ಓವರ್ ಅಸಿಡಿಟಿಯಿಂದ ಬಳಲುತ್ತಿದ್ದ ನಟ ಉಪೇಂದ್ರ ಅವರು ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು: ನಟ, ನಿರ್ದೇಶಕ, ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆಯುರಿಯಿಂದ(ಓವರ್ ಅಸಿಡಿಟಿಯಿಂದ) ಬಳಲುತ್ತಿದ್ದ ನಟ ಉಪೇಂದ್ರ ಅವರು ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಯುಐ ಸಿನಿಮಾದ ಶೂಟಿಂಗ್ ಸಮಯದಲ್ಲೂ ಇದೇ ರೀತಿ ಆಗಿತ್ತು. ಸದ್ಯಕ್ಕೆ ಉಪ್ಪಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲಎಂದು ಅವರ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಉಪೇಂದ್ರ ಅವರು ನಿರ್ದೇಶಿಸಿ ನಟಿಸಿದ್ದ ‘ಯುಐ’ ಸಿನಿಮಾ ಕಳೆದ ಡಿಸೆಂಬರ್‌ನಲ್ಲಿ ತೆರೆಗೆ ಬಂದಿತ್ತು. ಮಿಶ್ರ ಪ್ರತಿಕ್ರಿಯೆ ಸಿಕ್ಕರೂ ಸಿನಿಮಾ ಬಾಕ್ಸಾಫೀಸ್‌ನಲ್ಲಿ ತಕ್ಕಮಟ್ಟಿಗೆ ಸದ್ದು ಮಾಡಿತ್ತು.
Source : KannadaPrabha
Views: 45