ಚಿತ್ರದುರ್ಗದಲ್ಲಿ ಜ.10ರಂದು ನಿವೃತ್ತ ನೌಕರರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ.

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್

ಚಿತ್ರದುರ್ಗ, ಜ.06:
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ (ರಿ) ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ನಿವೃತ್ತ ನೌಕರರ ದಿನಾಚರಣೆ, ಪೌರ ಕಾರ್ಮಿಕರು ಹಾಗೂ ಸಂಘದ ಸದಸ್ಯರಿಗೆ ಸನ್ಮಾನ ಸಮಾರಂಭ, 2026ನೇ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಅಭಿನಂದನೆ ಕಾರ್ಯಕ್ರಮವನ್ನು ಜ.10ರ ಶನಿವಾರ ಬೆಳಿಗ್ಗೆ 10.30ಕ್ಕೆ ನಗರದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಕಾರ್ಯಕಾರಿ ಮಂಡಳಿ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸರ್ಕಾರಿ ಸೇವೆಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ನಿವೃತ್ತ ಜೀವನದಲ್ಲೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ನೌಕರರನ್ನು ಗೌರವಿಸುವುದೇ ಈ ದಿನಾಚರಣೆಯ ಪ್ರಮುಖ ಆಶಯವಾಗಿದೆ. ಜೊತೆಗೆ, ನಗರ ಸ್ವಚ್ಛತೆ ಮತ್ತು ಸಾರ್ವಜನಿಕ ಸೇವೆಯಲ್ಲಿ ನಿರಂತರ ಶ್ರಮಿಸುತ್ತಿರುವ ಪೌರ ಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಅವರ ಸೇವೆಗೆ ಗೌರವ ಸಲ್ಲಿಸಲಾಗುತ್ತದೆ.


ಕಾರ್ಯಕ್ರಮವನ್ನು ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಗೋವಿಂದ.ಎಂ. ಕಾರಜೋಳ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಿ.ಪಿ.ಪ್ರೇಮನಾಥ್ ವಹಿಸಲಿದ್ದಾರೆ. 2026ನೇ ನೂತನ ವರ್ಷದ ಕ್ಯಾಲೆಂಡರ್‌ನ್ನು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ.


ಪೌರ ಕಾರ್ಮಿಕರಿಗೆ ಸನ್ಮಾನವನ್ನು ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ ನೆರವೇರಿಸಲಿದ್ದು, ಸಮಾಜದ ಹಿಂದುಳಿದ ವರ್ಗಗಳ ಅಭಿವೃದ್ಧಿ ಮತ್ತು ಕಾರ್ಮಿಕರ ಹಿತಾಸಕ್ತಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ಅವರು ಮಾತನಾಡಲಿದ್ದಾರೆ.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ರಾಷ್ಟ್ರೀಯ ಹೆದ್ದಾರಿಯ ನಿವೃತ್ತ ಮುಖ್ಯ ಇಂಜಿನಿಯರ್ ಕೆ.ಜಿ. ಜಗದೀಶ್, ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಕೇಂದ್ರ ಸಂಘದ ಜಂಟಿ ಕಾರ್ಯದರ್ಶಿ ಎಸ್.ಕೆ. ನಾಗೇಂದ್ರ, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ಶಿವಕುಮಾರ್ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೈಶಾಲಿ ಜೆ. ಭಾಗವಹಿಸಲಿದ್ದಾರೆ.


ಈ ಸಮಾರಂಭದ ವಿಶೇಷ ಆಕರ್ಷಣೆಯಾಗಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಆರ್. ಮಂಜುನಾಥ, ಅಂತರಾಷ್ಟ್ರೀಯ ರೋಟರಿ ಸೇವಾಸಂಘದ ರಾಜ್ಯಪಾಲರಾದ ಎಂ.ಕೆ. ರವೀಂದ್ರ ಹಾಗೂ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆ. ಮಲ್ಲೇಶಪ್ಪ ಅವರನ್ನು ಅಭಿನಂದಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ಸೇವೆ ಹಾಗೂ ಸಾಧನೆಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಗುತ್ತದೆ.


ನಿವೃತ್ತ ಪ್ರಾಂಶುಪಾಲರು ಹಾಗೂ ಚಿಂತಕರಾದ ಡಾ. ಜಿ.ಎನ್. ಮಲ್ಲಿಕಾರ್ಜುನಪ್ಪ ಅವರು ಸಮಾರಂಭದಲ್ಲಿ ಹಿತನುಡಿಗಳನ್ನು ನುಡಿಯಲಿದ್ದು, ನಿವೃತ್ತ ಜೀವನವನ್ನು ಅರ್ಥಪೂರ್ಣವಾಗಿ ಸಮಾಜದ ಸೇವೆಗೆ ಬಳಸಿಕೊಳ್ಳುವ ಕುರಿತು ಪ್ರೇರಣಾದಾಯಕ ಸಂದೇಶ ನೀಡಲಿದ್ದಾರೆ. ಸಂಘದ ಗೌರವಾಧ್ಯಕ್ಷರಾದ ವೈ. ಚಂದ್ರಶೇಖರಯ್ಯ ಹಾಗೂ ಸಾಂಸ್ಕೃತಿಕ ಮತ್ತು ಮನರಂಜನಾ ಕೇಂದ್ರದ ಅಧ್ಯಕ್ಷರಾದ ಟಿ.ಆರ್. ಮಂಜುನಾಥ್ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.


ನಿವೃತ್ತ ನೌಕರರು, ಸಾರ್ವಜನಿಕರು ಹಾಗೂ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

Views: 91

Leave a Reply

Your email address will not be published. Required fields are marked *