ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಮೇ. 29 ಉತ್ತಮ ಗುಣಮಟ್ಟದ ಔಷಧಿಗಳು ಕಡಿಮೆ ಬೆಲೆಗೆ ದೊರೆಯುತ್ತಿರುವ, ಬಡ ರೋಗಿಗಳಿಗೆ ಸಹಾಯ ವಾಗುತ್ತಿರುವ ರಾಜ್ಯದಲ್ಲಿನ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಜಿಲ್ಲಾ ಬಿಜೆಪಿ ವಕ್ತಾರ ನಾಗರಾಜ್ ಬೇದ್ರೇ ಖಂಡಿಸಿದ್ದಾರೆ.
ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು ಖಾಸಗಿ ಔಷಧಿ ಸಂಸ್ಥೆಗಳ ಒತ್ತಡಕ್ಕೆ ಮಣಿದು ಕಾಂಗ್ರೆಸ್ ಸರ್ಕಾರ ಜನೌಷಧಿ
ಕೇಂದ್ರಗಳನ್ನು ಮುಚ್ಚುವ ಮೂಲಕ ಬಡವರಿಗೆ ಅನ್ಯಾಯ ಮಾಡಲು ಹೊರಟಿದೆ. ರಾಜಕೀಯ ದುರುದ್ದೇಶದ ಸರ್ಕಾರದ ಈ
ತೀರ್ಮಾನ ರಾಜ್ಯದ ಬಡ ರೋಗಿಗಳಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಮಾರಕವಾಗಿದೆ. ಇರುವ ಜನೌಷಧಿ ಕೇಂದ್ರಗಳನ್ನು
ಮುಚ್ಚದೆ, ಮತ್ತಷ್ಟು ಕೇಂದ್ರಗಳನ್ನು ತೆರೆಯಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಈಗಾಗಲೇ ರಾಜ್ಯದ ಅನೇಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿದ್ದ ಪ್ರಧಾನ ಮಂತ್ರಿ
ಜನೌಷಧಿ ಕೇಂದ್ರಗಳನ್ನು ಮುಚ್ಚಿರುವ ಸರ್ಕಾರ ಬಡವರಿಗೆ ಅನ್ಯಾಯ ಮಾಡಿದೆ. ಪ್ರಸ್ತುತ ಆರೋಗ್ಯ ಸೇವೆಯ ವೆಚ್ಚ, ಔಷಧಿ ಬೆಲೆ
ದುಬಾರಿಯಾಗಿ ಜನ ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ ಬಡಜನರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಔಷಧಿ
ಹಾಗೂ ಸರ್ಜಿಕಲ್ ಐಟಂಗಳು ದೊರೆಯಬೇಕು ಆಶಯದಿಂದ ಕೇಂದ್ರ ಸರ್ಕಾರ ಜನೋಪಯೋಗಿ ಪ್ರಧಾನ ಮಂತ್ರಿ ಜನೌಷಧಿ
ಕೇಂದ್ರಗಳನ್ನು ಸ್ಥಾಪನೆ ಮಾಡಿದೆ. ಆದರೆ ರಾಜ್ಯ ಸರ್ಕಾರ ಇಂತಹ ಔಷಧಿ ಕೇಂದ್ರಗಳನ್ನು ಮುಚ್ಚುವ ಮೂಲಕ ತಳಸಮುದಾಯ
ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ನೋವು ಉಂಟಾಗುತ್ತದೆ. ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟರೆ ಸರ್ಕಾರದ
ವಿರುದ್ಧ ಬಿಜೆಪಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1