ಚಿತ್ರದುರ್ಗ ನ. 30
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಭಾರತೀಯ ಜನತಾ ಪಾರ್ಟಿ ಜಿಲ್ಲಾ ರೈತ ಮೋರ್ಚಾ ವತಿಯಿಂದ ಡಿ.1ರ ಸೋಮವಾರ ಬೆಳ್ಳಿಗೆ 11ಕ್ಕೆ ರೈತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಮೋರ್ಚಾದ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಯಾದವ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಅಧಿಕಾರವನ್ನು ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅತಿವೃಷ್ಟಿಯಿಂದ ಮನೆಯಿಂದ ಹಾನಿಯಾದ ರೈತರ ಏಕದಳ, ದ್ವಿದಳ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮತ್ತು ಎನ್.ಡಿ.ಆರ್.ಎಫ್. ಎಸ್.ಡಿ.ಆರ್.ಎಫ್ ನಿಯಮಕ್ಕೆ ಅನುಸಾರವಾಗಿ ಪರಿಹಾರ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ, ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ರಾಜ್ಯ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ನಗರದ ನೀಲಕಂಠೇಶ್ವರ ದೇವಾಲಯದಿಂದ ಒನಕೆ ಓಬವ್ವ ವೃತ್ತದವರೆಗೆ ಪಾದಯಾತ್ರೆಯನ್ನು ಬೆಳಿಗ್ಗೆ 11ಕ್ಕೆ ನಡೆಸಿ ಜಿಲ್ಲಾಧಿಕಾರಿಗಳ ಮನವಿಯನ್ನು ಸಲ್ಲಿಸಲಾಗುತ್ತದೆ.
ಈ ಪ್ರತಿಭಟನೆಯಲ್ಲಿ ಸಂಸದರಾದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಶ್ರೀರಾಮುಲು, ಶಾಸಕರಾದ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಶಾಸಕರುಗಳಾದ ಜಿ ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ನೇರ್ಲೆಗುಂಟೆ ತಿಪ್ಪೇಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರ ಸ್ವಾಮಿ, ಮುಖಂಡರಾದ ಲಿಂಗಮೂರ್ತಿ, ಎನ್.ಆರ್.ಲಕ್ಷ್ಮೀಕಾಂತ್. ಸೇರಿದಂತೆ ಮಂಡಲದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳು, ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ರೈತ ಮೋರ್ಚಾದ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಯಾದವ್ ತಿಳಿಸಿದ್ದಾರೆ
Views: 20