“ಧರ್ಮಸ್ಥಳ”ದಲ್ಲಿ ತನಿಖೆಯ ಹೆಸರಲ್ಲಿ ನಡೆಯುತ್ತಿರುವ ಧರ್ಮ ದ್ರೋಹಿ ಚಟುವಟಿಕೆಗಳು ಕೂಡಲೇ ಸ್ಥಗಿತಗೊಳ್ಳಬೇಕು.

ಚಿತ್ರದುರ್ಗ ಆ. 11 

ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್

ಹಿಂದುಗಳ ಶ್ರದ್ಧಾ ಕೇಂದ್ರ ಧರ್ಮಸ್ಥಳದಲ್ಲಿ ತನಿಖೆಯ ಹೆಸರಲ್ಲಿ ನಡೆಯುತ್ತಿರುವ ಧರ್ಮ ದ್ರೋಹಿ ಚಟುವಟಿಕೆಗಳು ಕೂಡಲೇ  ಸ್ಥಗಿತಗೊಳ್ಳಬೇಕು ಎಂದು ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್ ಲಿಂಗಮೂರ್ತಿ ಒತ್ತಾಯಿಸಿದ್ದಾರೆ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಕುರಿತು ಸೋಮವಾರ ಮಾತನಾಡಿದ ಅವರು ಎಸ್‍ಐಟಿ ನಡೆಸುತ್ತಿರುವ ತನಿಖೆ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ ಶ್ರದ್ಧೆಗೆ ಅಪಚಾರ ಎತ್ತಾಗುವಂತಿದೆ. ಅಸಮರ್ಪಕವಾದ ತನಿಕೆಯನ್ನ ಕೂಡಲೇ ಸ್ಥಗಿತಗೊಳಿಸಿ ಇಲ್ಲಿಯವರೆಗೆ ನಡೆಸಿರುವ ತನಿಖೆಯ ಕುರಿತು ಮಧ್ಯಂತರ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು. ಪಿ ಎಫ್ ಐ ಸೇರಿದಂತೆ ಮತಾಂತರ ಶಕ್ತಿಗಳು ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಅಪಪ್ರಚಾರದಲ್ಲಿ ತೊಡಗಿದ್ದು ಸದ್ಯ ನಡೆಯುತ್ತಿರುವ ತನಿಖೆ ಕೂಡ ಅದಕ್ಕೆ ಪುಷ್ಟಿ ಕೊಡುವಂತಿದೆ. ಅನಾಮಿಕ ದೂರುದಾರನ ಹೆಸರಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ತೇಜೋವದೆ ಮಾಡಲಾಗುತ್ತಿದೆ. ಸರ್ಕಾರದ ಇಂತಹ ವ್ಯವಸ್ಥೆ ಧರ್ಮಸ್ಥಳದ ಅಸಂಖ್ಯಾತ ಭಕ್ತರು ಹಾಗೂ ಹಿಂದುಗಳಿಗೆ ನೋವು ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಹಾಗೂ ಕಾರ್ಮಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ಅಪಪ್ರಚಾರವನ್ನು ಸಹಿಸಲು ಸಾಧ್ಯವಿಲ್ಲ. ತಕ್ಷಣ ಸರ್ಕಾರ ಧರ್ಮಸ್ಥಳ ಕ್ಷೇತ್ರದ ಗೌರವ ಸಂರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು. ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗದಿದ್ದರೆ ಹೊಸದುರ್ಗದಿಂದ ಧರ್ಮಸ್ಥಳಕ್ಕೆ ಅಸಂಖ್ಯಾತ ಭಕ್ತರೊಂದಿಗೆ ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟನೆಗೆ ಮುಂದಾಗುತ್ತೇವೆ. ಮುಂದಿನ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಸ್ ಲಿಂಗಮೂರ್ತಿ ಎಚ್ಚರಿಕೆ ನೀಡಿದರು.

Views: 2

Leave a Reply

Your email address will not be published. Required fields are marked *