ಎಲಿಮಿನೇಟರ್‌ನಲ್ಲಿ ಸೋಲನ್ನು ಎದುರಿಸಿತ್ತು. 2016 ರಲ್ಲಿ ತಂಡವು ಫೈನಲ್ ತಲುಪುವಲ್ಲಿ ಯಶಸ್ವಿಯಾಗಿತ್ತು. ಅದಕ್ಕೂ ಮುನ್ನ 2009 ಹಾಗೂ 2011ರಲ್ಲಿ ಫೈನಲ್ ತಲುಪಿತ್ತು.
ಹೆಡ್ ಟು ಹೆಡ್‌ನಲ್ಲಿ ಕಠಿಣ ಸ್ಪರ್ಧೆ ಇದೆ.
PBKS vs RCB ಲೈವ್ ಸ್ಕೋರ್: ಐಪಿಎಲ್ ಇತಿಹಾಸದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಒಟ್ಟು 35 ಪಂದ್ಯಗಳು ನಡೆದಿದ್ದು, ಇದರಲ್ಲಿ ಪಂಜಾಬ್ 18 ಬಾರಿ ಗೆದ್ದಿದ್ದರೆ, ಬೆಂಗಳೂರು 17 ಬಾರಿ ಗೆದ್ದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI
ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹ್ಯಾಜಲ್ವುಡ್
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI)
ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರನ್ ಸಿಂಗ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಅಜ್ಮತ್ವುಲ್ಲಾ ಒಮರ್ಜಾಯ್, ಹರ್ಪ್ರೀತ್ ಬ್ರಾರ್, ಕೈಲ್ ಜೇಮಿಸನ್,
News 18 Kannada
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1